ವಿಜಯೇಂದ್ರ- ಬಸನಗೌಡ ಪಾಟೀಲ್ ಯತ್ನಾಳ್ online desk
ರಾಜ್ಯ

ವಿಜಯೇಂದ್ರ ನಕಲಿ ನೊಟೀಸ್ ಮಾಡಿಸಿದ್ದಾನೆ: ಯತ್ನಾಳ್ ಹೊಸ ಬಾಂಬ್

ನನಗೆ ಈ ವರೆಗೂ ಅಧಿಕೃತವಾಗಿ ಪಕ್ಷದ ಕೇಂದ್ರ ಸಮಿತಿಯಿಂದ ನೊಟೀಸ್ ಬಂದಿಲ್ಲ, ವಾಟ್ಸ್ ಆಪ್ ನಲ್ಲಿ ನೊಟೀಸ್ ಬಂದಿದೆ. ವಾಟ್ಸ್ ಆಪ್ ನಲ್ಲಿ ಬಂದಿರುವುದನ್ನು ಹೇಗೆ ನಂಬಲಿ?

ದೆಹಲಿ: ಸ್ವಪಕ್ಷೀಯರ ವಿರುದ್ಧವೇ ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮಗೆ ಶಿಸ್ತು ಸಮಿತಿ ನೊಟೀಸ್ ಬಂದಿರುವ ಬಗ್ಗೆ ಹೊಸ ವರಸೆ ತೆಗೆದಿರುವ ಯತ್ನಾಳ್, ವಿಜಯೇಂದ್ರನೇ ನಕಲಿ ನೊಟೀಸ್ ಮಾಡಿಸಿದ್ದಾನೆ ಎಂದು ಆರೋಪಿಸಿದ್ದಾರೆ.

"ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಯತ್ನಾಳ್, ನನಗೆ ಈ ವರೆಗೂ ಅಧಿಕೃತವಾಗಿ ಪಕ್ಷದ ಕೇಂದ್ರ ಸಮಿತಿಯಿಂದ ನೊಟೀಸ್ ಬಂದಿಲ್ಲ, ವಾಟ್ಸ್ ಆಪ್ ನಲ್ಲಿ ನೊಟೀಸ್ ಬಂದಿದೆ. ವಾಟ್ಸ್ ಆಪ್ ನಲ್ಲಿ ಬಂದಿರುವುದನ್ನು ಹೇಗೆ ನಂಬಲಿ? ವಿಜಯೇಂದ್ರನೇ ನಕಲಿ ನೊಟೀಸ್ ಮಾಡಿಸಿದ್ದಾನೆ ಎನಿಸುತ್ತಿದೆ. ಅಧಿಕೃತವಾಗಿ ನೊಟೀಸ್ ಬಂದ ಬಳಿಕ ಸರಿಯಾದ ಉತ್ತರ ನೀಡುತ್ತೇನೆ" ಎಂದು ಹೇಳಿದ್ದಾರೆ.

ಇದೇ ವೇಳೆ ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಯತ್ನಾಳ್, ನಾನು ಸ್ವಂತ ಸಾಮರ್ಥ್ಯದ ಮೇಲೆ ನಾಯಕನಾಗಿದ್ದೀನಿ. ಯಡಿಯೂರಪ್ಪ ಭಯದಿಂದ ವಿಜಯೇಂದ್ರನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದಾರೆ, ವಿಜಯೇಂದ್ರ ಇನ್ನೂ ಸಣ್ಣ ಹುಡುಗ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ನೊಟೀಸ್ ಸಂಬಂಧ ನಾನು ಯಾವುದೇ ಹೈಕಮಾಂಡ್ ನಾಯಕರನ್ನೂ ಭೇಟಿ ಮಾಡುವುದಿಲ್ಲ ಎಂದು ಯತ್ನಾಳ್ ಸ್ಪಷ್ಟನೆ ನೀಡಿದ್ದಾರೆ. ನನಗೆ ಬಂದಿರುವ ನೊಟೀಸ್ ನಕಲಿ ಎಂದೆನಿಸುತ್ತಿದೆ. ವಿಜಯೇಂದ್ರ ಅವರಪ್ಪನ ಸಹಿ ಮಾಡಿ ಕಡತಗಳನ್ನು ರವಾನಿಸಿರುವ ಉದಾಹರಣೆಗಳಿವೆ. ಈ ಬಗ್ಗೆ ಹರಿಪ್ರಸಾದ್ ಆರೋಪ ಮಾಡಿದ್ದರು ಎಂದು ಯತ್ನಾಳ್ ಹೊಸ ಆರೋಪ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: 3 ವರ್ಷ ವಯೋಮಿತಿ ಸಡಿಲಿಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಟ್ರಂಪ್ ಹುಚ್ಚಾಟ: ಇದೀಗ ವಿದೇಶಿ ಸಿನಿಮಾಗಳ ಮೇಲೆ ಶೇ. 100ರಷ್ಟು ಸುಂಕ; ಕಾಂತಾರ 2 ಚಿತ್ರದ ಕಥೆಯೇನು?

New Drama! ಭಾರತಕ್ಕೆ ಏಷ್ಯಾ ಕಪ್‌ ನೀಡಲು ಹೊಸ ಷರತ್ತು ಹಾಕಿದ ನಖ್ವಿ, ಹೇಳಿದ್ದೇನು?

'Naqvi vs 3rd umpire': ಭಾರತ ಕ್ರಿಕೆಟ್ ತಂಡ ಅಭಿನಂದಿಸದ ಕಾಂಗ್ರೆಸ್; ಬಿಜೆಪಿ ಟೀಕೆಗೆ ಹೆಂಗಿದೆ ತಿರುಗೇಟು?

Ceasefire offer: ನಕ್ಸಲೀಯರೊಂದಿಗೆ 'ಕದನ ವಿರಾಮ' ಘೋಷಣೆಗೆ ಕೇಂದ್ರ ಸರ್ಕಾರವೇಕೆ ಒಪ್ಪುತ್ತಿಲ್ಲ?- ಡಿ. ರಾಜಾ

SCROLL FOR NEXT