ಅಪಘಾತ (ಸಾಂಕೇತಿಕ ಚಿತ್ರ) online desk
ರಾಜ್ಯ

ಚಿಕ್ಕಬಳ್ಳಾಪುರ ಎರಡು ಪ್ರತ್ಯೇಕ ಅಪಘಾತ: ಐವರ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾಗಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ, ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕುಡುಮಲಕುಂಟೆ ಕೈಗಾರಿಕಾ ಪ್ರದೇಶದ ಬಳಿ ನಡೆದಿದೆ.

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ ಐದು ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ ವರದಿಯಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾಗಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ, ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕುಡುಮಲಕುಂಟೆ ಕೈಗಾರಿಕಾ ಪ್ರದೇಶದ ಬಳಿ ನಡೆದಿದೆ.

ಮೃತರನ್ನು ಸೂರಜ್ (27) ಹಾಗೂ ಕಮಲ್ (26) ಗುರುತಿಸಲಾಗಿದ್ದು ಉತ್ತರ ಪ್ರದೇಶದ ಖಾನಾಪುರ್ ನಿವಾಸಿಗಳು ಎಂದು ತಿಳಿದು ಬಂದಿದೆ.

ಗಂಭೀರವಾಗಿ ಗಾಯಗೊಂಡ ಜೈಸಿಂಗ್, ಯು ಜೈಸಿಂಗ್ ಅವರನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಉಳಿದ ಇಬ್ಬರಿಗೆ ಹಿಂದೂಪೂರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆರು ಮಂದಿ ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಹಿಂದೂಪುರ ಬಳಿಯ ಕೈಗಾರಿಕಾ ಪ್ರದೇಶ ಶ್ಯಾಮ್ ಪೈರಷ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕೆಲಸ ಮುಗಿಸಿಕೊಂಡು ಗೌರಿಬಿದನೂರು ಮಾರ್ಗವಾಗಿ ಇನ್ನೋವಾ ಕಾರಿನಲ್ಲಿ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಮತ್ತೊಂದು ಘಟನೆ ಚಿಂತಾಮಣಿ ತಾಲೂಕಿನ ದಂಡುಪಾಳ್ಯ ಗೇಟ್ ಬಳಿ ನಡೆದಿದೆ. ಕಾರು ಹಾಗೂ ಟಿಟಿ ನಡುವೆ ಮುಖಾಮುಖಿ ಡಿಕ್ಕಿಯಾಗದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.

ಕಾರಿನಲ್ಲಿದ್ದ ಮಗ ಶ್ರೀಕಾಂತ್ ಈತನ ತಂದೆ ಶ್ರೀನಿವಾಸಲು ಹಾಗೂ ತಾಯಿ ಪುಷ್ಪ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಇನ್ನೂ ಟಿಟಿ ವಾಹನದಲ್ಲಿದ್ದ 12 ಜನರಿಗೆ ಗಂಭೀರ ಗಾಯಗಳಾಗಿ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಟಿಟಿ ವಾಹನ ಆಂಧಪ್ರದೇಶದ ಬಾಯಿಕೊಂಡದಿಂದ ಚಿಂತಾಮಣಿ ಕಡೆಗೆ ಬರುತ್ತಿತ್ತು. ಅಪಘಾತಕ್ಕೀಡಾದ ಕಾರು ಬೆಂಗಳೂರಿನಿಂದ ಕಡಪ ಹೈವೇ ರಸ್ತೆ ಮುಖಾಂತರ ಆಂಧ್ರಪ್ರದೇಶದ ಕಡೆಗೆ ಹೋಗುತ್ತಿತ್ತು. ಈ ವೇಳೆ ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ.

ಕಾರಿನಲ್ಲಿದ್ದವರು ಮೂಲತಃ ಆಂಧ್ರದವರಾದರೂ ಬೆಂಗಳೂರಿನಲ್ಲಿ ನೆಲಸಿದ್ದರು. ಬುಧವಾರ ಸಂಬಂಧಿಕರ ಮದುವೆಗೆ ಎಂದು ಆಂಧ್ರಪ್ರದೇಶದ ಕಡೆಗೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ.

ಇನ್ನೂ ಟಿಟಿ ವಾಹನದಲ್ಲಿದ್ದವರು ಸಹ ಬೆಂಗಳೂರಿನವರಾಗಿದ್ದು, ಬಾಯಿಕೊಂಡ ಗಂಗಮ್ಮ ದೇವಾಲಯಕ್ಕೆ ಹೋಗಿ ಬೆಂಗಳೂರಿಗೆ ವಾಪಾಸ್ ಆಗುತ್ತಿದ್ದರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!