ಸಂಗ್ರಹ ಚಿತ್ರ 
ರಾಜ್ಯ

Muda scam: ಸಿದ್ದುಗೆ ಬೆಂಬಲ ವ್ಯಕ್ತಪಡಿಸಿ ಫ್ರೀಡಂ ಪಾರ್ಕ್'ನಲ್ಲಿಂದು ಬೃಹತ್ ಪ್ರತಿಭಟನೆ, ಬೆಂಗಳೂರಿಗರೇ ಮನೆ ಬಿಡೋ ಮುನ್ನ ಎಚ್ಚರ..!

ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ರಾಜಭವನ ಚಲೋಗೆ ಕರೆ ನೀಡಲಾಗಿದ್ದು, ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನರು ಆಗಮಿಸುತ್ತಿದ್ದಾರೆ.

ಬೆಂಗಳೂರು: ಮುಡಾ ಅವ್ಯವಹಾರ ಆರೋಪ ಪ್ರಕರಣ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಹಗರಣ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿರೋಧ ಪಕ್ಷಗಳು ಮುಗಿಬಿದ್ದಿರುವ ನಡುವಲ್ಲೇ ಸಿಎಂ ಬೆಂಬಲಕ್ಕೆ ಶೋಷಿತ ವರ್ಗಗಳ ಒಕ್ಕೂಟ ನಿಂತಿದೆ.

ಇಂದು ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ರಾಜಭವನ ಚಲೋಗೆ ಕರೆ ನೀಡಲಾಗಿದ್ದು, ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನರು ಆಗಮಿಸುತ್ತಿದ್ದಾರೆ. ರೈಲು, ಬಸ್ ಮಾರ್ಗವಾಗಿ ಫ್ರೀಡಂಪಾರ್ಕ್ ತಲುಪುತ್ತಿದ್ದಾರೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆಗಳಿದ್ದು, ಪರ್ಯಾಯ ಮಾರ್ಗಗಳ ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ 1 ಲಕ್ಷಕ್ಕೂ ಅಧಿಕ ಜನ ಆಗಮಿಸುವ ನಿರೀಕ್ಷೆ ಇದೆ. ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್‌ವರೆಗೆ ಮೊದಲು ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 11.30ಕ್ಕೆ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿ, ಬಳಿಕ ರಾಜಭವನ ಚಲೋ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ. ಇನ್ನು ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರ ಪಾಲ್ಗೊಳ್ಳುವಿಕೆ ಇನ್ನೂ ಖಚಿತವಾಗಿಲ್ಲ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಂದ ಸೂಚನೆಗಳು ಸಿಗದ ಕಾರಣ, ಕೆಲ ನಾಯಕರು ವೈಯಕ್ತಿಕವಾಗಿ ಪ್ರತಭಟನೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಪ್ಪತಿಭಟನೆ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸರು ಸಾರ್ವಜನಿಕರಿಗೆ ಕೆಲ ಸೂಚನೆಗಳನ್ನು ನೀಡಿದ್ದಾರೆ. ಶೇಷಾದ್ರಿ ರಸ್ತೆಯ ಸುತ್ತಮುತ್ತ ಸಂಚಾರ ಸಲಹೆಯನ್ನು ನೀಡಿದ್ದಾರೆ, ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಸೂಕ್ತ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಿದ್ದಾರೆ.

ಮಂಗಳವಾರ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಶೇಷಾದ್ರಿ ರಸ್ತೆಯನ್ನು (ಖೋಡೆ ಸರ್ಕಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ) ಬಳಸದಂತೆ ಹಾಗೂ ಪರ್ಯಾಯ ರಸ್ತೆಗಳನ್ನು ಬಳಸುವಂತೆ ಸಲಹೆ ನೀಡಿದ್ದಾರೆ.

ಮಂಗಳವಾರ KPSC ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ನಿಗದಿತ ಸಮಯದೊಳಗೆ ಪರೀಕ್ಷಾ ಕೇಂದ್ರಗಳನ್ನು ತಲುಪುವಂತೆಯೂ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ, ಪ್ರತಿಭಟನೆಗೆ ಬರುವ ಬಸ್ಸುಗಳು ಮೇಖ್ರಿ ವೃತ್ತದ ಬಳಿ ಅರಮನೆ ಮೈದಾನದ ಗೇಟ್ ನಂ.1, 2 ಮತ್ತು 3ರಲ್ಲಿ ನಿಲ್ಲಿಸಬೇಕು. ಕಾರುಗಳು ಮತ್ತು ದ್ವಿಚಕ್ರ ವಾಹನಗಳನ್ನು ಫ್ರೀಡಂ ಪಾರ್ಕ್‌ನಲ್ಲಿರುವ MLCP ಪಾರ್ಕಿಂಗ್ ಸ್ಥಳದಲ್ಲಿ ಪೇ ಮತ್ತು ಪಾರ್ಕ್ ಆಧಾರದ ಮೇಲೆ ನಿಲ್ಲಿಸಬೇಕು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT