ಸಿಎಂ ಸಿದ್ದರಾಮಯ್ಯ 
ರಾಜ್ಯ

ಮುಡಾ ಹಗರಣ: ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಅರ್ಜಿ; ಮಧ್ಯಾಹ್ನ 2-30ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠ ಈ ಅರ್ಜಿ ವಿಚಾರಣೆ ನಡೆಸುತ್ತಿದ್ದು, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ರಾಜ್ಯಪಾಲರ ಪರವಾಗಿ ವಾದಿಸುತ್ತಿದ್ದಾರೆ.

ಬೆಂಗಳೂರು: ಮುಡಾದಲ್ಲಿ ಅಕ್ರಮ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡ ಹೈಕೋರ್ಟ್, ಮಧ್ಯಾಹ್ನ 2-30ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠ ಈ ಅರ್ಜಿ ವಿಚಾರಣೆ ನಡೆಸುತ್ತಿದ್ದು, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ರಾಜ್ಯಪಾಲರ ಪರವಾಗಿ ವಾದಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಈಗಾಗಲೇ ವಾದ ಮಂಡಿಸಿರುವ ಸುಪ್ರೀಂಕೋರ್ಟ್ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ರಾಜ್ಯಪಾಲರ ಆದೇಶವನ್ನು ರದ್ದುಗೊಳಿಸುವಂತೆ ಮನವಿ ಮಾಡಿದ್ದಾರೆ.

ರಾಜ್ಯಪಾಲರು ಕಾನೂನು ಪ್ರಕಾರ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ ಎಂದು ಸಮರ್ಥಿಸಿಕೊಂಡ ತುಷಾರ್ ಮೆಹ್ತಾ, ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಲಾದ ಶೋಕಾಸ್ ನೋಟಿಸ್ ತಿರಸ್ಕರಿಸಿದ ಸಚಿವ ಸಂಪುಟದ 91 ಪುಟಗಳ ನಿರ್ಣಯವನ್ನು ನ್ಯಾಯಾಲಯದ ಗಮನಕ್ಕೆ ತಂದರು. ಮುಖ್ಯಮಂತ್ರಿ ಅವರನ್ನು ಸಂಪುಟದ ಸಚಿವರೇ ಆಯ್ಕೆ ಮಾಡುವುದರಿಂದ ಸಿಎಂ ವಿರುದ್ಧ ದೂರು ಬಂದಾಗ ರಾಜ್ಯಪಾಲರು ಸಂಪುಟದ ನಿರ್ಧಾರವನ್ನು ಪರಿಗಣಿಸುವುದು ಅನಿವಾರ್ಯವಲ್ಲ ಎಂದು ಮೆಹ್ತಾ ಒತ್ತಿ ಹೇಳಿದರು. ಸಿಎಂ ವಿರುದ್ಧ ಸಂಪುಟ ಸಭೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಕಡಿಮೆ ಎಂದು ಅವರು ತಿಳಿಸಿದರು.

ಪರಿಹಾರ ಪ್ಯಾಕೇಜ್ ಸರಾಸರಿಯನ್ನು 40:60 ರಿಂದ 50:50 ಕ್ಕೆ ಬದಲಾಯಿಸಲಾಗಿದೆ ಮತ್ತು ಈ ಸಂಬಂಧ ನಡೆದ ಮುಡಾದ ಸಾಮಾನ್ಯ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹಾಜರಾಗಿದ್ದಾರೆ. ಪ್ರತಿಷ್ಠಿತ ಪ್ರದೇಶದಲ್ಲಿ ಪರ್ಯಾಯ ಸೈಟ್‌ಗಳನ್ನು ಹಂಚಿಕೆ ಮಾಡಲಾಗಿದೆ. ಇಷ್ಟೆಲ್ಲ ಆದರೂ ರಾಜ್ಯ ಸಚಿವ ಸಂಪುಟ ಪಕ್ಷಾತೀತ ನಿರ್ಧಾರ ಕೈಗೊಂಡು ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ತಮ್ಮ ವಿವೇಚನೆ ಬಳಸಿ ಈ ವಿಚಾರದಲ್ಲಿ ಸ್ವತಂತ್ರ ನಿರ್ಧಾರ ಕೈಗೊಂಡಿದ್ದಾರೆ. ಸಚಿವ ಸಂಪುಟದ ಸಲಹೆ, ಸಿಎಂ ಸಿದ್ದರಾಮಯ್ಯ ಅವರ ಸ್ಪಷ್ಟನೆ, ಅರ್ಜಿದಾರರ ದೂರನ್ನು ರಾಜ್ಯಪಾಲರು ಗಣನೆಗೆ ತೆಗೆದುಕೊಂಡಿದ್ದಾರೆ ಎಂದು ತುಷಾರ್ ಮೆಹ್ತಾ ಹೇಳಿದರು.

ಅಧಿಕಾರದಲ್ಲಿರುವವರು ಶಿಕ್ಷೆಯನ್ನು ಎದುರಿಸುವುದಿಲ್ಲ ಎಂದು ಸಾಮಾನ್ಯವಾಗಿ ನಂಬುತ್ತಾರೆ ಎಂಬ ಸುಪ್ರೀಂಕೋರ್ಟ್ ತೀರ್ಪನ್ನು ತುಷಾರ್ ಮೆಹ್ತಾ ಉಲ್ಲೇಖಿಸಿದರು. ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17(ಎ) ಅಡಿಯಲ್ಲಿ ಪೊಲೀಸರು ಪೂರ್ವಾನುಮತಿ ಇಲ್ಲದೆ ತನಿಖೆಯನ್ನು ಕೈಗೆತ್ತಿಕೊಳ್ಳುವಂತಿಲ್ಲ ಎಂಬುದನ್ನು ನ್ಯಾಯಪೀಠ ಪರಿಗಣಿಸಿತು. ಆದಾಗ್ಯೂ, ಪೊಲೀಸರು ಸ್ವತಃ ಅನುಮತಿ ಪಡೆಯುವುದು ಅನಿವಾರ್ಯವಲ್ಲ; ಅಂತಹ ಅನುಮತಿಯನ್ನು ಪಡೆಯಲು ಯಾರಾದರೂ ಸೂಕ್ತ ಅಧಿಕಾರಿಗಳನ್ನು ಸಂಪರ್ಕಿಸಬಹುದು.

ಆಡಳಿತಾತ್ಮಕ ವಿಷಯಗಳಿಗಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಯಾವುದೇ ತನಿಖೆಯ ಅಗತ್ಯವಿಲ್ಲ ಎಂದು ತುಷಾರ್ ಮೆಹ್ತಾ ವಾದಿಸಿದರು. ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17(ಎ) ಅಡಿಯಲ್ಲಿ ತನಿಖೆ ಅಗತ್ಯವಿದೆಯೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸಲಾಗುತ್ತದೆ. ಈ ಪ್ರಕರಣದಲ್ಲಿ ಸಚಿವ ಸಂಪುಟ ಮತ್ತು ಸಿಎಂ ಸಿದ್ದರಾಮಯ್ಯ ನೀಡುವ ಪ್ರತಿ ಸ್ಪಷ್ಟನೆಗೆ ರಾಜ್ಯಪಾಲರು ಉತ್ತರಿಸುವ ಅಗತ್ಯವಿಲ್ಲ. ರಾಜ್ಯಪಾಲರ ಆದೇಶ ಅವರ ನಿಲುವನ್ನು ಸ್ಪಷ್ಟವಾಗಿ ಹೇಳುತ್ತದೆ ಮತ್ತು ಸಾಕ್ಷ್ಯಾಧಾರಗಳ ನಾಶದ ಸಂಭಾವ್ಯತೆಯ ಕಾರಣದಿಂದಾಗಿ ಎಲ್ಲವನ್ನೂ ಈ ಹಂತದಲ್ಲಿ ವಿವರಿಸಲಾಗುವುದಿಲ್ಲ. ಸಿಎಂ ಸಿದ್ದರಾಮಯ್ಯ ವಿರುದ್ಧದ ಎಲ್ಲಾ ಮೂರು ದೂರುಗಳಲ್ಲಿನ ಆರೋಪ ಒಂದೇ ಆಗಿದ್ದು, ಇನ್ನೆರಡು ದೂರುಗಳಿಗೆ ಸಂಬಂಧಿಸಿದಂತೆ ಶೋಕಾಸ್ ನೋಟಿಸ್ ನೀಡುವ ಅಗತ್ಯವಿಲ್ಲ ಎಂದು ಮೆಹ್ತಾ ಹೇಳಿದರು.

ಹಿರಿಯ ಕಾಂಗ್ರೆಸ್ ನಾಯಕನ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲ ಗೆಹ್ಲೋಟ್ ಅವರ ಅನುಮತಿಯನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ಇಂದಿಗೆ ಮುಂದೂಡಿತ್ತು.

ಇದಕ್ಕೂ ಮುನ್ನಾ ವಾದ ಮಂಡಿಸಿದ ಅಭಿಷೇಕ್ ಮನು ಸಿಂಘ್ವಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಒಪ್ಪಿಗೆ ನೀಡುವಾಗ ರಾಜ್ಯಪಾಲರು ನ್ಯಾಯದ ತತ್ವಗಳನ್ನು ಅನುಸರಿಸಿಲ್ಲ. ಈ ವಿಚಾರದಲ್ಲಿ ಸಚಿವ ಸಂಪುಟ ನೀಡಿದ ಸಲಹೆಯನ್ನು ರಾಜ್ಯಪಾಲರು ಪರಿಗಣಿಸಿಲ್ಲ ಎಂದು ಉಲ್ಲೇಖಿಸಿದರು. ಈ ಹಂತದಲ್ಲಿ ಸಿಎಂ ವಿರುದ್ಧದ ದೂರುಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ರಾಜ್ಯಪಾಲರು ಸಂಪುಟದ ಸಲಹೆಯನ್ನು ಪಡೆಯುವ ಅಗತ್ಯವಿದೆಯೇ ಎಂದು ಪೀಠವು ಸಿಂಘ್ವಿಯನ್ನು ಪ್ರಶ್ನಿಸಿತು.

ರಾಜ್ಯಪಾಲರ ಅಧಿಕಾರಕ್ಕೆ ಇತಿಮಿತಿ ಇದ್ದು, ರಾಜ್ಯಪಾಲರು ಇಂತಹ ಸಲಹೆಯನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಪ್ರತಿಕ್ರಿಯಿಸಿದ ಹಿರಿಯ ವಕೀಲ ಸಿಂಘ್ವಿ , ಸಿಎಂಗೆ ಮಧ್ಯಂತರ ಪರಿಹಾರ ಹಾಗೂ ಅಸಂವಿಧಾನಿಕ ರಾಜ್ಯಪಾಲರ ಆದೇಶವನ್ನು ರದ್ದುಗೊಳಿಸುವಂತೆ ಕೋರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT