ಉಡುಪಿಯಲ್ಲಿ ಮಹಿಳೆ ಬಿಕಿನಿ ಫೋಟೋಶೂಟ್ 
ರಾಜ್ಯ

Video: ಪತ್ನಿ ಬಿಕಿನಿ ಫೋಟೋಶೂಟ್‌ ಗೆ ಪತಿ ಸಾಥ್, ಅಡ್ಡಿಪಡಿಸಿದ ಉಡುಪಿ ಪೊಲೀಸರ ವಿರುದ್ದವೇ ಆಕ್ರೋಶ

khyatishree2 ಎಂಬ ಇನ್ ಸ್ಟಾಗ್ರಾಂ ಖಾತೆದಾರ ಮಹಿಳೆ ಕರ್ನಾಟಕ ಪ್ರವಾಸದಲ್ಲಿದ್ದು ಕರ್ನಾಟಕದ ಉಡುಪಿ ಜಿಲ್ಲೆಯ ಪಡುಕೆರೆ ಬೀಚ್‌ನಲ್ಲಿ ಬಿಕಿನಿ ಫೋಟೋ ಮಾಡಿಸಲು ಮುಂದಾಗಿದ್ದಾರೆ.

ಉಡುಪಿ: ಉಡುಪಿಯ ಬೀಚ್​ನಲ್ಲಿ ಮಹಿಳೆಯೊಬ್ಬರು ಬಿಕಿನಿ ಫೋಟೋಶೂಟ್ ಮಾಡಿಸಲು ಮುಂದಾದ ವಿಚಾರ ಈಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದು, ಅಡ್ಡಿಪಡಿಸಿದ ಪೊಲೀಸರ ವಿರುದ್ದವೇ ಆಕೆ ಆಕ್ರೋಶ ಹೊರ ಹಾಕಿದ್ದಾರೆ.

ಹೌದು.. khyatishree2 ಎಂಬ ಇನ್ ಸ್ಟಾಗ್ರಾಂ ಖಾತೆದಾರ ಮಹಿಳೆ ಕರ್ನಾಟಕ ಪ್ರವಾಸದಲ್ಲಿದ್ದು ಕರ್ನಾಟಕದ ಉಡುಪಿ ಜಿಲ್ಲೆಯ ಪಡುಕೆರೆ ಬೀಚ್‌ನಲ್ಲಿ ಬಿಕಿನಿ ಫೋಟೋ ಮಾಡಿಸಲು ಮುಂದಾಗಿದ್ದಾರೆ.

ಈ ವೇಳೆ ಅದೇ ಮಾರ್ಗದಲ್ಲಿ ಕರ್ತವ್ಯ ನಿರತ ಪೊಲೀಸರು ಮತ್ತು ಸ್ಥಳೀಯರು ಇದಕ್ಕೆ ಅಡ್ಡಿಪಡಿಸಿ ಮಹಿಳೆಯನ್ನು ವಾಪಸ್ ಕಳುಹಿಸಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಯುವತಿ, ಸಾಮಾಜಿಕ ಮಾಧ್ಯಮ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರಿಂದ ಎಚ್ಚರಿಕೆ

ಯುವತಿಯ ಬಿಕಿನಿ ಫೋಟೋಶೂಟ್ ಮಾಡುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಸಂಭಾವ್ಯ ಸಮಸ್ಯೆಯ ಬಗ್ಗೆ ಅರಿತು ಸ್ಥಳಕ್ಕೆ ಧಾವಿಸಿ ಮಹಿಳೆಗೆ ಬಟ್ಟೆ ಬದಲಾಯಿಸುವಂತೆ ಸೂಚಿಸಿದ್ದಾರೆ.

ಕಹಿ ಅನುಭವ ಎಂದ ಮಹಿಳೆ

ಈ ವಿಚಾರವಾಗಿ ಇನ್​ಸ್ಟಾಗ್ರಾಂನಲ್ಲಿ ಫೋಟೋಶೂಟ್‌ ಮಾಡಿದ ಫೋಟೋ ಸಹಿತ ಮಾಹಿತಿ ನೀಡಿರುವ ಮಹಿಳೆ, ಪಡುಕೆರೆ ಬೀಚ್‌ ತಮಗೆ ಕಹಿ ಅನುಭವಾಗಿದ್ದು, ಫೋಟೋಶೂಟ್ ಮಾಡಿಸುತ್ತಿದ್ದಾಗ ಬಟ್ಟೆ ಬದಲಿಸುವಂತೆ ಸ್ಥಳೀಯ ಪೊಲೀಸರು ಸೂಚಿಸಿದ್ದಾರೆ. ಬೇರೆ ಬಟ್ಟೆ ಹಾಕದಿದ್ದರೆ ಸ್ಥಳೀಯರು ಹಲ್ಲೆ ನಡೆಸುತ್ತಾರೆ. ನೈತಿಕ ಪೊಲೀಸ್‌ಗಿರಿ ನಡೆಸಲು ಸ್ಥಳೀಯರು ಯಾರೆಂದು ಮಹಿಳೆ ಪ್ರಶ್ನಿಸಿದ್ದಾರೆ.

ಅಲ್ಲದೆ ಬೀಚ್‌ ಸಾರ್ವಜನಿಕ ಪ್ರದೇಶ, ಫೋಟೋಶೂಟ್‌ ಮಾಡಿದ್ರೆ ತಪ್ಪೇನು? ಬಿಕಿನಿ ಹಾಕಿ ಫೋಟೋಶೂಟ್‌ ಮಾಡುವುದು ಕಾನೂನು ಉಲ್ಲಂಘನೆಯೇ? ಬಿಕಿನಿ ಹಾಕಬಾರದು ಎಂದು ಕಾನೂನು ಇದೆಯೇ ಎಂದು ಸಾಮಾಜಿಕ ಜಾಲತಾಣದ ಮೂಲಕ ಮಹಿಳೆ ಉಡುಪಿ ಪೊಲೀಸರನ್ನು ಪ್ರಶ್ನಿಸಿದ್ದಾರೆ.

ಯಾರು ಈ khyatishree2?

ಮಹಿಳೆಯ ಇನ್​ಸ್ಟಾಗ್ರಾಂ ಪ್ರೊಫೈಲ್ ಮಾಹಿತಿ ಪ್ರಕಾರ ಆಕೆ ಡಿಜಿಟಲ್ ಕ್ರಿಯೇಟರ್ ಆಗಿದ್ದಾರೆ. ಆಕೆ ರೂಪದರ್ಶಿಯೂ ಆಗಿದ್ದಾರೆ. ಈಕೆಗೆ ಮದುವೆಯಾಗಿದ್ದು ಗಂಡನೇ ಈಕೆಯ ಫೋಟೋಗ್ರಾಫರ್‌ ಆಗಿದ್ದಾನೆ. ಇನ್ ಸ್ಟಾಗ್ರಾಂನಲ್ಲಿ ಆಕೆಗೆ 7ಲಕ್ಷಕ್ಕೂ ಅಧಿಕ ಅನುಯಾಯಿಗಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT