ಡಿ.ಕೆ ಶಿವಕುಮಾರ್ 
ರಾಜ್ಯ

ಎತ್ತಿನಹೊಳೆ ಏತ ನೀರಾವರಿ ಕಾಮಗಾರಿ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿ: ಡಿಸಿಎಂ ಡಿ.ಕೆ ಶಿವಕುಮಾರ್

ಎತ್ತಿನಹೊಳೆ ನಮ್ಮ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. ತಾಯಿ ಗಂಗೆ ಪೂಜೆ ಮಾಡಿ ಖುದ್ದಾಗಿ ನಾನೇ ಪ್ರಾಯೋಗಿಕ ಪರೀಕ್ಷೆಗೆ ಚಾಲನೆ ನೀಡಿದ್ದೇನೆ. ನಮ್ಮ ಅಧಿಕಾರಿಗಳು ಈ ಯೋಜನೆಯ ವಿವರ ಮತ್ತು ವಿಡಿಯೋಗಳನ್ನು ತೋರಿಸಿದರು

ಹಾಸನ: ಬಹುನಿರೀಕ್ಷಿತ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಏತ (Lift) ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಶೀಘ್ರದಲ್ಲೇ ಈ ಯೋಜನೆ ಉದ್ಘಾಟನಾ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹರ್ಷ ವ್ಯಕ್ತಪಡಿಸಿದರು.

ಹಾಸನ ಜಿಲ್ಲೆ ಸಕಲೇಶಪುರದ ಕೆಸವನಹಳ್ಳಿ ಗ್ರಾಮದ ಕುಂಬರಡಿ ಕಾಫಿ ಎಸ್ಟೇಟ್ ಬಳಿ ಎತ್ತಿನಹೊಳೆ ಯೋಜನೆಯ ಪರೀಕ್ಷಾರ್ಥ ನೀರು ಹರಿಸುವ ಕಾರ್ಯಚರಣೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬುಧವಾರ ಪರಿಶೀಲಿಸಿ ಮಾತನಾಡಿದ ಅವರು, ಎತ್ತಿಹೊಳೆ ನಮ್ಮ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. ತಾಯಿ ಗಂಗೆ ಪೂಜೆ ಮಾಡಿ ಖುದ್ದಾಗಿ ನಾನೇ ಪ್ರಾಯೋಗಿಕ ಪರೀಕ್ಷೆಗೆ ಚಾಲನೆ ನೀಡಿದ್ದೇನೆ. ನಮ್ಮ ಅಧಿಕಾರಿಗಳು ಈ ಯೋಜನೆಯ ವಿವರ ಮತ್ತು ವಿಡಿಯೋಗಳನ್ನು ತೋರಿಸಿದರು. ನಾನು ಕಣ್ಣಾರೆ ನೋಡಬೇಕು ಎಂದು ಬಂದಿದ್ದೇನೆ. ಈ ಹಿಂದೆ ಭೇಟಿ ನೀಡಿದಾಗ ಶೀಘ್ರವಾಗಿ ಕೆಲಸ ಮುಗಿಸಬೇಕು ಎಂದು ತಿಳಿಸಿದ್ದೆ, ಅದರಂತೆ ಒಂದೆರಡು ತಿಂಗಳು ತಡವಾಗಿಯಾದರೂ ಕೆಲಸ ಮುಗಿದಿದೆ ಎಂದು ತಿಳಿಸಿದರು.

ಒಟ್ಟು 8 ವಿಯರ್‌ ಗಳಲ್ಲಿ 5 ವಿಯರ್ ಗಳಿಗೆ ಚಾಲನೆ ನೀಡಲಾಗಿದೆ. 1,500 ಕ್ಯೂಸೆಕ್ಸ್ ನೀರನ್ನು ಮೇಲಕ್ಕೆ ಎತ್ತಲಾಗಿದೆ. ನೀರು ಕಡಿಮೆ ಆಗುವ ಮೊದಲು ಶುಭದಿನ, ಶುಭ ಘಳಿಗೆ ನೋಡಿ ಮುಖ್ಯಮಂತ್ರಿಗಳಿಂದ ಚಾಲನೆ ಮಾಡಿಸಲಾಗುವುದು. ಈ ದೊಡ್ಡ ಯೋಜನೆಯನ್ನು ಕಣ್ಣಾರೆ ನೋಡಬೇಕು ಎಂದು ಭೇಟಿ ನೀಡಿದೆ. ನಮ್ಮ ಎಲ್ಲಾ ಮಂತ್ರಿಗಳಿಗೂ ತಿಳಿಸಿ ಎಲ್ಲರೂ ಸೇರಿ ಉದ್ಘಾಟನೆಯಲ್ಲಿ ಭಾಗವಹಿಸುತ್ತೇವೆ ಎಂದು ತಿಳಿಸಿದರು. ಈ ಯೋಜನೆಯಿಂದ 24.01 ಟಿಎಂಸಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರು ಸೇರಿದಂತೆ ಒಟ್ಟು 7 ಜಿಲ್ಲೆಗಳಲ್ಲಿ ಕುಡಿಯಲು ಪೂರೈಸಲಾಗುವುದು. ಬರಪೀಡಿತ 29 ತಾಲೂಕಿನ 38 ಪಟ್ಟಣ ಹಾಗೂ 6,657 ಗ್ರಾಮಗಳ ಸುಮಾರು 75.59 ಲಕ್ಷ ಜನರು ಮತ್ತು ಜಾನುವಾರುಗಳಿಗೆ 14.056 ಟಿಎಂಸಿ ನೀರನ್ನು ಒದಗಿಸಲಾಗುವುದು. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ತುಮಕೂರು ವ್ಯಾಪ್ತಿಯ 527 ಕೆರೆಗಳಿಗೆ 9.953 ಟಿಎಂಸಿ ನೀರನ್ನು ಹರಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

23,251 ಕೋಟಿ ಮೊತ್ತದ ಈ ಮಹತ್ವಾಕಾಂಕ್ಷಿ ಯೋಜನೆಯು ಹಲವು ವರ್ಷಗಳಿಂದ ಮೊದಲನೇ ಹಂತದಲ್ಲಿ ಏತ (Lift) ಮತ್ತು ವಿದ್ಯುತ್ ಪೂರೈಕೆ ಕಾಮಗಾರಿಗಳಲ್ಲಿ ಅಚಡಣೆ ಉದ್ಭವಿಸಿದ್ದ ಕಾರಣ ಈ ಯೋಜನೆ ಪೂರ್ಣಗೊಳಿಸುವುದು ವಿಳಂಬವಾಗಿತ್ತು. ಈ ಅಡಚಣೆಗಳನ್ನು ನಿವಾರಣೆ ಮಾಡಿಕೊಂಡು ಈಗ ಯೋಜನೆಯು ನಿರ್ಣಾಯಕ ಘಟ್ಟ ತಲುಪಿದೆ” ಎಂದರು.

“ಈ ಯೋಜನೆಯಲ್ಲಿ ವಿಯರ್ 1,2,4,5 ಮತ್ತು 8ರಿಂದ 1571 ಕ್ಯೂಸೆಕ್ಸ್ ನೀರನ್ನು ಎತ್ತಿ ವಿತರಣಾ ತೊಟ್ಟಿ-3ಕ್ಕೆ ಪೂರೈಸಲಾಗುವುದು. ನಂತರ ಇಲ್ಲಿಂದ ವಿತರಣಾ ತೊಟ್ಟಿ-4ರ ಮೂಲಕ ಗುರುತ್ವ ಕಾಲುವೆಗಳಿಂದ ಈ ನೀರನ್ನು ಹರಿಸಲಾಗುವುದು. ಈ ನೀರು ಒಟ್ಟು 252.87 ಕಿ.ಮೀ ಉದ್ದವಿದ್ದು, ಈ ಪೈಕಿ 164 ಕಿ.ಮೀ ಕಾಮಗಾರಿ ಪೂರ್ಣಗೊಂಡಿದೆ. ಇನ್ನು 25.87 ಕಿ.ಮೀ ಗುರುತ್ವ ಕಾಲುವೆ ಕಾಮಗಾರಿ ಪ್ರಗತಿಯಲ್ಲಿದೆ. ಈ ಮಧ್ಯೆ 42 ಕಿ.ಮೀ ನಂತರ ಅರಣ್ಯ ಮತ್ತು ಭೂಸ್ವಾಧೀನ ಸಮಸ್ಯೆಯಿಂದಾಗಿ ಕಾಮಗಾರಿ ಪೂರ್ಣಗೊಂಡಿಲ್ಲ. ಹೀಗಾಗಿ 32.50 ಕಿ.ಮೀ ನಂತರ ನೀರನ್ನು ನಾಲಾ ಎಸ್ಕೇಪ್ ಮೂಲಕ 132.50 ಕಿ.ಮೀ ದೂರದ ವಾಣಿವಿಲಾಸ ಸಾಗರಕ್ಕೆ ವೇದಾ ವ್ಯಾಲಿ ಮೂಲಕ ತಾತ್ಕಾಲಿಕವಾಗಿ ನೀರನ್ನು ಹರಿಸಲು ಕಾರ್ಯಕ್ರಮ ರೂಪಿಸಲಾಗಿದೆ” ಎಂದು ಮಾಹಿತಿ ನೀಡಿದರು.

“ಒಂದಷ್ಟು ಕಡೆ ಅರಣ್ಯ ಇಲಾಖೆಗೆ ಸೇರಿದ ಭೂಮಿಯ ತೊಂದರೆಯಿದೆ. ಅದನ್ನು ಬಗೆಹರಿಸಲಾಗುವುದು. ಇದರ ಬಗ್ಗೆ ಅರಣ್ಯ ಇಲಾಖೆಯವರ ಬಳಿ ನಾನು ಮತ್ತು ಸಿಎಂ ಅವರು ಮಾತನಾಡಲಾಗುವುದು” ಎಂದರು.ಅವೈಜ್ಞಾನಿಕವಾಗಿ ಗುಡ್ಡ ಅಗೆಯಲಾಗಿದೆ, ಪರಿಹಾರ ಸರಿಯಾಗಿ ಬಂದಿಲ್ಲ ಎನ್ನುವ ಆರೋಪದ ಬಗ್ಗೆ ಕೇಳಿದಾಗ “ಅವರೆಲ್ಲರ ಬಳಿ ನಾನು ಮಾತನಾಡುತ್ತೇನೆ” ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT