ಮಂಗಳವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ವಿಕಲಚೇತನರ ದಿನಾಚರಣೆಯಲ್ಲಿ ವಿಕಲಚೇತನರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ Express photo Nagaraja Gadekal
ರಾಜ್ಯ

ವಿಶೇಷಚೇತನರ ಆರೈಕೆದಾರರಿಗೆ ಪ್ರತಿ ತಿಂಗಳು 1,000 ರೂ ಪ್ರೋತ್ಸಾಹ ಧನ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಸುಮಾರು 15 ಲಕ್ಷ ವಿಕಲಚೇತನರಿದ್ದಾರೆ. ಇವರೆಲ್ಲರ ಆರೈಕೆ ಮಾಡಿ ವಿಶೇಷ ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯ. ವಿಶೇಷಚೇತನರು ಸಮಾಜಕ್ಕೆ ಹೊರೆಯಲ್ಲ, ಆಸ್ತಿ.

ಬೆಂಗಳೂರು: ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ, ಅವರು ಸಮಾಜದ ಆಸ್ತಿ. ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿರುವ ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದರು.

ಬೆಂಗಳೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ನಡೆದ ಅಂತಾರಾಷ್ಟ್ರೀಯ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 15 ಲಕ್ಷ ವಿಕಲಚೇತನರಿದ್ದಾರೆ. ಇವರೆಲ್ಲರ ಆರೈಕೆ ಮಾಡಿ ವಿಶೇಷ ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯ. ವಿಶೇಷಚೇತನರು ಸಮಾಜಕ್ಕೆ ಹೊರೆಯಲ್ಲ, ಆಸ್ತಿ ಎಂದು ಹೇಳಿದರು.

ಸಂವಿಧಾನದಲ್ಲಿ ಎಲ್ಲರೂ ಬದುಕುವ, ಉದ್ಯೋಗ ಪಡೆಯುವಂತಹ ಅವಕಾಶವನ್ನು ಕಲ್ಪಿಸಿದೆ. ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ. ಅವರು ಸಮಾಜದ ಆಸ್ತಿಯಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ಪ್ಯಾರಾ ಒಲಂಪಿಕ್ಸ್ ನಲ್ಲಿ ಭಾರತದ ವಿಕಲಚೇತನ ಕ್ರೀಡಾಪಟುಗಳು ಹೆಚ್ಚಿನ ಪದಕಗಳನ್ನು ಪಡೆದಿರುವುದು ಹೆಮ್ಮೆಯ ವಿಚಾರ. ನಮ್ಮ ಸರ್ಕಾರ ಈ ಬಾರಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು “ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವದ ಉತ್ತೇಜನ” ಎಂಬ ಘೋಷ ವಾಕ್ಯದೊಂದಿಗೆ ಆಚರಿಸುತ್ತಿದೆ.

ಈ ವರ್ಷ ನಾಲ್ಕು ಬಗೆಯ ವಿಕಲಚೇತನರ ಆರೈಕೆದಾರರಿಗೆ ಪ್ರತಿ ಮಾಹೆ 1000 ರೂ. ಗಳ ಆರೈಕೆದಾರರ ಭತ್ಯೆ ನೀಡುವ ಯೋಜನೆಯನ್ನು ದೇಶದಲ್ಲಿ ಪ್ರಪ್ರಥಮವಾಗಿ ಕರ್ನಾಟಕ ರಾಜ್ಯ ಘೋಷಿಸಿದೆ, ಇದನ್ನು ಪ್ರಸಕ್ತ ಸಾಲಿನಿಂದ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ 7 ಜಿಲ್ಲೆಗಳಲ್ಲಿ ರೂ. 2 ಕೋಟಿ ವೆಚ್ಚದಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳನ್ನು ಪ್ರಾರಂಭಿಸಲು 2023-24ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಣೆಯಂತೆ ಶಾಲೆಗಳನ್ನು ತೆರೆಯಲಾಗಿದೆ. ಇದಲ್ಲದೇ ಇನ್ನೂ 13 ಹೊಸ ಶಾಲೆಗಳನ್ನು ಪ್ರಸಕ್ತ ಸಾಲಿನಲ್ಲಿ ಅನುದಾನಕ್ಕೆ ಒಳಪಡಿಸಲಾಗಿದೆ. ಗ್ರಾಮೀಣ ಪುನರ್ವಸತಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತರ ಅವಲಂಬಿತರಿಗೆ ನೀಡಲಾಗುವ ಮರಣ ಪರಿಹಾರ ನಿಧಿಯನ್ನು 2023ನೇ ಸಾಲಿನಲ್ಲಿ ರೂ. 50,000/- ದಿಂದ ಪರಿಷ್ಕರಿಸಿ ರೂ.1.00 ಲಕ್ಷಕ್ಕೆ ಹೆಚ್ಚಿಸಲಾಗಿದೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ವಿಕಲಚೇತನರ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್

ಸರ್ಕಾರಿ ಉದ್ಯೋಗಗಳಲ್ಲಿ ‘ಸಿ’ ಮತ್ತು ‘ಡಿ’ ಸಮೂಹದ ಹುದ್ದೆಗಳಲ್ಲಿ ಶೇ.5 ಹಾಗೂ ‘ಎ’ ಮತ್ತು ‘ಬಿ’ ಹುದ್ದೆಗಳಲ್ಲಿ ಶೇ.4ರಷ್ಟು ಮೀಸಲಾತಿಯನ್ನು ನೀಡಲಾಗಿದೆ. ಅಲ್ಲದೇ ಇವರು ನಿರ್ವಹಿಸಬಹುದಾದಂತಹ ಹುದ್ದೆಗಳನ್ನು ಗುರುತಿಸಲು ರಾಜ್ಯ ಮಟ್ಟದಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿದ್ದು ಇಲಾಖೆಗಳಲ್ಲಿನ ಹುದ್ದೆಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ವಿಕಲಚೇತನರ ಅನುಕೂಲಕ್ಕಾಗಿ ವಾಹನಗಳನ್ನು ನೀಡಲು ಈಗಾಗಲೇ ಸೂಚನೆ ನೀಡಲಾಗಿದೆ.

ಸಾಮಾಜಿಕ ಸಬಲೀಕರಣಕ್ಕಾಗಿ ಸಹ ಶೇಕಡಾ 40 ರಿಂದ 74 ವಿಕಲಚೇತನರಿಗೆ ರೂ. 800/- ಹಾಗೂ 75% ಮತ್ತು ಅದಕ್ಕಿಂತ ಹೆಚ್ಚಿನ ಅಂಗವೈಕಲ್ಯತೆವುಳ್ಳವರಿಗೆ ರೂ. 1400 ಮತ್ತು ತೀವ್ರತರನಾದ ಮನೋವೈಕಲ್ಯತೆ ಇರುವ ವ್ಯಕ್ತಿಗಳಿಗೆ ರೂ. 2000 ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ನೀಡಲಾಗುವ ವಿಕಲಚೇತನರ ಮಾಸಾಶನ ಮೊತ್ತವನ್ನು ಹೆಚ್ಚಿಸುವಂತೆ ಕೋರಿ ಸರ್ಕಾರ ಬರೆಯಲು ಕ್ರಮ ಕೈಗೊಳ್ಳಲಿದೆ. ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಬುದ್ಧಿಮಾಂದ್ಯ ಮಗುವನ್ನು ಮುದ್ದಾಡಿದ ಸಿಎಂ

ಈ ನಡುವೆ ಕಾರ್ಯಕ್ರಮ ಉದ್ಘಾಟನೆ ವೇಳೆ ದೀಪ ಬೆಳಗಿಸಲು ವೇದಿಕೆಗೆ ಕರೆದಿದ್ದ ವಿಶೇಷಚೇತನ ಬಾಲಕಿಯೊಬ್ಬಳನ್ನು ಮುಖ್ಯಮಂತ್ರಿಗಳು ಮುದ್ದಾಡಿದರು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT