ಎಸ್ ಎಸ್ ಮಲ್ಲಿಕಾರ್ಜುನ್ 
ರಾಜ್ಯ

ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಮರಳು: ಜಿಲ್ಲಾ ಸಮಿತಿಗಳಿಂದಲೇ ಮರಳು ಬ್ಲಾಕ್‌ ವಿಲೇವಾರಿ; ಮಲ್ಲಿಕಾರ್ಜುನ್

ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಮರಳು ಪೂರೈಸುವ ಉದ್ದೇಶದಿಂದ ಮರಳು ಬ್ಲಾಕ್‌ಗಳನ್ನು ಹಂಚಿಕೆ ಮಾಡುವ ಹೊಣೆಗಾರಿಕೆಯನ್ನು ಜಿಲ್ಲಾ ಸಮಿತಿಗಳಿಗೇ ನೀಡಲು ನಿರ್ಧರಿಸಲಾಗಿದೆ. ನೂತನ ಮರಳು ನೀತಿ ಜಾರಿಗೆ ತರುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿತ್ತು

ಬೆಂಗಳೂರು : ರಾಜ್ಯ ಸರಕಾರವು ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರಗಳಲ್ಲಿ ಮರಳು ಸಿಗಲಿ ಎಂಬ ಉದ್ದೇಶದಿಂದ ಮರಳು ನೀತಿ ಜಾರಿಗೊಳಿಸಿದ್ದು, ಆಯವ್ಯಯದಲ್ಲಿ ಘೋಷಿಸಿರುವಂತೆ ಈ ಸಮಗ್ರ ಮರಳು ನೀತಿಯನ್ನು ಗಣಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಮರಳು ಪೂರೈಸುವ ಉದ್ದೇಶದಿಂದ ಮರಳು ಬ್ಲಾಕ್‌ಗಳನ್ನು ಹಂಚಿಕೆ ಮಾಡುವ ಹೊಣೆಗಾರಿಕೆಯನ್ನು ಜಿಲ್ಲಾ ಸಮಿತಿಗಳಿಗೇ ನೀಡಲು ನಿರ್ಧರಿಸಲಾಗಿದೆ. ನೂತನ ಮರಳು ನೀತಿ ಜಾರಿಗೆ ತರುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಅದರಂತೆ ಸಾರ್ವಜನಿಕ ಕಾಮಗಾರಿಗಳಿಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಅತ್ಯಂತ ಕಡಿಮೆ ದರದಲ್ಲಿ ಮರಳನ್ನು ಪೂರೈಕೆ ಮಾಡಲಾಗುತ್ತಿದೆ. ಅದೇ ಮಾದರಿಯಲ್ಲಿ ಖಾಸಗಿ ಬಳಕೆಗೆ ಮರಳನ್ನು ಕಡಿಮೆ ಬೆಲೆಗೆ ಪೂರೈಸಲು ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಹೇಳಿದರು.

‘ಒಂದು, ಎರಡು ಮತ್ತು ಮೂರನೇ ಶ್ರೇಣಿಯ ಹಳ್ಳಗಳಿಂದ ಮರಳನ್ನು ತೆಗೆದು ವಿಲೇವಾರಿ ಮಾಡುವ ಹೊಣೆಗಾರಿಕೆಯನ್ನು ಗ್ರಾಮ ಪಂಚಾಯಿತಿಗಳಿಗೆ ನೀಡಲಾಗಿದೆ. ಸಾರ್ವಜನಿಕ ಕಾಮಗಾರಿಗಳಿಗೆ ಪ್ರತಿ ಟನ್‌ಗೆ 300 ರೂಪಾಯಿಯಂತೆ ಮರಳು ಪೂರೈಕೆ ಮಾಡಲಾಗುತ್ತಿದೆ’ ಎಂದರು. ಸಾರ್ವಜನಿಕರಿಗೆ ಪೂರೈಸಲು ರಾಜ್ಯಾದ್ಯಂತ ನದಿಪಾತ್ರದಿಂದ ತೆಗೆಯುವ ಪ್ರತಿ ಟನ್ ಮರಳಿಗೆ ಸರ್ಕಾರ ಏಕರೂಪದ ಬೆಲೆ 850 ರೂ. ನಿಗದಿ ಪಡಿಸಿದೆ. ಈ ನೂತನ ನೀತಿಯಂತೆ ಮರಳು ಬ್ಲಾಕ್‍ಗಳ ಟೆಂಡರ್ ಅನ್ನು ಆಯಾ ಜಿಲ್ಲಾ ಮರಳು ಸಮಿತಿಯಿಂದ ನಡೆಸಲಾಗುವುದು. ಜಿಲ್ಲಾವಾರು ಗುರುತಿಸಲಾಗುವ ಮರಳು ಬ್ಲಾಕ್‍ಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಇತರೆ ಸಾಮಾನ್ಯ ವರ್ಗದವರಿಗೆ ರೋಸ್ಟರ್ ಪದ್ಧತಿಯಡಿಯಲ್ಲಿ ಮೀಸಲಾತಿ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಟೆಂಡರ್ ಪ್ರಕ್ರಿಯೆಯನ್ನು ಇ-ಪೋರ್ಟಲ್‍ನಲ್ಲಿ ನಡೆಸಲಾಗುತ್ತಿದ್ದು, ಸದರಿ ಪೋರ್ಟಲ್ ಮೂಲಕ ಆಸಕ್ತ ವ್ಯಕ್ತಿ/ಖಾಸಗಿ ಕಂಪನಿ/ಸಂಸ್ಥೆಯವರು ಅರ್ಜಿ ಸಲ್ಲಿಸಲು ಜಿಲ್ಲಾವಾರು ಅಧಿಸೂಚನೆ ಜಾರಿ ಮಾಡಲಾಗುವುದು ಎಂದು ಮಲ್ಲಿಕಾರ್ಜುನ್ ವಿವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT