ಆಮ್ ಆದ್ಮಿ ಪಾರ್ಟಿ 
ರಾಜ್ಯ

ಬಾಡಿಗೆ ಕಟ್ಟದ ಅಂಚೆ ಕಚೇರಿಗಳಿಗೆ ಬೀಗ ಜಡಿದ BBMP: AAP ತೀವ್ರ ವಿರೋಧ

ಬಿಬಿಎಂಪಿ ಕಟ್ಟಡದಲ್ಲಿರುವ ಅಂಚೆ ಕಚೇರಿಗಳು ಬಾಡಿಗೆ ಕಟ್ಟುತ್ತಿಲ್ಲ ಎನ್ನುವ ಕಾರಣ ನೀಡಿ ಅಧಿಕಾರಿಗಳು ಬಾಗಿಲು ಹಾಕಿಸುತ್ತಿರುವ ಕ್ರಮ ಖಂಡನೀಯ.

ಬೆಂಗಳೂರು: ನಗರದ ಸೇಂಟ್ ಜಾನ್ಸ್ ರಸ್ತೆ ಹಾಗೂ ವಸಂತನಗರದ ಅಂಚೆ ಕಚೇರಿಗಳಿಗೆ ಬಿಬಿಎಂಪಿ ಅಧಿಕಾರಿಗಳು ಬೀಗಮುದ್ರೆ ಹಾಕಿದ್ದು, ಕೂಡಲೇ ಅದನ್ನು ತೆರವು ಮಾಡಿ ಅಂಚೆ ಕಚೇರಿ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಡಬೇಕು ಎಂದು ಆಮ್ ಆದ್ಮಿ ಪಕ್ಷ ಬುಧವಾರ ಆಗ್ರಹಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಎಎಪಿ ನಗರಾಧ್ಯಕ್ಷ ಡಾ. ಸತೀಶ್ ಕುಮಾರ್, ಬಿಬಿಎಂಪಿ ಕಟ್ಟಡದಲ್ಲಿರುವ ಅಂಚೆ ಕಚೇರಿಗಳು ಬಾಡಿಗೆ ಕಟ್ಟುತ್ತಿಲ್ಲ ಎನ್ನುವ ಕಾರಣ ನೀಡಿ ಅಧಿಕಾರಿಗಳು ಬಾಗಿಲು ಹಾಕಿಸುತ್ತಿರುವ ಕ್ರಮ ಖಂಡನೀಯ ಎಂದು ಕಿಡಿಕಾರಿದರು.

ಭಾರತೀಯ ಅಂಚೆ ಇಲಾಖೆ ಪ್ರಪಂಚದಲ್ಲೇ ಅತಿ ದೊಡ್ಡ ಸರ್ಕಾರಿ ಅಂಚೆ ಇಲಾಖೆ ಎನ್ನುವ ಹೆಗ್ಗಳಿಕೆ ಪಡೆದಿದೆ. ಇದು ಭಾರತದ ಪರಂಪರೆ ಹಾಗೂ ಇತಿಹಾಸದ ಭಾಗವಾಗಿದೆ. ಕಡಿಮೆ ವೆಚ್ಚದಲ್ಲಿ ಸಾರ್ವಜನಿಕರಿಗೆ ಅಂಚೆ ಸೇವೆ ಒದಗಿಸುತ್ತಿದೆ. ಇಂತಹ ಸೇವಾ ವಲಯದ ಕಚೇರಿಯನ್ನು ಬಾಡಿಗೆ ಕಟ್ಟಿಲ್ಲ ಎಂಬ ಕಾರಣಕ್ಕೆ ಬಿಬಿಎಂಪಿ ಅಧಿಕಾರಿಗಳು ಮುಚ್ಚಿಸಿರುವುದು ವಿಷಾದನೀಯ ಎಂದು ಹೇಳಿದರು.

ಅಂಚೆ ಕಚೇರಿಗಳ ಕಟ್ಟಡಗಳ ಮೇಲೆ ತೆರಿಗೆ ಹಾಕದೆ, ಶುಲ್ಕ ವಸೂಲಿ ಮಾಡದೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡಬೇಕು. ಯಾರೋ ಉದ್ಯಮಿಗಳಿಗೆ, ಪ್ರಭಾವಿಗಳಿಗೆ, ರಾಜಕಾರಣಿಗಳಿಗೆ ಬೇಕಾದಷ್ಟು ಭೂಮಿ, ಕಟ್ಟಡಗಳನ್ನು ಧಾರೆಯೆರೆದು ಕೊಡುತ್ತಿರುವಾಗ ಜನಸಮಾನ್ಯರಿಗೆ ನೆರವಾಗುವ ಅಂಚೆ ಕಚೇರಿಗಳಿಂದ ಬಾಡಿಗೆ ತೆಗೆದುಕೊಳ್ಳದಿದ್ದರೆ ಸರ್ಕಾರಕ್ಕೆ ಅಂತಹ ದೊಡ್ಡ ನಷ್ಟವೇನೂ ಸಂಭವಿಸುವುದಿಲ್ಲ ಎಂದು ತಿಳಿಸಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'Greater Bengaluru Authority' ವ್ಯಾಪ್ತಿಯಲ್ಲಿ ಇಂದಿನಿಂದ ಜಾತಿಗಣತಿ: 17 ಸಾವಿರ ಸಿಬ್ಬಂದಿಗಳ ನಿಯೋಜನೆ, ಅನಾವಶ್ಯಕ ಗೈರಾದವರಿಗೆ ಕಠಿಣ ಕ್ರಮದ ಎಚ್ಚರಿಕೆ..!

ಬಿಹಾರ ಚುನಾವಣೆಗೋಸ್ಕರ GST ಸರಳೀಕರಣ: ಕೇಂದ್ರದ ನಿರ್ಧಾರದಿಂದ ರಾಜ್ಯಕ್ಕೆ 15,000 ಕೋಟಿ ರೂ. ನಷ್ಟ; ಸಿಎಂ ಸಿದ್ದರಾಮಯ್ಯ

ಬೆಳಗಾವಿ: ದಸರಾ ರಜೆಗೆ ಹೋಗಿದ್ದ ಮೂವರು ಮಹಾರಾಷ್ಟ್ರ ಸಮುದ್ರದಲ್ಲಿ ಮುಳುಗಿ ಸಾವು- ನಾಲ್ವರು ನಾಪತ್ತೆ

'Gaza deal ಒಪ್ಕೊಳ್ಳಿ.. ಇಲ್ಲ ನರಕ ತೋರಿಸ್ತೀವಿ': Hamas ಗೆ ಡೊನಾಲ್ಡ್ ಟ್ರಂಪ್ ಅಂತಿಮ ಎಚ್ಚರಿಕೆ!

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬೇಡಿ: 11 ಮಕ್ಕಳ ಸಾವಿನ ನಂತರ ಕೇಂದ್ರ ಎಚ್ಚರಿಕೆ

SCROLL FOR NEXT