ಬೆಂಗಳೂರಿನಲ್ಲಿ ರಸ್ತೆ ಕಾಳಗ 
ರಾಜ್ಯ

Video: ಬೆಂಗಳೂರಿನಲ್ಲಿ ಮತ್ತೊಂದು Road Rage; ರಾಂಗ್ ವೇ ನಲ್ಲಿ ಬಂದ SUV ಚಾಲಕನ ಪ್ರಶ್ನಿಸಿದ ಬೈಕ್ ಸವಾರನಿಗೆ ಹಿಗ್ಗಾಮುಗ್ಗಾ ಥಳಿತ!

ಸ್ಕಾರ್ಪಿಯೋದಲ್ಲಿದ್ದ ಮೂವರೂ ಪಾನಮತ್ತರಾಗಿದ್ದು, ಬೈಕ್ ಸವಾರನಿಗೆ ರಸ್ತೆ ಮೇಲೆಯೇ ಥಳಿಸಿದ್ದಾರೆ. ಈ ವೇಳೆ ಓರ್ವ ಪೊಲೀಸ್ ಸ್ಥಳಕ್ಕಾಗಮಿಸಿ ಇಬ್ಬರನ್ನೂ ಬಿಡಿಸುವ ಕೆಲಸ ಮಾಡಿದ್ದು, ಅದಕ್ಕೂ ಬಗ್ಗದ ಕಾರಿನಲ್ಲಿದ್ದವರು ಪೊಲೀಸ್ ಸಿಬ್ಬಂದಿಯೊಂದಿಗೂ ವಾಗ್ವಾದ ನಡೆಸಿದ್ದಾರೆ.

ಬೆಂಗಳೂರು: ಟ್ರಾಫಿಕ್ ಸಮಸ್ಯೆಯಿಂದ ತುಂಬಿರುವ ಬೆಂಗಳೂರಿನಲ್ಲಿ ಮತ್ತೊಂದು Road Rage ಪ್ರಕರಣ ವರದಿಯಾಗಿದ್ದು, ರಾಂಗ್ ವೇ ನಲ್ಲಿ ಬಂದ SUV ಚಾಲಕನ ಪ್ರಶ್ನಿಸಿದ ಬೈಕ್ ಸವಾರನಿಗೆ ಹಿಗ್ಗಾಮುಗ್ಗಾ ಥಳಿಸಿರುವ ವಿಡಿಯೋ ವೈರಲ್ ಆಗುತ್ತಿದೆ.

ಬೆಂಗಳೂರಿನ ಕೊಡಿಗೇಹಳ್ಳಿ ಜಂಕ್ಷನ್ ನಲ್ಲಿ ಇಂದು ರಾತ್ರಿ 7 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ಮಳೆ ನಡುವೆಯೇ ಹಳದಿ ಬೋರ್ಡ್ ಸ್ಕಾರ್ಪಿಯೋ ವಾಹನವೊಂದು ರಾಂಗ್ ವೇನಲ್ಲಿ ನುಗ್ಗಿದ್ದು ಇದರಿಂದ ತೀವ್ರ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಈ ವೇಳೆ ಅದೇ ಮಾರ್ಗದಲ್ಲಿ ಸಾಗಿದ್ದ ಬೈಕ್ ಸವಾರನೋರ್ವ ಸ್ಕಾರ್ಪಿಯೋ ವಾಹನದಲ್ಲಿದ್ದವರನ್ನು ಪ್ರಶ್ನಿಸಿದ್ದು, ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಈ ವೇಳೆ ಸ್ಕಾರ್ಪಿಯೋ ವಾಹನದಲ್ಲಿದ್ದ ಮತ್ತಿಬ್ಬರು ಇಳಿದು ಏಕಾಏಕಿ ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿದ್ದಾರೆ.

ಸ್ಕಾರ್ಪಿಯೋದಲ್ಲಿದ್ದ ಮೂವರೂ ಪಾನಮತ್ತರಾಗಿದ್ದು, ಬೈಕ್ ಸವಾರನಿಗೆ ರಸ್ತೆ ಮೇಲೆಯೇ ಥಳಿಸಿದ್ದಾರೆ. ಈ ವೇಳೆ ಓರ್ವ ಪೊಲೀಸ್ ಸ್ಥಳಕ್ಕಾಗಮಿಸಿ ಇಬ್ಬರನ್ನೂ ಬಿಡಿಸುವ ಕೆಲಸ ಮಾಡಿದ್ದು, ಅದಕ್ಕೂ ಬಗ್ಗದ ಕಾರಿನಲ್ಲಿದ್ದವರು ಪೊಲೀಸ್ ಸಿಬ್ಬಂದಿಯೊಂದಿಗೂ ವಾಗ್ವಾದ ನಡೆಸಿದ್ದಾರೆ. ಈ ಕುರಿತ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅಪ್ಲೋಡ್ ಮಾಡಲಾಗಿದ್ದು, ಸ್ಕಾರ್ಪಿಯೋ ಕಾರಿನ ಮೇಲೆ Govt of india ಎಂಬ ನಾಮಫಲಕ ಇರುವುದು ಕಂಡುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT