ರೈಲ್ವೆ ಸಚಿವ ಸೋಮಣ್ಣ 
ರಾಜ್ಯ

ಬೆಂಗಳೂರು-ತುಮಕೂರು ನಡುವೆ ಶೀಘ್ರವೇ ದೈನಂದಿನ ರೈಲು ಸಂಚಾರ: ಸಚಿವ ಸೋಮಣ್ಣ

ತುಮಕೂರು ನಿಲ್ದಾಣವನ್ನು ವಿಶ್ವ ದರ್ಜೆಯ ಟರ್ಮಿನಲ್ ಆಗಿ ಮೇಲ್ದರ್ಜೆಗೇರಿಸಲು ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ನೀಲನಕ್ಷೆ ಸಿದ್ಧಪಡಿಸಲಾಗುತ್ತಿದೆ ಎಂದರು.

ತುಮಕೂರು: ನಿವಾಸಿಗಳ ಬಹುದಿನಗಳ ಬೇಡಿಕೆಯಾದ ಬೆಂಗಳೂರು-ತುಮಕೂರು ನಡುವೆ ಮೆಮು ದೈನಂದಿನ ರೈಲು ಸೇವೆಯನ್ನು ಶೀಘ್ರದಲ್ಲೇ ಪರಿಚಯಿಸಲಾಗುವುದು ಎಂದು ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ಈ ರೈಲು ಸಂಚಾರದಿಂದ ವಿಶೇಷವಾಗಿ ಸಾವಿರಾರು ವಿದ್ಯಾರ್ಥಿಗಳು, ಕಚೇರಿಗೆ ಹೋಗುವವರು ಮತ್ತು ಕಾರ್ಖಾನೆಯ ಉದ್ಯೋಗಿಗಳಿಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ತುಮಕೂರು ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ತುಮಕೂರು ನಿಲ್ದಾಣವನ್ನು ವಿಶ್ವ ದರ್ಜೆಯ ಟರ್ಮಿನಲ್ ಆಗಿ ಮೇಲ್ದರ್ಜೆಗೇರಿಸಲು ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ನೀಲನಕ್ಷೆ ಸಿದ್ಧಪಡಿಸಲಾಗುತ್ತಿದೆ ಎಂದರು. ರಸ್ತೆ ಮತ್ತು ರೈಲು ಬಳಕೆದಾರರ ಸುರಕ್ಷತೆಯನ್ನು ಹೆಚ್ಚಿಸಲು ತುಮಕೂರು ನಗರದಲ್ಲಿ ಐದು ರೋಡ್ ಓವರ್ ಬ್ರಿಡ್ಜ್‌ಗಳನ್ನು ಅಂದಾಜು 350 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

ಚಿತ್ರದುರ್ಗದ ಮೂಲಕ ತುಮಕೂರು-ದಾವಣಗೆರೆ ಮಾರ್ಗ ಮತ್ತು ತುಮಕೂರು-ರಾಯದುರ್ಗ ಮಾರ್ಗ ಹಾಗೂ ಕರ್ನಾಟಕದ ಇತರ ಭಾಗಗಳಿಗೆ ನಗರದ ಸಂಪರ್ಕವನ್ನು ಸುಧಾರಿಸಲು ಪ್ರಮುಖವಾಗಿವೆ. ಇವುಗಳನ್ನು ಕ್ರಮವಾಗಿ 2,140 ಕೋಟಿ ಮತ್ತು 2,500 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಈ ಎರಡು ಯೋಜನೆಗಳಿಗೆ ರಾಜ್ಯ ಸರ್ಕಾರ ಶೀಘ್ರವಾಗಿ ಭೂಸ್ವಾಧೀನಕ್ಕೆ ಅನುಕೂಲ ಮಾಡಿಕೊಡಬೇಕು ಎಂದರು. ಕೆಎಸ್‌ಆರ್ ಬೆಂಗಳೂರು-ಧಾರವಾಡ ರೈಲು ಸಂಖ್ಯೆ. 20662) ತುಮಕೂರಿಗೆ ಬೆಳಗ್ಗೆ 6.32ಕ್ಕೆ ಆಗಮಿಸಿ 6.34ಕ್ಕೆ ಹೊರಡಲಿದೆ ಎಂದು ಪ್ರಕಟಣೆ ತಿಳಿಸಿದೆ. ಧಾರವಾಡ-ಕೆಎಸ್‌ಆರ್ ಬೆಂಗಳೂರು (ರೈಲು ಸಂಖ್ಯೆ 20662) ಸಂಜೆ 6.18ಕ್ಕೆ ಆಗಮಿಸಿ 6.20ಕ್ಕೆ ಹೊರಡಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT