ಮಳಖೇಡ ಕೋಟೆ ಗೋಡೆ ಕುಸಿತ 
ರಾಜ್ಯ

Karnataka Rain: ಧರೆಗುರುಳಿದ ಐತಿಹಾಸಿಕ ಮಳಖೇಡ ಕೋಟೆ ಗೋಡೆ

ಕಲಬುರಗಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಇದೇ ವೇಳೆ ಮಳಖೇಡ ರಾಷ್ಟ್ರಕೂಟ ಕೋಟೆ ಗೋಡೆ ಕುಸಿದುಬಿದ್ದಿದೆ. ಮಳೆಯಿಂದಾಗಿ ಕೋಟೆಯ ಗೋಡೆಗಳಲ್ಲಿ ನೀರು ನಿಂತಿದ್ದು, ಶುಕ್ರವಾರ ರಾತ್ರಿಯಿಂದ ಮಳೆ ಆರಂಭಗೊಂಡಿದ್ದು ಶನಿವಾರವೂ ಮಳೆ ಮುಂದುವರೆದಿದೆ.

ಕಲಬುರಗಿ: ಕರ್ನಾಟಕದ ಹೆಮ್ಮೆಯ ಐತಿಹಾಸಿಕ ಸ್ಮಾರಕ ಮಳಖೇಡ ರಾಷ್ಟ್ರಕೂಟ ಕೋಟೆ ಗೋಡೆ ಕುಸಿದು ಬಿದ್ದಿದ್ದು, ಇತಿಹಾಸಕಾರರ ಆಕ್ರೋಶಕ್ಕೆ ಕಾರಣವಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಇದೇ ವೇಳೆ ಮಳಖೇಡ ರಾಷ್ಟ್ರಕೂಟ ಕೋಟೆ ಗೋಡೆ ಕುಸಿದುಬಿದ್ದಿದೆ. ಮಳೆಯಿಂದಾಗಿ ಕೋಟೆಯ ಗೋಡೆಗಳಲ್ಲಿ ನೀರು ನಿಂತಿದ್ದು, ಶುಕ್ರವಾರ ರಾತ್ರಿಯಿಂದ ಮಳೆ ಆರಂಭಗೊಂಡಿದ್ದು ಶನಿವಾರವೂ ಮಳೆ ಮುಂದುವರೆದಿದೆ.

ನಿಂರತ ಮಳೆಗೆ ಕೋಟೆ ಗೋಡೆಗಳು ತೇವಗೊಂಡಿದ್ದು, ಮಣ್ಣು ಸಡಿಲವಾಗಿ ಕಲ್ಲಿನ ಗೋಡೆ ಕುಸಿದುಬಿದ್ದಿದೆ. ಗೋಡೆ ಕುಸಿಯುತ್ತಿರುವ ವಿಡಿಯೋ ಸಾಮಾಜಿಕ ಲದ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇನ್ನು ಗೋಡೆ ಕುಸಿತ ಪ್ರಕರಣದಿಂದ ಕೋಟೆ ಅಕ್ಕಪಕ್ಕದ ನಿವಾಸಿಗಳು ಆತಂಕಗೊಂಡು, ಬೆಚ್ಚಿಬಿದ್ದಿದ್ದಾರೆ. ಅದೃಷ್ಟವಶಾತ್ ಯಾರಿಗೂ ಪ್ರಾಣ ಹಾನಿಯಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

ಜೀರ್ಣೋದ್ಧಾರ ಮಾಡಿದ್ದ ಸರ್ಕಾರ

ರಾಷ್ಟ್ರಕೂಟರ ಕಾಲದಲ್ಲಿ ನಿರ್ಮಿಸಿದ್ದ ಕೋಟೆ ಐತಿಹಾಸಿಕವಾಗಿ ಮಹತ್ವ ಪಡೆದುಕೊಂಡಿದ್ದು, ರಾಷ್ಟ್ರಕೂಟರ ರಾಜ ಅಮೋಘವರ್ಷ ನೃಪತುಂಗ ಮಳಖೇಡ (ಮಾನ್ಯಖೇಟ) ರಾಜಧಾನಿಯನ್ನಾಗಿ ಮಾಡಿಕೊಂಡಿದ್ದರು. ಆಸ್ಥಾನದಲ್ಲಿದ್ದ ಕವಿ ಶ್ರೀವಿಜಯ 'ಕವಿರಾಜ ಮಾರ್ಗ' ಗ್ರಂಥ ಬರೆದಿದ್ದ. ಇದು ಕನ್ನಡದ ಮೊದಲ ಉಪಲಬ್ದ ಕೃತಿಯಾಗಿದೆ. ಇಂತಹ ಐತಿಹಾಸಿಕ ಚರೀತ್ರೆಯುಳ್ಳ‌ ಮಳಖೇಡ ಕೋಟೆಯನ್ನು 2016-18ರ ಅವಧಿಯಲ್ಲಿ ಅಂದಿನ ಸಚಿವರಾಗಿದ್ದ ಡಾ.ಶರಣಪ್ರಕಾಶ ಪಾಟೀಲ ಅವರು 5 ಕೋಟಿ‌ ರೂ ಅನುದಾನ ನೀಡಿ ಜೀರ್ಣೋದ್ಧಾರ ಮಾಡಿಸಿದ್ದರು.

ಜೊತೆಗೆ ಆಗಿನ ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ಅವರೂ ಕೂಡ1 ಕೋಟಿ ಅನುದಾನ ನೀಡಿದ್ದರು. 2018ರಲ್ಲಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಪಾಟೀಲ ಅವರ ನೇತೃತ್ವದಲ್ಲಿ ಕೋಟೆ ಜೀರ್ಣೋದ್ಧಾರದ ಜೊತೆಗೆ ಸರ್ಕಾರದಿಂದ ರಾಷ್ಟ್ರಕೂಟರ ಉತ್ಸವ ಜರುಗಿತು. ಹಳೆ ಗೋಡೆಗಳು ಬಿದ್ದಿಲ್ಲ. ಆದರೆ,ಜೀರ್ಣೋದ್ಧಾರ ಮಾಡಿದ ಗೋಡೆಯೇ ಬಿದ್ದಿದ್ದು, ಜನರಲ್ಲಿ ಅಚ್ಚರಿ ಮೂಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT