ಎಚ್.ಡಿ. ಕುಮಾರಸ್ವಾಮಿ 
ರಾಜ್ಯ

ಬೆಂಗಳೂರಿನ BHEL ವಿದ್ಯುನ್ಮಾನ ಘಟಕಕ್ಕೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಭೇಟಿ, ಪರಿಶೀಲನೆ

ದೇಶದ ಒಟ್ಟಾರೆ ಅಭಿವೃದ್ಧಿಗೆ ಪ್ರಧಾನಿ ದೊಡ್ಡ ದೊಡ್ಡ ಹೆಜ್ಜೆಗಳನ್ನು ಇಡುತ್ತಿದ್ದಾರೆ. ಸಾರ್ವಜನಿಕ ಸ್ವಾಮ್ಯದ ಉದ್ಯಮಗಳಿಗೆ ಕಾಯಕಲ್ಪ ನೀಡುವ ನಿಟ್ಟಿನಲ್ಲಿ ಎಲ್ಲಾ ಸಾಧ್ಯತೆಗಳನ್ನು ಮುಂದಿಟ್ಟುಕೊಂಡು ಪರಿಶೀಲನೆ.

ಬೆಂಗಳೂರು: ಪ್ರಧಾನಿಗಳ ಆತ್ಮನಿರ್ಭರ್ ಭಾರತ ಹಾಗೂ ಮೆಕ್ ಇನ್ ಇಂಡಿಯಾ ಪರಿಕಲ್ಪನೆಗಳು ಕೈಗಾರಿಕಾ ಕ್ಷೇತ್ರದ ಮೇಲೆ ಸಂಜೀವಿನಿಯಂತೆ ಸಕಾರಾತ್ಮಕ ಪರಿಣಾಮ ಬೀರುತ್ತಿವೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಮಂಗಳವಾರ ಹೇಳಿದ್ದಾರೆ.

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ (BHEL)ನ ವಿದ್ಯುನ್ಮಾನ ಘಟಕಕ್ಕೆ ಭೇಟಿ ನೀಡಿ, ಕಾರ್ಮಿಕರೊಂದಿಗೆ ಸಂವಾದ ನಡೆಸಿದ ಅವರು, ದೇಶದ ಒಟ್ಟಾರೆ ಅಭಿವೃದ್ಧಿಗೆ ಪ್ರಧಾನಿ ದೊಡ್ಡ ದೊಡ್ಡ ಹೆಜ್ಜೆಗಳನ್ನು ಇಡುತ್ತಿದ್ದಾರೆ. ಸಾರ್ವಜನಿಕ ಸ್ವಾಮ್ಯದ ಉದ್ಯಮಗಳಿಗೆ ಕಾಯಕಲ್ಪ ನೀಡುವ ನಿಟ್ಟಿನಲ್ಲಿ ಎಲ್ಲಾ ಸಾಧ್ಯತೆಗಳನ್ನು ಮುಂದಿಟ್ಟುಕೊಂಡು ಪರಿಶೀಲನೆ ನಡೆಸಲಾಗುತ್ತಿದೆ. ನಿರಂತರವಾಗಿ ಚರ್ಚೆಗಳನ್ನು ನಡೆಸಲಾಗುತ್ತಿದೆ ಎಂದು ಸಚಿವರು ಹೇಳಿದರು.

BHEL ಗೆ ಮತ್ತಷ್ಟು ಶಕ್ತಿ: ಪ್ರಧಾನಿ ಸ್ಪಷ್ಟ ಮತ್ತು ನಿಖರ ಗುರಿಗಳನ್ನು ಇಟ್ಟುಕೊಂಡಿದ್ದಾರೆ. ಭಾರತವನ್ನು ಮೂರನೇ ಬೃಹತ್ ಆರ್ಥಿಕ ಶಕ್ತಿಯನ್ನಾಗಿ ರೂಪಿಸುವುದು ಹಾಗೂ ಆರ್ಥಿಕ ವ್ಯವಸ್ಥೆಗೆ ಶಕ್ತಿ ತುಂಬಲು ಕೈಗಾರಿಕಾ ಉತ್ಪನ್ನವನ್ನು ಹೆಚ್ಚಳ ಮಾಡುವುದು ಅವರ ಉದ್ದೇಶವಾಗಿದೆ. ಅದಕ್ಕಾಗಿ ಅವರ ಕನಸಿನ ಮೆಕ್ ಇನ್ ಇಂಡಿಯಾ ಹಾಗೂ ಆತ್ಮನಿರ್ಭರ್ ಭಾರತ್ ಪರಿಕಲ್ಪನೆಗಳು ಹೆಚ್ಚು ಪರಿಣಾಮಕಾರಿ ಆಗಿವೆ. ಇದೇ ಪರಿಕಲ್ಪನೆ ಅಡಿಯಲ್ಲಿ ಭಾರತ್ ಹೆವಿ ಎಲೆಕ್ಟ್ರಿಕಲ್ ಕಾರ್ಖಾನೆಯನ್ನು ಮತ್ತಷ್ಟು ಸಶಕ್ತಗೊಳಿಸಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.

ದೇಶದ ಸಾರ್ವಜನಿಕ ಸ್ವಾಮ್ಯದ ಕಂಪನಿಗಳ ಪೈಕಿ BHEL ಉತ್ತಮವಾಗಿ ನಡೆಯುತ್ತಿದೆ. ಮೈಸೂರು ಅರಸರು, ಸರ್ ಎಂ ವಿಶ್ವೇಶ್ವರಯ್ಯ ಅವರ ದೂರದೃಷ್ಟಿ ಹಿನ್ನೆಲೆಯಲ್ಲಿ ಇದು ಸ್ಥಾಪನೆಯಾಯಿತು. ಕೈಗಾರಿಕೆ ಕ್ಷೇತ್ರದಲ್ಲಿ ದೇಶಕ್ಕೆ ದೊಡ್ಡ ಮಟ್ಟದ ಕೊಡುಗೆ ಕೊಟ್ಟಿದೆ. ದೇಶದಲ್ಲಿ ಸಾರ್ವಜನಿಕ ಕೈಗಾರಿಕೆಗಳು ಅನೇಕ ಸವಾಲುಗಳನ್ನು ಎದುರಿಸುತ್ತಿವೆ. ಇಂಥ ಸವಾಲಿನ ನಡುವೆಯೂ BHEL ಲಾಭದಾಯಕವಾಗಿ ಮುನ್ನಡೆಯುತ್ತಿದೆ. ವಿದ್ಯುತ್ ಕ್ಷೇತ್ರದಲ್ಲಿ BHEL ಕೊಡುಗೆ ಅಸಾಧಾರಣವಾಗಿದೆ, ಥರ್ಮಲ್ ವಿದ್ಯುತ್ ಕ್ಷೇತ್ರದಲ್ಲಿ ಶೇ.40ಕ್ಕೂ ಹೆಚ್ಚು ಮಾರುಕಟ್ಟೆ ಪಾಲನ್ನು ಕಂಪನಿ ಹೊಂದಿದೆ. ಭಾರತೀಯ ಸೇನೆ, ಬಾಹ್ಯಾಕಾಶ ಕ್ಷೇತ್ರದಲ್ಲಿ ಈ ಕಂಪನಿ ಕೊಡುಗೆ ಅನನ್ಯವಾಗಿದೆ ಎಂದರು.

ಬೇಡಿಕೆ ಹೆಚ್ಚು, ಲಾಭ ಕಡಿಮೆ ಯಾಕೆ?: BHEL ಕಂಪನಿಗೆ ದೊಡ್ಡ ಪ್ರಮಾಣದ ಬೇಡಿಕೆಗಳಿಗೆ ಬರುತ್ತಿವೆ, ಆದರೆ ಲಾಭ ಅಷ್ಟು ತೃಪ್ತಿದಾಯಕವಾಗಿ ಇಲ್ಲ ಎಂದ ಸಚಿವರು; ನೀವು ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ. ಯಾವುದೇ ಕಾರಣಕ್ಕೂ ನಷ್ಟಕ್ಕೆ ಸಿಲುಕದ ಹಾಗೆ ನೋಡಿಕೊಳ್ಳುವ ಹೊಣೆ ಅಧಿಕಾರಿಗಳು, ಕಾರ್ಮಿಕರ ಮೇಲಿದೆ. ಪ್ರಧಾನಿ ಮೆಕ್ ಇಂಡಿಯಾ, ಆತ್ಮ ನಿರ್ಭರ್ ಭಾರತ್ ಪರಿಕಲ್ಪನೆಯ ಅಡಿಯಲ್ಲಿ BHEL ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ. ವೇಗವಾಗಿ ಬೆಳೆಯುತ್ತಿರುವ ತಾಂತ್ರಿಕ ಆವಿಷ್ಕಾರಗಳ ನಡುವೆ ಕಂಪನಿಯು ವೇಗವಾಗಿ ಮುನ್ನಡೆಯುತ್ತಿದೆ. ಇಂಥ ಸಂದರ್ಭದಲ್ಲಿ ಹೊಸ ಆವಿಷ್ಕಾರ, ತಂತ್ರಜ್ಞಾನ ಅಳವಡಿಕೆಯಲ್ಲಿ ಮೈಮರೆಯುವುದು ಬೇಡ ಎಂದು ಎಚ್ಚರಿಕೆ ನೀಡಿದರು.

ನವದೆಹಲಿಯ ಸಚಿವಾಲಯದ ಕಚೇರಿಯಲ್ಲಿ ಈಗಾಗಲೇ ಕಂಪನಿಯ ಆಗುಹೋಗುಗಳ ಬಗ್ಗೆ ಹಲವಾರು ಪರಿಶೀಲನಾ ಸಭೆಗಳನ್ನು ನಡೆಸಲಾಗಿದೆ. ಈ ಕಂಪನಿ ಉತ್ತಮವಾಗಿ ನಡೆಯುತ್ತಿದೆ. ಒಳ್ಳೆಯ ಆಡಳಿತ, ಉತ್ತಮ ಕಾರ್ಮಿಕ ಶಕ್ತಿ, ತಾಂತ್ರಿಕ ಕುಶಲತೆಯಿಂದ ಉತ್ತಮ ಸ್ಥಿತಿಯಲ್ಲಿ ಇದೆ. ಸಾರ್ವಜನಿಕ ಸ್ವಾಮ್ಯದ ಕಂಪನಿಗಳ ಪೈಕಿ ಇದು ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಬೆಂಗಳೂರು ನಗರ ಕೈಗಾರಿಕೆ ಕ್ಷೇತ್ರದಲ್ಲಿ ದೇಶಕ್ಕೆ ದೊಡ್ಡ ಮಟ್ಟದ ಕೊಡುಗೆ ಕೊಟ್ಟಿದೆ. ದೇಶದ ಅತ್ಯುತ್ತಮ ಕೈಗಾರಿಕೆಗಳು ಬೆಂಗಳೂರಿನಲ್ಲಿಯೇ ಇದ್ದವು. ಹೆಚ್ಎಂಟಿ, ಬೆಮೆಲ್, ಐಟಿಐ, ಹೆಚ್ ಎ ಎಲ್, ಬಿಇಎಲ್, ಬಿಇಎಂಎಲ್ ಸೇರಿದಂತೆ ಅನೇಕ ಕೈಗಾರಿಕೆಗಳಿಗೆ ಬೆಂಗಳೂರು ಹೆಸರುವಾಸಿಯಾಗಿದೆ. ಅದರ ಇವುಗಳಲ್ಲಿ ಕೆಲವು ನಷ್ಟದ ಹಾಡಿಗೆ ಸಿಕ್ಕಿವೆ. ಅಂತಹ ಪರಿಸ್ಥಿತಿ BHELಗೆ ಬರುವುದು ಬೇಡ ಎಂದು ಸಚಿವರು ಆಶಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT