ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಹೆಚ್ಚಿದ Mpox ಆತಂಕ: ಆರೋಗ್ಯ ಇಲಾಖೆ ಅಲರ್ಟ್; ಚಿಕಿತ್ಸೆಗೆ ಬೆಂಗಳೂರು, ಮಂಗಳೂರು ಗುರುತಿಸಿದ ಸರ್ಕಾರ!

ಮಂಕಿಪಾಕ್ಸ್ ಶಂಕಿತರ ಚಿಕಿತ್ಸೆಗೆಂದು ಬೆಂಗಳೂರಿನ ಇಂದಿರಾನಗರದ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯನ್ನು ಗುರುತಿಸಲಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಮಂಕಿಪಾಕ್ಸ್ ಆತಂಕ ಹೆಚ್ಚಾಗಿದ್ದು, ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಹೀಗಾಗಿ ಏರ್​ಪೋರ್ಟ್​​ಗಳಲ್ಲಿ ಕಟ್ಟೆಚ್ಚರ ವಹಿಸಲು ಸುತ್ತೋಲೆ ಹೊರಡಿಸಿದೆ.

ಮಂಕಿಪಾಕ್ಸ್ ಶಂಕಿತರ ಚಿಕಿತ್ಸೆಗೆಂದು ಬೆಂಗಳೂರಿನ ಇಂದಿರಾನಗರದ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯನ್ನು ಗುರುತಿಸಲಾಗಿದೆ. ಮಂಕಿಪಾಕ್ಸ್ ಕಂಡು ಬಂದರೆ 21 ದಿನಗಳ ಕಾಲ ಕ್ವಾರಂಟೈನ್ ಮಾಡಬೇಕು ಎಂದು ಖಡಕ್ ಸೂಚನೆ ನೀಡಿದೆ.

ಆರೋಗ್ಯ ಇಲಾಖೆ ನಿನ್ನೆ ಹೊರಡಿಸಿದ ಸುತ್ತೋಲೆಯಲ್ಲಿ, ರಾಜ್ಯ ಆರೋಗ್ಯ ಆಯುಕ್ತ ಡಿ ರಂದೀಪ್ ಅವರು ಮಂಗನ ಕಾಯಿಲೆಯ ಶಂಕಿತ ಪ್ರಕರಣಗಳ ಬಗ್ಗೆ ನಿಗಾ ಇಡಲು ಸೂಚಿಸಿದ್ದಾರೆ. ವಿಮಾನ ನಿಲ್ದಾಣಗಳು, ಬಂದರು ಮತ್ತು ರಾಜ್ಯದ ಎಲ್ಲಾ ಕಡೆಗಳ ಪ್ರವೇಶ ಕೇಂದ್ರಗಳ ವ್ಯವಸ್ಥಾಪಕ ಅಧಿಕಾರಿಗಳಿಗೆ ಎಚ್ಚರ ವಹಿಸಲು ನಿರ್ದೇಶನ ನೀಡಿದ್ದಾರೆ.

ಶಂಕಿತರನ್ನ ಗುರುತಿಸಿ ಸ್ಕ್ರೀನಿಂಗ್ ಮಾಡುವಂತೆ ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇಡಲು ಸೂಚಿಸಿದ್ದಾರೆ. ಅಲ್ಲದೆ, ಹೈರಿಸ್ಕ್ ದೇಶಗಳಿಂದ ಬರುವವರ ಮೇಲೆ ಎಚ್ಚರವಹಿಸಲು ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಯಾವುದೇ ಶಂಕಿತ ಪ್ರಕರಣಗಳು ಕಂಡು ಬಂದರೆ ಅವರನ್ನು ಐಸೋಲೇಟ್ ಮಾಡುವುದು, ಚಿಕಿತ್ಸೆ ನೀಡುವುದರ ಬಗ್ಗೆ ರಾಜ್ಯದ ಆರೋಗ್ಯ ಸಿಬ್ಬಂದಿ ಗಮನಹರಿಸುವಂತೆ ಸೂಚಿಸಿದ್ದಾರೆ.

ಪಾಕಿಸ್ತಾನ್​ ಸೇರಿ ವಿವಿಧ ರಾಷ್ಟ್ರಗಳಲ್ಲಿ ಮಂಕಿಪಾಕ್ಸ್ (Mpox) ಪತ್ತೆ ಹಿನ್ನೆಲೆ ರಾಜ್ಯದಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಕರ್ನಾಟಕ ಆರೋಗ್ಯ ಇಲಾಖೆ ಸಾಕಷ್ಟು ಎಚ್ಚರಿಕೆ ವಹಿಸುತ್ತಿದೆ.

ವಿಶ್ವ ಆರೋಗ್ಯ ಸಂಸ್ಥೆ (WHO) ಮಂಕಿಪಾಕ್ಸ್ ಅನ್ನು ‘ಜಾಗತಿಕ ಆರೋಗ್ಯ ತುರ್ತುಸ್ಥಿತಿ’ ಎಂದು ಘೋಷಿಸಿದ ನಂತರ ಹಾಗೂ ಸ್ವೀಡನ್ ಮತ್ತು ಪಾಕಿಸ್ತಾನದಲ್ಲಿ ಪ್ರಕರಣಗಳು ಹೆಚ್ಚಾಗುತ್ತಿರುವ ನಂತರ, ಶಂಕಿತ ಪ್ರಕರಣಗಳಿಗೆ ಸಿದ್ಧರಾಗುವಂತೆ ಕೇಂದ್ರವು ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಭಾರತದಲ್ಲಿ ಪ್ರಸ್ತುತ ಯಾವುದೇ ಸಕ್ರಿಯ ಪ್ರಕರಣಗಳಿಲ್ಲ.

ಶಂಕಿತ ಪ್ರಕರಣದ ಎಲ್ಲಾ ಕ್ಲಿನಿಕಲ್ ಮಾದರಿಗಳನ್ನು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಬೆಂಗಳೂರಿನಲ್ಲಿರುವ ವೈರಸ್ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯಕ್ಕೆ ಸಾಗಿಸಲಾಗುತ್ತೆ. ಬಳಿಕ ಮಂಕಿಪಾಕ್ಸ್ ದೃಢಪಟ್ಟರೆ ಅವರನ್ನು ಕನಿಷ್ಠ 21 ದಿನಗಳವರೆಗೆ ಅಥವಾ ಸಂಪೂರ್ಣವಾಗಿ ಗುಣವಾಗುವವರೆಗೆ ಪ್ರತ್ಯೇಕವಾಗಿ ಐಸೋಲೇಟ್ ಮಾಡಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ