ಸಿಎಂ ಸಿದ್ದರಾಮಯ್ಯ 
ರಾಜ್ಯ

ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ, ಹಣಕಾಸಿನ ನೆರವು: ಸಿಎಂ ಸಿದ್ದರಾಮಯ್ಯ

ವೇದಿಕೆಯಲ್ಲೇ ಜಯದೇವ ನಿರ್ದೇಶಕರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿಗಳು, ಇನ್ನು ಮುಂದೆ ದಿನದ 24 ಗಂಟೆ ಜಯದೇವದಲ್ಲಿ ಎಲ್ಲಾ ರೀತಿಯ ಆರೋಗ್ಯ ಸೇವೆ ಒದಗಿಸಬೇಕು. ಇದಕ್ಕೆ ತಕ್ಕ ಸಿದ್ದತೆಗಳನ್ನು ಮಾಡಿಕೊಳ್ಳಿ ಎನ್ನುವ ಸೂಚನೆ ನೀಡಿದರು.

ಬೆಂಗಳೂರು: ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತಿಳಿಸಿದ್ದಾರೆ.

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ ಆಸ್ಪತ್ರೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ವೇದಿಕೆಯಲ್ಲೇ ಜಯದೇವ ನಿರ್ದೇಶಕರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿಗಳು, ಇನ್ನು ಮುಂದೆ ದಿನದ 24 ಗಂಟೆ ಜಯದೇವದಲ್ಲಿ ಎಲ್ಲಾ ರೀತಿಯ ಆರೋಗ್ಯ ಸೇವೆ ಒದಗಿಸಬೇಕು. ಇದಕ್ಕೆ ಸರ್ಕಾರದಿಂದ ಅಗತ್ಯ ಸಿಬ್ಬಂದಿ ಮತ್ತು ಹಣಕಾಸಿನ ನೆರವು ಒದಗಿಸಲಾಗುವುದು ಎಂದರು.

ಸರ್ಕಾರಿ ಆಸ್ಪತ್ರೆ ವೈದ್ಯರು ಖಾಸಗಿ ಆಸ್ಪತ್ರೆ ವೈದ್ಯರಿಗಿಂತ ಯಾವುದರಲ್ಲೂ ಕಡಿಮೆ ಇಲ್ಲ. ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಗುಣಮಟ್ಟದಲ್ಲಿರಬೇಕು ಎನ್ನುವುದು ಸರ್ಕಾರದ ಗುರಿಯಾಗಿದೆ. ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟ ಮತ್ತು ಶುಚಿತ್ವ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಬರಬೇಕು. ಆಗ ಮಾತ್ರ ಸರ್ಕಾರ ಕೊಡುವ ಅನುದಾನಕ್ಕೆ ಅರ್ಥ ಬರುತ್ತದೆ ಎಂದರು.

ಖಾಸಗಿ ಆಸ್ಪತ್ರೆಗಳ ಗುಣಮಟ್ಟ ಮತ್ತು ಶುಚಿತ್ವ ಸರ್ಕಾರಿ ಆಸ್ಪತ್ರೆಗಳಲ್ಲೂ ಇರುವಂತೆ ನೋಡಿಕೊಳ್ಳಲು ಅಗತ್ಯ ಅನುದಾನ ಕೊಡುತ್ತಲೇ ಇದ್ದೇವೆ. ಆಸ್ಪತ್ರೆಯ ಆಡಳಿತ ಪಾರದರ್ಶಕವಾಗಿ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ, ಸೇವೆ ಸಲ್ಲಿಸಿದರೆ ಇದು ಸಾಧ್ಯವಿದೆ. ಅಪಘಾತ ವಲಯಗಳ ಹತ್ತಿರದಲ್ಲೇ ಟ್ರಾಮಾ ಸೆಂಟರ್ ಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಗಾಯಾಳುಗಳ ಜೀವ ಉಳಿಸಲು ಗೋಲ್ಡನ್ ಹವರ್ ಬಹಳ ಮುಖ್ಯ ಎನ್ನುವುದನ್ನು ಪರಿಗಣಿಸಿ ಸರ್ಕಾರ ಈ ಕಾರ್ಯಕ್ಕೆ ಮುಂದಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಬಜೆಟ್ ನಲ್ಲಿ ಘೋಷಿಸಿರುವ ಎಲ್ಲಾ ಕಾರ್ಯಕ್ರಮಗಳನ್ನು ಜವಾಬ್ದಾರಿಯಿಂದ ಜಾರಿ ಮಾಡಿ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಅವರಿಗೆ ವೇದಿಕೆಯಿಂದಲೇ ಸೂಚಿಸಿದ ಮುಖ್ಯಮಂತ್ರಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಿಟ್ಟ ಬೇಡಿಕೆಗಳನ್ನು ಅನುಮೋದಿಸಿ ಹಣ ಬಿಡುಗಡೆ ಮಾಡಿದ್ದೇನೆ. ನೂತನ ಆಸ್ಪತ್ರೆ ಕಟ್ಟಡವನ್ನೂ ನಾನೇ ಉದ್ಘಾಟಿಸುತ್ತೇನೆ. ಬೇಗ ಕೆಲಸ ಮುಗಿಸಿ ಎಂದು ಸಚಿವರಿಗೆ ಸೂಚನೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT