ಎನ್. ಮಹೇಶ್  
ರಾಜ್ಯ

ಕೊಳ್ಳೇಗಾಲ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಮನೆಯಲ್ಲಿ ಕಳ್ಳತನ!

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಆದರ್ಶ ಬಡಾವಣೆಯ ನಿವಾಸದಲ್ಲಿ ಕಳ್ಳತನದ ಕೃತ್ಯ ನಡೆದಿದೆ. ಶುಕ್ರವಾರ ಸಂಜೆ ತನಕ ಮನೆಯಲ್ಲಿದ್ದ ಎನ್.ಮಹೇಶ್ ಅವರು ಬಳಿಕ ಬೆಂಗಳೂರಿಗೆ ತೆರಳಿದ್ದರು.

ಚಾಮರಾಜನಗರ: ಮಾಜಿ ಶಿಕ್ಷಣ ಸಚಿವ, ಮಾಜಿ ಶಾಸಕ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್ ಕೊಳ್ಳೇಗಾಲದ ಮನೆಯಲ್ಲಿ ಕಳ್ಳತನವಾಗಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಆದರ್ಶ ಬಡಾವಣೆಯ ನಿವಾಸದಲ್ಲಿ ಕಳ್ಳತನದ ಕೃತ್ಯ ನಡೆದಿದೆ. ಶುಕ್ರವಾರ ಸಂಜೆ ತನಕ ಮನೆಯಲ್ಲಿದ್ದ ಎನ್.ಮಹೇಶ್ ಅವರು ಬಳಿಕ ಬೆಂಗಳೂರಿಗೆ ತೆರಳಿದ್ದರು.

ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಳ್ಳರು ರಾತ್ರಿ ಮನೆಗೆ‌ ನುಗ್ಗಿ ಕಳ್ಳತನ ಮಾಡಿದ್ದಾರೆ. ನೆರೆ ಮನೆಯವರಿಂದ ಮನೆಗೆ ಕನ್ನ ಹಾಕಿರುವುದು ಬೆಳಕಿಗೆ ಬಂದಿದೆ. ಬಾಗಿಲ ಬೀಗ ಮುರಿದು ಸಚಿವನ ಮನೆಗೆ ನುಗ್ಗಿ ಮನೆಯಲ್ಲಿದ್ದ 50 ಸಾವಿರ ರೂ. ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ತನಿಖೆ ನಂತರ ಕಳುವಿನ ಬಗ್ಗೆ ಹೆಚ್ಚು ಮಾಹಿತಿ ತಿಳಿಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!