ಸಿದ್ದರಾಮಯ್ಯ  online desk
ರಾಜ್ಯ

International Cricket Stadium in Tumkur: ಸಿಎಂ ಶಂಕುಸ್ಥಾಪನೆ; 50 ಎಕರೆ ಪ್ರದೇಶ ಹಸ್ತಾಂತರ

ಕ್ರೀಡಾಂಗಣ ನಿರ್ಮಾಣಕ್ಕಾಗಿ ಕೆಎಸ್ ಸಿಎಗೆ ಸಿಎಂ ಸಿದ್ದರಾಮಯ್ಯ 50 ಎಕರೆ ಪ್ರದೇಶವನ್ನು ಹಸ್ತಾಂತರಿಸಿದ್ದಾರೆ.

ತುಮಕೂರು: ತುಮಕೂರಿನ ಸೋರೆಕುಂಟೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣವಾಗಲಿದ್ದು, ಈ ಯೋಜನೆಗೆ ಇಂದು (ಡಿ.02) ರಂದು ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಕ್ರೀಡಾಂಗಣ ನಿರ್ಮಾಣಕ್ಕಾಗಿ ಕೆಎಸ್ ಸಿಎಗೆ ಸಿಎಂ ಸಿದ್ದರಾಮಯ್ಯ 50 ಎಕರೆ ಪ್ರದೇಶವನ್ನು ಹಸ್ತಾಂತರಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಜಿಲ್ಲೆಯ ಅಭಿವೃದ್ಧಿಗೆ ಈ ಯೋಜನೆಯು ಸಾಮರ್ಥ್ಯ ಹೊಂದಿದೆ ಎಂದು ಹೇಳಿದ್ದಾರೆ.

ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ 50 ಎಕರೆ ಭೂಮಿಯನ್ನು ಮಂಜೂರು ಮಾಡಿದ್ದೇವೆ. ಈ ಉಪಕ್ರಮ ಈ ಪ್ರದೇಶದ ಆರ್ಥಿಕ ಬೆಳವಣಿಗೆ ಮತ್ತು ಒಟ್ಟಾರೆ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

ಕ್ರಿಕೆಟ್ ಆಸಕ್ತರ ನಿರೀಕ್ಷೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಎಸ್‌ಸಿಎ ನಿರ್ಮಾಣವನ್ನು ತ್ವರಿತಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಇದೇ ವೇಳೆ ಒತ್ತಾಯಿಸಿದ್ದಾರೆ. ಮೈಸೂರಿನಲ್ಲೂ ಇದೇ ಯೋಜನೆಗೆ ಭೂಮಿ ಮಂಜೂರು ಮಾಡುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದರು.

ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಸ್ಥಳೀಯ ಶಾಸಕರು, ಕೆಎಸ್‌ಸಿಎ ಅಧ್ಯಕ್ಷ ರಘುರಾಮ ಭಟ್‌ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

DCM ಕುರ್ಚಿ ಮೇಲೆ ಕಣ್ಣಿಟ್ಟವರಿಗೆ ಶಾಕ್! ಒಬ್ಬರಿಗೆ ಮಾತ್ರ ಉಪ ಮುಖ್ಯಮಂತ್ರಿ ಸ್ಥಾನ; ಯಾರೂ ಆ ಪ್ರಭಾವಿ ನಾಯಕ?

ಸಿನಿಮೀಯ ಶೈಲಿಯಲ್ಲಿ ಮಾಜಿ MLC ಕಿಡ್ನ್ಯಾಪ್: 3 ಕೋಟಿ ರೂ ಗೆ ಡಿಮ್ಯಾಂಡ್; ದುಷ್ಟರಿಂದ ದಯಾನಂದ ರೆಡ್ಡಿ ಬಚಾವ್​​ ಆಗಿದ್ದೇ ರೋಚಕ!

'Delayed, not denied': ಇಷ್ಟು ವರ್ಷ ಪಟ್ಟ ಪರಿಶ್ರಮ, ಬದ್ಧತೆಗೆ ದೊರೆತ ಪ್ರತಿಫಲ- ನಿಯೋಜಿತ ಸಿಎಂ ಡಿ.ಕೆ ಶಿವಕುಮಾರ್

ವಿಧಾನಸೌಧದಲ್ಲಿರುವ CM ಕಚೇರಿಗೆ ಜ್ಯೋತಿಷಿಗಳ ಭೇಟಿ; ಕುರ್ಚಿ ದಿಕ್ಕು ಬದಲು, ಅಜ್ಜಯ್ಯನ ಫೋಟೋ ಅಳವಡಿಕೆ!

ಸ್ಪೀಕರ್ ಯುಟಿ ಖಾದರ್ ರಿಂದ ಸಿಬ್ಬಂದಿಗೆ ಔತಣಕೂಟ; ಪಕ್ಕಾ ಆಯ್ತಾ ಸಚಿವ ಸ್ಥಾನ?

SCROLL FOR NEXT