ಬೆಂಗಳೂರು: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ರಾಜಕಾರಣಿ ಮತ್ತು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರನ್ನು ಬುಧವಾರ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
"ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ಎಸ್.ಎಂ. ಕೃಷ್ಣ ಅವರು ಒಂದು ತಿಂಗಳ ಹಿಂದೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಸುದೀರ್ಘ ಚಿಕಿತ್ಸೆಯ ನಂತರ ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಡಾ. ಸತ್ಯನಾರಾಯಣ ಮೈಸೂರು ಮತ್ತು ಕ್ರಿಟಿಕಲ್ ಕೇರ್ ತಂಡ ಎಸ್ ಎಂ ಕೃಷ್ಣ ಅವರಿಗೆ ಚಿಕಿತ್ಸೆ ನೀಡಿದ್ದು, ಅವರು ಚೇತರಿಸಿಕೊಂಡಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.
92 ವರ್ಷದ ಮಾಜಿ ವಿದೇಶಾಂಗ ಸಚಿವರು ಶೀಘ್ರವಾಗಿ ಚೇತರಿಸಿಕೊಳ್ಳುತ್ತಿದ್ದು, ಅವರ ಮನೆಯಲ್ಲಿ ಮತ್ತಷ್ಟು ಚೇತರಿಸಿಕೊಳ್ಳುತ್ತಾರೆ ಎಂದು ಆಸ್ಪತ್ರೆ ತಿಳಿಸಿದೆ.