ಹೈಕೋರ್ಟ್‌ 
ರಾಜ್ಯ

ರಾಮನಗರ ಕೈದಿಗೆ ಕೃಷಿ ಮಾಡಲು 90 ದಿನಗಳ ಪೆರೋಲ್ ನೀಡಿದ ಹೈಕೋರ್ಟ್‌ !

ಅರ್ಜಿದಾರ ಚಂದ್ರ 11 ವರ್ಷಗಳಿಂದ ಜೈಲಿನಲ್ಲಿದ್ದಾರೆ. ಪೆರೋಲ್ ಮೇಲೆ ಯಾವತ್ತೂ ಬಿಡುಗಡೆಯಾಗಿಲ್ಲ. ಪ್ರಕರಣದ ಸತ್ಯಾಂಶ ಪರಿಶೀಲಿಸಿದರೆ ಪೆರೋಲ್ ಮೇಲೆ ಬಿಡುಗಡೆಯಾಗುವ ಅಗತ್ಯವನ್ನು ಅರ್ಜಿದಾರ ಮೇಲ್ನೋಟಕ್ಕೆ ಸಾಬೀತುಪಡಿಸಿದ್ದಾರೆ.

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ರಾಮನಗರ ಜಿಲ್ಲೆಯ ವ್ಯಕ್ತಿಯೊಬ್ಬನಿಗೆ ತನ್ನ ತಂದೆಯ ಹೆಸರಿನಲ್ಲಿ ಇರುವ ಜಮೀನಿನ ಕೃಷಿ ಚಟುವಟಿಕೆಗಳನ್ನು ನೋಡಿಕೊಳ್ಳಲು ಕರ್ನಾಟಕ ಹೈಕೋರ್ಟ್ 90 ದಿನಗಳ ಪೆರೋಲ್ ಮಂಜೂರು ಮಾಡಿದೆ.

ಕನಕಪುರ ತಾಲೂಕಿನ ಸಿದ್ದದೇವರಹಳ್ಳಿಯ ಚಂದ್ರು (36) ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಇತ್ತೀಚೆಗೆ ಆದೇಶ ಹೊರಡಿಸಿದ್ದಾರೆ. ಪೆರೋಲ್‌ನಲ್ಲಿ ಬಿಡುಗಡೆ ಮಾಡಬೇಕೆಂಬ ತನ್ನ ಮನವಿಯನ್ನು ಪರಿಗಣಿಸಿದೆ. ಆ ಮೂಲಕ ತಂದೆಯ ವೃತ್ತಿಯಲ್ಲಿ ತೊಡಗಿಕೊಳ್ಳಲು ಜೈಲು ಪಾಲಾಗಿರುವ ಮಗನಿಗೆ ಅವಕಾಶ ಕಲ್ಪಿಸಿದೆ.

ಅರ್ಜಿದಾರ ಚಂದ್ರ 11 ವರ್ಷಗಳಿಂದ ಜೈಲಿನಲ್ಲಿದ್ದಾರೆ. ಪೆರೋಲ್ ಮೇಲೆ ಯಾವತ್ತೂ ಬಿಡುಗಡೆಯಾಗಿಲ್ಲ. ಪ್ರಕರಣದ ಸತ್ಯಾಂಶ ಪರಿಶೀಲಿಸಿದರೆ ಪೆರೋಲ್ ಮೇಲೆ ಬಿಡುಗಡೆಯಾಗುವ ಅಗತ್ಯವನ್ನು ಅರ್ಜಿದಾರ ಮೇಲ್ನೋಟಕ್ಕೆ ಸಾಬೀತುಪಡಿಸಿದ್ದಾರೆ. ಆದ್ದರಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರು, ಆತನನ್ನು 90 ದಿನ ಪೆರೋಲ್ ಮೇಲೆ ಬಿಡುಗಡೆ ಮಾಡಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ. ಇದೇ ವೇಳೆ ಚಂದ್ರಗೆ ಪೆರೋಲ್ ನೀಡಲು ನಿರಾಕರಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರು 2023ರ ಸೆ.23ರಂದು ನೀಡಿದ್ದ ಹಿಂಬರಹವನ್ನು ರದ್ದುಪಡಿಸಿರುವ ಹೈಕೋರ್ಟ್, ಪೆರೋಲ್ ಅವಧಿಯಲ್ಲಿ ಚಂದ್ರ ಯಾವುದೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗಬಾರದು. ಆತ ಪೆರೋಲ್ ಮುಗಿಸಿ, ಕಾರಾಗೃಹಕ್ಕೆ ಮರಳುವುದನ್ನು ಖಚಿತಪಡಿಸಿಕೊಳ್ಳಲು ಮುಖ್ಯ ಅಧೀಕ್ಷಕರು ಅಗತ್ಯ ಷರತ್ತು ವಿಧಿಸಬಹುದು. ಆ ಯಾವುದೇ ಷರತ್ತು ಉಲ್ಲಂಘಿಸಿದರೆ, ಪೆರೋಲ್ ಮಂಜೂರಾತಿ ಆದೇಶ ತನ್ನಿಂದ ತಾನೇ ರದ್ದಾಗುತ್ತದೆ. ಚಂದ್ರ ಪ್ರತಿ ವಾರದ ಮೊದಲ ದಿನದಂದು ಸ್ಥಳೀಯ ಪೊಲೀಸ್ ಠಾಣೆಗೆ ಹಾಜರಾಗಬೇಕೆಂದು ನ್ಯಾಯಾಲಯ ಆದೇಶದಲ್ಲಿ ನಿರ್ದೇಶಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ