ಬೆಂಗಳೂರು ಇಸ್ಕಾನ್ ಅಧ್ಯಕ್ಷ ಮಧು ಪಂಡಿತ್ ದಾಸ್ 
ರಾಜ್ಯ

ಅಲ್ಪಸಂಖ್ಯಾತರ ರಕ್ಷಣೆಗೆ ಬಾಂಗ್ಲಾದೊಂದಿಗೆ ಮಾತುಕತೆ ನಡೆಸಿ: ಕೇಂದ್ರ ಸರ್ಕಾರಕ್ಕೆ ಇಸ್ಕಾನ್ ಬೆಂಗಳೂರು ಮನವಿ

ಚಿನ್ಮೋಯ್ ಕೃಷ್ಣ ಪ್ರಭು, ಇಸ್ಕಾನ್ ಭಕ್ತರು ಸೇರಿದಂತೆ ಮತ್ತಿತರ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆಯನ್ನು ಬಾಂಗ್ಲಾದೇಶ ಸರ್ಕಾರ ಖಾತ್ರಿಪಡಿಸುತ್ತದೆ ಎಂಬ ವಿಶ್ವಾಸದಲ್ಲಿದ್ದೇವೆ

ಬೆಂಗಳೂರು: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ಹಿಂಸಾಚಾರದ ಬಗ್ಗೆ ಇಸ್ಕಾನ್ ಬೆಂಗಳೂರು ಅಧ್ಯಕ್ಷ ಮಧು ಪಂಡಿತ್ ದಾಸ್ ಕಳವಳ ವ್ಯಕ್ತಪಡಿಸಿದ್ದು, ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲು ನೆರೆಯ ದೇಶಗಳೊಂದಿಗೆ ಮಾತುಕತೆ ನಡೆಸಬೇಕು ಎಂದು ಕೇಂದ್ರವನ್ನು ಒತ್ತಾಯಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರ ಬಗ್ಗೆ ಒಗ್ಗಟ್ಟು ಪ್ರದರ್ಶಿಸಲು ಇಸ್ಕಾನ್ ದೇವಾಲಯ ಬಳಿ ಆಯೋಜಿಸಲಾದ ಶಾಂತಿಯುತ ಸಂಕೀರ್ತನೆಯಲ್ಲಿ ಮಾತನಾಡಿದ ದಾಸ್, ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರದ ಬಗ್ಗೆ ವರದಿಗಳನ್ನು ನಾವು ನೋಡಿದ್ದೇವೆ. ಅಲ್ಲಿನ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ಹೊಂದಿರುವುದಾಗಿ ತಿಳಿಸಿದರು.

ಚಿನ್ಮೋಯ್ ಕೃಷ್ಣ ಪ್ರಭು, ಇಸ್ಕಾನ್ ಭಕ್ತರು ಸೇರಿದಂತೆ ಮತ್ತಿತರ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆಯನ್ನು ಬಾಂಗ್ಲಾದೇಶ ಸರ್ಕಾರ ಖಾತ್ರಿಪಡಿಸುತ್ತದೆ ಎಂಬ ವಿಶ್ವಾಸದಲ್ಲಿದ್ದೇವೆ ಎಂದರು.

ಬಾಂಗ್ಲಾದೇಶ ಸನಾತನ ಜಾಗರಣ ಮಂಚ್‌ನ ವಕ್ತಾರ ಚಿನ್ಮೋಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನು ಢಾಕಾ ಪೊಲೀಸರು ಇತ್ತೀಚೆಗೆ ಬಂಧಿಸಿರುವುದು ಸೇರಿದಂತೆ ಇತ್ತೀಚಿನ ತಿಂಗಳುಗಳಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯ ದಾಳಿಗೆ ಒಳಗಾಗುತ್ತಿರುವುದನ್ನು ಮಧು ಪಂಡಿತ್ ದಾಸ್ ಪ್ರಸ್ತಾಪಿಸಿದರು.

ಬಾಂಗ್ಲಾದಲ್ಲಿ ಹಿಂದೂ ದೇವಾಲಯಗಳನ್ನು ಗುರಿಯಾಗಿಸಲಾಗುತ್ತಿದೆ. ಸನಾತನ ಧರ್ಮದ ಅನುಯಾಯಿಗಳು ಗಂಭೀರ ದಾಳಿಗೆ ಒಳಗಾಗುತ್ತಿದ್ದಾರೆ. ಇದನ್ನು ನಿಲ್ಲಿಸಬೇಕಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'Ukraine war ನ ಪ್ರಾಥಮಿಕ ಹೂಡಿಕೆದಾರರು'.. ರಷ್ಯಾ ಇಂಧನ ಖರೀದಿ ಕೂಡಲೇ ನಿಲ್ಲಿಸಿ': ಭಾರತ, ಚೀನಾ ವಿರುದ್ಧ ಮತ್ತೆ Donald Trump ಕಿಡಿ!

Shreyas Iyer ದಿಢೀರ್‌ ರಾಜೀನಾಮೆ; BCCI ಗೆ ಪತ್ರ..! ಇಷ್ಟಕ್ಕೂ ಆಗಿದ್ದೇನು?

Bengaluru: 'ನನ್ ಗಂಡ ನಪುಂಸಕ.. 2 ಕೋಟಿ ರೂ ಕೊಡ್ಸಿ...'; ನವ ವಿವಾಹಿತೆ ಬೇಡಿಕೆ! ಆದ್ರೆ ಗಂಡನಿಂದಲೇ FIR

ಮೋಹನ್ ಲಾಲ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; SRK, ವಿಕ್ರಾಂತ್ ಮಾಸ್ಸೆ ಹಾಗೂ ರಾಣಿ ಮುಖರ್ಜಿಗೆ ಅತ್ಯುತ್ತಮ ನಟ-ನಟಿ ಪ್ರಶಸ್ತಿ ಪ್ರದಾನ!

'ಭಾರತ ವಿರುದ್ಧ ಗೆಲ್ಲಬೇಕಿದ್ರೆ ಪಾಕ್ ಸೇನಾ ಮುಖ್ಯಸ್ಥರೇ ಬ್ಯಾಟ್ ಹಿಡೀಬೇಕು': PCB ವಿರುದ್ಧ Imran Khan ಗರಂ!

SCROLL FOR NEXT