ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಮಾನ್ಯತಾ ಟೆಕ್‌ಪಾರ್ಕ್‌ ಬಳಿಯ ಖಾಸಗಿ ಶಾಲೆಗೆ ಹುಸಿ ಬಾಂಬ್‌ ಬೆದರಿಕೆ, ಕೆಲಕಾಲ ಆತಂಕದ ವಾತಾವರಣ ಸೃಷ್ಟಿ

ಕಳೆದ ವರ್ಷ ಡಿಸೆಂಬರ್ 1 ರಂದು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪೊಲೀಸ್ ವ್ಯಾಪ್ತಿಯ 68 ಶಾಲೆಗಳಿಗೆ ಇದೇ ರೀತಿಯ ಬೆದರಿಕೆ ಮೇಲ್ ಬಂದಿತ್ತು. ಈ ಪ್ರಕರಣಗಳ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ.

ಬೆಂಗಳೂರು: ನಾಗವಾರದ ಮಾನ್ಯತಾ ಟೆಕ್‌ಪಾರ್ಕ್‌ ಬಳಿಯ ಖಾಸಗಿ ಶಾಲೆಯೊಂದಕ್ಕೆ ಬಾಂಬ್‌ ಬೆದರಿಕೆಯ ಇ–ಮೇಲ್‌ ಬಂದಿದ್ದು, ಇದರಿಂದ ಶಾಲೆಯಲಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿದ ಮೇಲೆ ಹುಸಿ ಬಾಂಬ್‌ ಬೆದರಿಕೆ ಸಂದೇಶ ಎಂಬುದು ತಿಳಿದುಬಂದಿತ್ತು. ಬಳಿಕಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ನಿಟ್ಟುಸಿರು ಬಿಟ್ಟರು.

ಶಾಲಾ ಆಡಳಿತಾಧಿಕಾರಿ ಪದ್ಮಿನಿ ರಾಘವೇಂದ್ರ ಅವರು ನಿತ್ಯದಂತೆಯೇ ಗುರುವಾರ ಬೆಳಿಗ್ಗೆಯೂ ಶಾಲೆಗೆ ಬಂದಿದ್ದು, ಇ–ಮೇಲ್‌ ಪರಿಶೀಲಿಸುತ್ತಿದ್ದ ವೇಳೆ askblrnorth@tipsglobal.net ನಿಂದ ಬಾಂಬ್‌ ಬೆದರಿಕೆ ಇ–ಮೇಲ್‌ ಬಂದಿರುವುದು ತಿಳಿದುಬಂದಿದೆ.

ಶಾಲೆಯ ಸುತ್ತಲೂ ಐದು ಬಾಂಬ್‌ಗಳನ್ನು ಇಡಲಾಗಿದೆ. ಮಧ್ಯಾಹ್ನ 1.30ರ ಸುಮಾರಿಗೆ ಎಲ್ಲ ಬಾಂಬ್‌ಗಳು ಸ್ಫೋಟವಾಗಲಿವೆ ಎಂದು ಬರೆದಿರುವುದು ಕಂಡುಬಂದಿದೆ. ಇದನ್ನು ಓದಿ ಗಾಬರಿಗೊಂಡ ಶಾಲಾ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಳಿಕ ಗೋವಿಂದಪುರ ಪೊಲೀಸರು, ಬಾಂಬ್ ನಿಷ್ಕ್ರಿಯ ದಳದೊಂದಿಗೆ ಶಾಲೆಗೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಯಾವುದೇ ಸ್ಫೋಟಕ ಅಥವಾ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ.

ಈ ಸಂಬಂಧ ಗೋವಿಂದಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಕಳೆದ ಮೇ ತಿಂಗಳಿನಲ್ಲಿ ನಗರದ ಎಂಟು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿತ್ತು.

ಕಳೆದ ವರ್ಷ ಡಿಸೆಂಬರ್ 1 ರಂದು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪೊಲೀಸ್ ವ್ಯಾಪ್ತಿಯ 68 ಶಾಲೆಗಳಿಗೆ ಇದೇ ರೀತಿಯ ಬೆದರಿಕೆ ಮೇಲ್ ಬಂದಿತ್ತು. ಈ ಪ್ರಕರಣಗಳ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...." ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾ ನೇರಾ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು, ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ SIT ಗೆ ಒತ್ತಾಯ!

ಮಂಗಳೂರು: KSRTC ಬಸ್ ಬ್ರೇಕ್ ಫೇಲ್; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು; Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆ- EY ವರದಿ

SCROLL FOR NEXT