ಎಂ.ಬಿ.ಪಾಟೀಲ್ 
ರಾಜ್ಯ

KIADB ನಿಯಮಗಳ ಪ್ರಕಾರವೇ ಖರ್ಗೆ ಪುತ್ರನ ಟ್ರಸ್ಟ್ ಗೆ ಸಿಎ ನಿವೇಶನ ಮಂಜೂರು: ಎಂ.ಬಿ ಪಾಟೀಲ್

ಏರೋಸ್ಪೇಸ್ ಪಾರ್ಕ್‌ನಲ್ಲಿ ಕಾನೂನು ಪ್ರಕಾರವೇ ನಿಗದಿತ ಬೆಲೆಗೆ ಸಿಎ ಪ್ಲಾಟ್ ಅನ್ನು ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಮಂಜೂರು ಮಾಡಲಾಗಿದೆ ಎಂದರು.

ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ(KIADB)ಯ ನಿಯಮಗಳ ಪ್ರಕಾರವೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ನೇತೃತ್ವದ ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಸಿಎ ನಿವೇಶನ ಮಂಜೂರು ಮಾಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು ಸೋಮವಾರ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಏರೋಸ್ಪೇಸ್ ಪಾರ್ಕ್‌ನಲ್ಲಿ ಕಾನೂನು ಪ್ರಕಾರವೇ ನಿಗದಿತ ಬೆಲೆಗೆ ಸಿಎ ಪ್ಲಾಟ್ ಅನ್ನು ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಮಂಜೂರು ಮಾಡಲಾಗಿದೆ ಎಂದರು.

ಬಿಜೆಪಿ ನಾಯಕ ಲೆಹರ್ ಸಿಂಗ್ ಸಿರೋಯಾ ಅವರ ಆರೋಪಗಳನ್ನು ತಳ್ಳಿಹಾಕಿದ ಎಂಬಿ ಪಾಟೀಲ್ ಅವರು, ಪ್ರಕ್ರಿಯೆಯಲ್ಲಿ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಪ್ರತಿಪಾದಿಸಿದರು.

"ರಾಹುಲ್ ಖರ್ಗೆ ಅವರು ಐಐಟಿ ಪದವೀಧರರಾಗಿದ್ದು, ಅವರು ಮಂಜೂರು ಮಾಡಿದ ಭೂಮಿಯಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವನ್ನು ಸ್ಥಾಪಿಸುವ ಉದ್ದೇಶವನ್ನು ವ್ಯಕ್ತಪಡಿಸಿದ್ದಾರೆ. ಅವರ ಕುಟುಂಬವು ವಿವಿಧ ಶೈಕ್ಷಣಿಕ ಚಟುವಟಿಕೆಗಳಲ್ಲಿ ದೀರ್ಘಕಾಲದ ತೊಡಗಿಸಿಕೊಂಡಿದೆ. ಕೆಐಎಡಿಬಿ ನಿಯಮಗಳ ಪ್ರಕಾರ ಸಿಎ ನಿವೇಶನಗಳಲ್ಲಿ, ಆರ್ & ಡಿ ಕೇಂದ್ರಗಳನ್ನು ಸ್ಥಾಪಿಸಲು, ಉತ್ಕೃಷ್ಟತೆಯ ಕೇಂದ್ರಗಳು, ತಾಂತ್ರಿಕ ಸಂಸ್ಥೆಗಳು, ಕೌಶಲ್ಯ ಅಭಿವೃದ್ಧಿ ಕೇಂದ್ರಗಳು, ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು, ಆಸ್ಪತ್ರೆಗಳು, ಹೋಟೆಲ್‌ಗಳು, ಪೆಟ್ರೋಲ್ ಬಂಕ್‌ಗಳು, ಕ್ಯಾಂಟೀನ್‌ಗಳು ಮತ್ತು ವಸತಿ ಸೌಲಭ ಇತ್ಯಾದಿಗಳ ಅಭಿವೃದ್ಧಿಗೆ ಅವಕಾಶ ಇದೆ. ಯಾವುದೇ ಆಸಕ್ತರು ಮತ್ತು ಅರ್ಹರು ಇದಕ್ಕೆ ಅರ್ಜಿ ಸಲ್ಲಿಸಬಹುದು. ರಾಜ್ಯ ಮಟ್ಟದ ಏಕಗವಾಕ್ಷಿ ಶಿಫಾರಸಿನ ನಂತರ ಸಿಎ ನಿವೇಶನಗಳನ್ನು ಮಾಡಲಾಗುತ್ತದೆ’’ ಎಂದು ಪಾಟೀಲ್ ಹೇಳಿದರು.

ರಾಹುಲ್ ಖರ್ಗೆ ಅವರಿಗೆ ಏರೋಸ್ಪೇಸ್ ಪಾರ್ಕ್‌ನಲ್ಲಿ ಕೈಗಾರಿಕಾ ನಿವೇಶನ ನೀಡಿಲ್ಲ. ಆದರೆ ಯಾವುದೇ ರಿಯಾಯಿತಿಗಳನ್ನು ನೀಡದೆ, ನಿಗದಿತ ಬೆಲೆಯಲ್ಲಿ ಆರ್ & ಡಿ ಕೇಂದ್ರವನ್ನು ಸ್ಥಾಪಿಸಲು ಸಿಎ ನಿವೇಶನ ನಿಡಲಾಗಿದೆ ಎಂದರು.

ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಕೈಗಾರಿಕಾ ಪ್ರದೇಶದಲ್ಲಿ 116 ಎಕರೆ ಭೂಮಿಯನ್ನು ಕೇವಲ 50 ಕೋಟಿ ರೂ.ಗೆ ಮಂಜೂರು ಮಾಡಿದ್ದು, ಇದರಿಂದ ರಾಜ್ಯದ ಬೊಕ್ಕಸಕ್ಕೆ 137 ಕೋಟಿ ರೂ.ನಷ್ಟವಾಗಿದೆ. ಈ ಬಗ್ಗೆಯೂ "ಲೆಹರ್ ಸಿಂಗ್ ಚಕಾರ ಎತ್ತಬಹುದಲ್ಲವೇ ಎಂದು ಎಂದು ಎಂಬಿ ಪಾಟೀಲ್ ಪ್ರಶ್ನಿಸಿದರು.

ಈ ಹಿಂದೆ ಕೆಐಎಡಿಬಿಯೇ ಸಿಎಂ ನಿವೇಶನಗಳನ್ನು ಹಂಚಿಕೆ ಮಾಡುತ್ತಿತ್ತು. ಆದರೆ ನಾನು ಅಧಿಕಾರ ವಹಿಸಿಕೊಂಡ ನಂತರ ಹೆಚ್ಚು ಪಾರದರ್ಶಕ ವ್ಯವಸ್ಥೆ ಜಾರಿಗೊಳಿಸಲಾಗಿದ್ದು, ರಾಜ್ಯ ಮಟ್ಟದ ಏಕ ಗವಾಕ್ಷಿ ಸಮಿತಿ ಅನುಮೋದನೆಯ ನಂತರವೇ ಸಿಎ ನಿವೇಶನಗಳನ್ನು ಹಂಚಿಕೆ ಮಾಡಲಾಗುತ್ತದೆ ಎಂದು ಸಚಿವರು ಒತ್ತಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT