ಮಳೆ (ಸಾಂದರ್ಭಿಕ ಚಿತ್ರ) 
ರಾಜ್ಯ

Fengal Cyclone: ನಾಳೆ ಕರ್ನಾಟಕದ 7 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಫೆಂಗಲ್ ಚಂಡಮಾರುತದ ಪರಿಣಾಮ ಮುಂಜಾಗ್ರಾತಾ ಕ್ರಮವಾಗಿ ನಾಳೆ ಅಂದರೆ ಡಿಸೆಂಬರ್ 03, ಮಂಗಳವಾರದಂದು ರಾಜ್ಯದ 7 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಿನ್ನಲೆಯಲ್ಲಿ ರಾಜ್ಯದ 7 ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಫೆಂಗಲ್ ಚಂಡಮಾರುತದ ಪರಿಣಾಮ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ ಅವಾಂತರಗಳೇ ಸೃಷ್ಟಿಯಾಗಿದ್ದು, ಮುಂಜಾಗ್ರಾತಾ ಕ್ರಮವಾಗಿ ನಾಳೆ ಅಂದರೆ ಡಿಸೆಂಬರ್ 03, ಮಂಗಳವಾರದಂದು ರಾಜ್ಯದ 7 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮೈಸೂರು, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಕೋಲಾರ, ಚಿಕ್ಕಮಗಳೂರು, ಉಡುಪಿ‌ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಗಳ ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.

ಕೊಡಗಿನಲ್ಲಿ ರೆಡ್ ಅಲರ್ಟ್

ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ನಾಳೆ ಕೊಡಗು ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.

ನಾಳೆಯೂ(ಡಿಸೆಂಬರ್ 3) ಸಹ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆಯು ನಾಳೆ ರೆಡ್​ ಘೋಷಣೆ ಮಾಡಿದೆ. ಜಿಲ್ಲಾದ್ಯಂತ ತುಂತುರು ಮಳೆಯಾಗುತ್ತಿದ್ದು, ನಾಳೆಯೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ದಕ್ಷಿಣಕನ್ನಡ ಜಿಲ್ಲೆಯಲ್ಲೂ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಇಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದು, ಈ ಹಿನ್ನಲೆಯಲ್ಲಿ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ(ಪದವಿಪೂರ್ವ) ನಾಳೆ ರಜೆ ನೀಡಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಕೋಲಾರದಲ್ಲೂ ಸಹ ಭಾರಿ ಮಳೆಯಾಗುತ್ತಿದ್ದು, ನಿರಂತರ ಜಡಿ ಮಳೆ ಹಾಗೂ ವಿಪರೀತ ಚಳಿ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ದೃಷ್ಟಿಯಿಂದ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳ ಸಲಹೆ ಮೇರೆಗೆ ಕೋಲಾರ ಜಿಲ್ಲೆಯಲ್ಲಿ ನಾಳೆಯೂ ಸಹ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ನಾಳಿನ ರಜೆಯನ್ನು ಮತ್ತೊಂದು ರಜಾ ದಿನದಲ್ಲಿ ತರಗತಿ ನಡೆಸಿ ಸರಿದೂಗಿಸಲು ಸೂಚನೆ ನೀಡಿ ಕೋಲಾರ ಡಿಸಿ ಅಕ್ರಂ ಪಾಷಾ ಆದೇಶಿಸಿದ್ದಾರೆ.

ಇತ್ತ ನಾಳೆ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಮನಗರ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಆದೇಶ ಹೊರಡಿಸಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಿನಾಂಕ 3/12/2024ರ ಮಂಗಳವಾರ (ನಾಳೆ) ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( ದ್ವಿತೀಯ PUC ವರೆಗೆ) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಶಾಲಾಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.

ಇನ್ನು ಕಾಫಿನಾಡು ಚಿಕ್ಕಮಗಳೂರಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಜೋರಾಗಿದ್ದು, ಇಲ್ಲಿಯೂ ಭಾರಿ ಮಳೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ನಾಳೆ ಶಾಲೆಗಳಿಗೆ ರಜೆ ನೀಡಲಾಗಿದ್ದು, ಕಾಲೇಜು ಹೊರತುಪಡಿಸಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಅಲ್ಲದೇ ಸಹಾಯಕ್ಕಾಗಿ ಕಂಟ್ರೋಲ್ ರೂಂ ನಂಬರ್ ‌08262_238950 ಕರೆ ಮಾಡುವಂತೆ ಸೂಚನೆ ನೀಡಿದ್ದಾರೆ.

ಉಡುಪಿ ಜಿಲ್ಲೆಯಲ್ಲೂ ಆರೆಂಜ್ ಅಲಾರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT