ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ 
ರಾಜ್ಯ

RPF ಕಾರ್ಯಾಚರಣೆ: ರೈಲುಗಳು, ಪ್ಲಾಟ್ ಫಾರಂಗಳಲ್ಲಿ ಮನೆಬಿಟ್ಟು ಬಂದ 253 ಮಕ್ಕಳ ರಕ್ಷಣೆ!

ಕಳೆದ ವರ್ಷಕ್ಕೆ ಹೋಲಿಸಿದರೆ ಡಿಸೆಂಬರ್‌ ನಲ್ಲಿ ಈ ಸಂಖ್ಯೆ ಹೆಚ್ಚಾಗಿದೆ. 2023ರ ಜನವರಿಯಿಂದ ಡಿಸೆಂಬರ್‌ವರೆಗೆ 50 ಬಾಲಕಿಯರು ಸೇರಿದಂತೆ ಒಟ್ಟು 237 ಮಕ್ಕಳನ್ನು ರಕ್ಷಿಸಲಾಗಿತ್ತು.

ಬೆಂಗಳೂರು: 2024 ರಲ್ಲಿ ರೈಲ್ವೆ ರಕ್ಷಣಾ ಪಡೆಯ ಮಕ್ಕಳ ಕಳ್ಳಸಾಗಣೆ ವಿರೋಧಿ ಘಟಕದಿಂದ 49 ಬಾಲಕಿಯರು ಸೇರಿದಂತೆ ಒಟ್ಟು 253 ಮಕ್ಕಳನ್ನು ಸಂಭಾವ್ಯ ಶೋಷಣೆಯಿಂದ ರಕ್ಷಿಸಲಾಗಿದೆ. ರೈಲಿನಲ್ಲಿ ಪ್ರಯಾಣಿಸುವ ದುರ್ಬಲ ಮಕ್ಕಳ ಸುರಕ್ಷತೆ ಖಾತ್ರಿ ನಿಟ್ಟಿನಲ್ಲಿ ಈ ವಿಶೇಷ ಪಡೆ, 'ನನ್ಹೆ ಫರಿಷ್ಟೆಯನ್ನು ('Nanhe Farishteh) ಮೇ 2018 ರಲ್ಲಿ ಭಾರತೀಯ ರೈಲ್ವೆಯಾದ್ಯಂತ ಸ್ಥಾಪಿಸಲಾಯಿತು. ಕಳೆದ ವರ್ಷಕ್ಕೆ ಹೋಲಿಸಿದರೆ ಡಿಸೆಂಬರ್‌ ನಲ್ಲಿ ಈ ಸಂಖ್ಯೆ ಹೆಚ್ಚಾಗಿದೆ. 2023ರ ಜನವರಿಯಿಂದ ಡಿಸೆಂಬರ್‌ವರೆಗೆ 50 ಬಾಲಕಿಯರು ಸೇರಿದಂತೆ ಒಟ್ಟು 237 ಮಕ್ಕಳನ್ನು ರಕ್ಷಿಸಲಾಗಿತ್ತು.

ಈ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಬೆಂಗಳೂರು ಹೆಚ್ಚುವರಿ ವಿಭಾಗೀಯ ರೈಲ್ವೆ ಮ್ಯಾನೇಜರ್, ಪರೀಕ್ಷಿತ್ ಮೋಹನ್‌ಪುರಿಯಾ, ಈ 253 ಮಕ್ಕಳನ್ನು ಸಂಭಾವ್ಯ ಶೋಷಣೆಯಿಂದ ರಕ್ಷಿಸಲಾಗಿದೆ. ಈ ಮಕ್ಕಳ ಪೈಕಿ ಬಹುಪಾಲು ಮಕ್ಕಳನ್ನು ಬಾಲಕಾರ್ಮಿಕತೆ, ವೇಶ್ಯಾವಾಟಿಕೆ ಮತ್ತಿತರ ಹೀನ ಕೆಲಸಗಳಲ್ಲಿ ಬಳಸಿಕೊಳ್ಳಲಾಗುತ್ತದೆ. ಕೆಲ ಮಕ್ಕಳು ಪೋಷಕರೊಂದಿಗ ಸಣ್ಣ ಜಗಳ ಅಥವಾ ಪರೀಕ್ಷೆಗಳಲ್ಲಿ ಕಳಪೆ ಸಾಧನೆ ನಂತರ ಮನೆ ಬಿಟ್ಟು ಬರುತ್ತಿದ್ದಾರೆ ಎಂದು ಮತ್ತೋರ್ವ ಅಧಿಕಾರಿ ತಿಳಿಸಿದರು.

RPF ಹಿರಿಯ ವಿಭಾಗೀಯ ಭದ್ರತಾ ಕಮಿಷನರ್ ಶ್ರೇಯನ್ಸ್ ಚಿಂಚವಾಡೆ ಮಾತನಾಡಿ, “ರೈಲ್ವೆ ರಕ್ಷಣಾ ಪಡೆ, ಸರ್ಕಾರಿ ರೈಲ್ವೆ ಪೊಲೀಸರು ಬಚಾಪನ್ ಬಚಾವೋ ಆಂದೋಲನದೊಂದಿಗೆ ಮಕ್ಕಳ ಸುರಕ್ಷಿತ ಸಂಚಾರಕ್ಕಾಗಿ ರೈಲುಗಳು ಮತ್ತು ನಿಲ್ದಾಣದಲ್ಲಿ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ತೊಂದರೆಯಲ್ಲಿರುವ ಯಾವುದೇ ಮಕ್ಕಳಿಗೆ ತಿಳಿಸಲು ರೈಲ್ವೆ ಸಹಾಯವಾಣಿ 139 ಲಭ್ಯವಿದೆ ಎಂದು ತಿಳಿಸಿದರು.

ರಕ್ಷಣಾ ಕ್ರಮಗಳ ಬಗ್ಗೆ ವಿವರಿಸಿದ ಮೋಹನ್ ಪುರಿಯಾ, ರಕ್ಷಿಸಿದ ಮಕ್ಕಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಮತ್ತು ಎನ್ ಜಿಒಗಳಿಗೆ ಹಸ್ತಾಂತರಿಸಲಾಗುತ್ತದೆ. ನಂತರ ಮಕ್ಕಳ ಕಲ್ಯಾಣ ಸಮಿತಿಗೆ ಕಳುಹಿಸಲಾಗುತ್ತದೆ. ಈ ಸಮಿತಿಗಳು ಸಮಾಲೋಚನೆ ನಡೆಸಿದ ಬಳಿಕ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು.

ಆರ್‌ಪಿಎಫ್ ಬೆಂಗಳೂರು ವಿಭಾಗ ಎಂಟು ಮೀಸಲಾದ ಮಾನವ ಕಳ್ಳಸಾಗಣೆ ವಿರೋಧಿ ಘಟಕಗಳನ್ನು ನಿರ್ವಹಿಸುತ್ತದೆ. ಕೆಎಸ್‌ಆರ್ ಬೆಂಗಳೂರು ಸಿಟಿ ಜಂಕ್ಷನ್, ಯಶವಂತಪುರ, ಬೆಂಗಳೂರು ಕಂಟೋನ್ಮೆಂಟ್, ಸರ್ ಎಂ ವಿಶ್ವೇಶ್ವರಯ್ಯ ನಿಲ್ದಾಣ, ಬೈಯಪ್ಪನಹಳ್ಳಿ, ಬಂಗಾರಪೇಟೆ, ಮಂಡ್ಯ, ಧರ್ಮಪುರಿ ಮತ್ತು ಹಿಂದೂಪುರದಲ್ಲಿ ತಲಾ ಒಬ್ಬರು ಯುವ ಅಧಿಕಾರಿ ಮತ್ತು ಇಬ್ಬರು ಸಿಬ್ಬಂದಿ ಇದ್ದಾರೆ.

ಈ ಘಟಕಗಳು ಮಕ್ಕಳ ರಕ್ಷಣೆ ಮತ್ತು ಕಳ್ಳಸಾಗಣೆ ಪ್ರಕರಣಗಳನ್ನು ಪತ್ತೆಹಚ್ಚಲು ವಿಶೇಷವಾಗಿ ತರಬೇತಿ ಪಡೆದಿದ್ದು, ವಾರದ 24 ಗಂಟೆಯೂ ಕಾರ್ಯನಿರ್ವಹಿಸುತ್ತವೆ ಎಂದು ADRM ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT