ಸಂಗ್ರಹ ಚಿತ್ರ 
ರಾಜ್ಯ

Fengal Cyclone: ಮಳೆ ಇದ್ದರೂ ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸದ ಜಿಲ್ಲಾಡಳಿತ; ಪೋಷಕರು ಬೇಸರ

ಕೆಲವು ವರ್ಗದ ಪೋಷಕರು ಮಾತ್ರ ರಜೆಗೆ ಒತ್ತಾಯಿಸುತ್ತಿದ್ದಾರೆ. ಮಳೆ ನಿಯಂತ್ರಣ ತಪ್ಪಿದರೆ ಸರ್ಕಾರವೇ ರಜೆ ಘೋಷಿಸುತ್ತದೆ. ಆದರೆ. ಕೆಲವು ಪೋಷಕರು ತುಂತುರು ಮಳೆಯಾದರೂ ಚಿಂತಿತರಾಗಿ, ರಜೆಗೆ ಒತ್ತಾಯಿಸುತ್ತಿದ್ದಾರೆ.

ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ನಗರದಲ್ಲಿ ಮೋಡ ಕವಿದ ವಾತಾವರಣ ಮತ್ತು ಜಿಟಿಜಿಟಿ ಮಳೆ ಸುರಿಯುತ್ತಿದ್ದು, ಇದರ ನಡುವಲ್ಲೂ ಬೆಂಗಳೂರು ನಗರ ಜಿಲ್ಲಾಡಳಿತ ಮಂಡಳಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸದೆ ಇರುವುದು ಪೋಷಕರಲ್ಲಿ ಬೇಸರ ತರಿಸಿದೆ.

ಖಾಸಗಿ ಶಾಲೆಗಳ ಸಂಘ ಮಾತನಾಡಿ, ಬೆಂಗಳೂರಿನಲ್ಲಿ ಪ್ರತಿ ಬಾರಿ ಮಳೆ ಬಂದಾಗಲೂ ರಜೆ ಕೇಳುವುದು ಕೆಲ ಪೋಷಕರಿಗೆ ಅಭ್ಯಾಸವಾಗಿ ಹೋಗಿದೆ ಎಂದು ಹೇಳಿದೆ.

ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್‌ನ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮಾತನಾಡಿ, ಕೆಲವು ವರ್ಗದ ಪೋಷಕರು ಮಾತ್ರ ರಜೆಗೆ ಒತ್ತಾಯಿಸುತ್ತಿದ್ದಾರೆ. ಮಳೆ ನಿಯಂತ್ರಣ ತಪ್ಪಿದರೆ ಸರ್ಕಾರವೇ ರಜೆ ಘೋಷಿಸುತ್ತದೆ. ಆದರೆ. ಕೆಲವು ಪೋಷಕರು ತುಂತುರು ಮಳೆಯಾದರೂ ಚಿಂತಿತರಾಗಿ, ರಜೆಗೆ ಒತ್ತಾಯಿಸುತ್ತಿದ್ದಾರೆಂದು ಹೇಳಿದ್ದಾರೆ.

ರಜೆಯ ಕಾರಣ ಶಾಲೆಗಳು ಈಗಾಗಲೇ ಪಠ್ಯಕ್ರಮವನ್ನು ಪೂರ್ಣಗೊಳಿಸುವಲ್ಲಿ ಹಿಂದುಳಿದಿವೆ. ಪ್ರತಿ ಬಾರಿ ಮಳೆ ಬಂದಾಗಲೂ ರಜೆ ಘೋಷಿಸಬೇಕಾದರೆ ಇಡೀ ಮಳೆಗಾಲವನ್ನು ರಜೆ ಎಂದು ಘೋಷಿಸಬೇಕಾಗುತ್ತದೆ. ಪ್ರವಾಹಕ್ಕೆ ತುತ್ತಾಗುವ ತಗ್ಗು ಪ್ರದೇಶಗಳಲ್ಲಿರುವ ಶಾಲೆಗಳಿಗೆ ರಜೆ ಘೋಷಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಬಹುದು. ಪ್ರತಿ ಬಾರಿ ಮಳೆ ಬಂದಾಗ ರಜೆ ಕೇಳುವ ಮನೋಭಾವ ನಿಲ್ಲಬೇಕು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

SCROLL FOR NEXT