ಎಚ್ ಡಿ ರೇವಣ್ಣ 
ರಾಜ್ಯ

ಎಚ್​​ಡಿ ರೇವಣ್ಣಗೆ ಬಿಗ್​ ರಿಲೀಫ್; ಜಾಮೀನು ರದ್ದು ಕೋರಿದ್ದ ಎಸ್ಐಟಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ಕೋರ್ಟ್​ ನೀಡಿದ್ದ ಜಾಮೀನು ರದ್ದು ಕೋರಿ ಎಸ್​​ಐಟಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು.

ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ, ಮಾಜಿ ಸಚಿವ ಎಚ್.ಡಿ ರೇವಣ್ಣ ಅವರಿಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ವಿಶೇಷ ತನಿಖಾ ತಂಡ(ಎಸ್ಐಟಿ) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಇದರಿಂದ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ಕೋರ್ಟ್​ ನೀಡಿದ್ದ ಜಾಮೀನು ರದ್ದು ಕೋರಿ ಎಸ್​​ಐಟಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ರೇವಣ್ಣ ಜಾಮೀನು ರದ್ದಗೊಳಿಸಲು ನಿರಾಕರಿಸಿದೆ. ಅಲ್ಲದೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿದೆ.

ಆರೋಪಿಗಳಾದ ಸತೀಶ್ ಬಾಬು, ಮಧುಗೌಡ, ಕೆ.ಎ.ರಾಜಗೋಪಾಲ್, ಹೆಚ್.ಕೆ.ಸುಜಯ್, ಹೆಚ್.ಎನ್.ಮಧು, ಎಸ್.ಟಿ.ಕೀರ್ತಿಗೆ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನರಿದ್ದ ಪೀಠ ಆದೇಶ ಹೊರಡಿಸಿದೆ. ಇದೇ ಪ್ರಕರಣದಲ್ಲಿ ಆರೋಪಿಯಾಗಿರುವ ರೇವಣ್ಣ ಪತ್ನಿ ಭವಾನಿ ಕೂಡ ಈಗಾಗಲೇಜಾಮೀನು ಪಡೆದುಕೊಂಡಿದ್ದಾರೆ.

ಮೇ 13 ರಂದು, ಶಾಸಕರು/ಸಂಸದರ ವಿಶೇಷ ನ್ಯಾಯಾಲಯ ರೇವಣ್ಣ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತು ನಂತರ ಎಸ್‌ಐಟಿ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಮಹಿಳೆ ಅಪಹರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆಯ ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT