ಬಿಬಿಎಂಪಿ 
ರಾಜ್ಯ

ಬೆಂಗಳೂರು: ಬಾಡಿಗೆ ಕಟ್ಟದ 2 ಅಂಚೆ ಕಚೇರಿಗಳಿಗೆ ಬೀಗ ಜಡಿದ BBMP

ಸೇಂಟ್ ಜಾನ್ಸ್ ರಸ್ತೆಯಲ್ಲಿ ಬಿಬಿಎಂಪಿ ಸ್ವತ್ತಿನ 1,665 ಚದರಡಿ ವಿಸ್ತೀರ್ಣದ ಮಳಿಗೆ ಯಲ್ಲಿರುವ ಅಂಚೆ ಕಚೇರಿ 2014ರ ಏಪ್ರಿಲ್‌ನಿಂದಲೂ ಹಳೆಯ ಬಾಡಿಗೆಯನ್ನೇ ಪಾವತಿಸುತ್ತಿದೆ.

ಬೆಂಗಳೂರು: ಲಕ್ಷಾಂತರ ರುಪಾಯಿ ಕಟ್ಟಡ ಬಾಡಿಗೆ ಪಾವತಿಸದೇ ಬಾಕಿ ಉಳಿಸಿಕೊಂಡ ನಗರದ 2 ಅಂಚೆ ಕಚೇರಿಗಳಿಗೆ ಬಿಬಿಎಂಪಿ ಬೀಗ ಹಾಕಿದೆ.

ಸೇಂಟ್ ಜಾನ್ಸ್ ರಸ್ತೆಯಲ್ಲಿ ಬಿಬಿಎಂಪಿ ಸ್ವತ್ತಿನ 1,665 ಚದರಡಿ ವಿಸ್ತೀರ್ಣದ ಮಳಿಗೆ ಯಲ್ಲಿರುವ ಅಂಚೆ ಕಚೇರಿ 2014ರ ಏಪ್ರಿಲ್‌ನಿಂದಲೂ ಹಳೆಯ ಬಾಡಿಗೆಯನ್ನೇ ಪಾವತಿಸುತ್ತಿದೆ. ಪರಿಷ್ಕೃತ ಬಾಡಿಗೆ ಪಾವತಿಸಲು ಹಲವು ಬಾರಿ ನೋಟಿಸ್‌ ನೀಡಿದ್ದರೂ ಸ್ಪಂದಿಸಿರಲಿಲ್ಲ. ಒಟ್ಟು 88.91 ಲಕ್ಷ ರೂ.ಬಾಡಿಗೆ ಬಾಕಿ ಇದೆ. ಹೀಗಾಗಿ, ಪೂರ್ವ ವಲಯ ಆಯುಕ್ತರ ಆದೇಶದಂತೆ ಪಾಲಿಕೆ ಸಿಬ್ಬಂದಿ ಸೋಮವಾರ ಬೆಳಿಗ್ಗೆ ಮಳಿಗೆಗೆ ಬೀಗ ಹಾಕಿದ್ದಾರೆ.

ವಸಂತನಗರ ಮಾರುಕಟ್ಟೆಯ ನೆಲ ಅಂತಸ್ತಿನಲ್ಲಿ 214 ಚದರಡಿ ಯಲ್ಲಿರುವ ಅಂಚೆ ಕಚೇರಿಯು 2016ರ ಜನವರಿಯಿಂದ ಪರಿಷ್ಕೃತ ಬಾಡಿಗೆಯನ್ನು ಪಾವತಿ ಸಿರಲಿಲ್ಲ. 10.80 ಲಕ್ಷ ರೂ. ಬಾಕಿ ಇದೆ. ಹೀಗಾಗಿ, ಸೋಮವಾರ ಬೆಳಿಗ್ಗೆ ಈ ಮಳಿಗೆಗೂ ಪಾಲಿಕೆ ಸಿಬ್ಬಂದಿ ಬೀಗ ಹಾಕಿದ್ದಾರೆ ಎಂದು ಪಾಲಿಕೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ