ಸಂಗ್ರಹ ಚಿತ್ರ 
ರಾಜ್ಯ

ವಾಯು ವಜ್ರ ಬಸ್ಸೇರುತ್ತಿರುವವರ ಸಂಖ್ಯೆ ಹೆಚ್ಚಳ: ನವೆಂಬರ್‌ನಲ್ಲಿ ಪ್ರಯಾಣಿಕರ ಸಂಖ್ಯೆ 4 ಲಕ್ಷ, ವರಮಾನವೂ ಏರಿಕೆ

ವಾಯುವಜ್ರ ಬಸ್ ಸೇವೆ 2008ರ ಆರಂಭದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು. ಆದರೆ, ಸೇವೆ ಆರಂಭವಾದ ಬಳಿಕ ಇದೇ ಮೊದಲ ಬಾರಿಗೆ ಒಂದು ತಿಂಗಳಿನಲ್ಲಿ ವಾಯು ವಜ್ರ ಬಸ್ ಬಳಸಿದ ಪ್ರಯಾಣಿಕರ ಸಂಖ್ಯೆ 4 ಲಕ್ಷ ದಾಟಿದೆ.

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ನಿರಂತರ ಏರಿಕೆಯಿಂದಾಗಿ, ನಗರ ಮತ್ತು ವಿಮಾನ ನಿಲ್ದಾಣದ ನಡುವೆ ಬಿಎಂಟಿಸಿ ನಿರ್ವಹಿಸುವ ವಾಯು ವಜ್ರ ಬಸ್‌ನಲ್ಲಿನ ಪ್ರಯಾಣಿಕರ ಸಂಖ್ಯೆಯಲ್ಲೂ ಕೂಡ ಏರಿಕೆಯಾಗಿದೆ.

ವಾಯುವಜ್ರ ಬಸ್ ಸೇವೆ 2008ರ ಆರಂಭದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು. ಆದರೆ, ಸೇವೆ ಆರಂಭವಾದ ಬಳಿಕ ಇದೇ ಮೊದಲ ಬಾರಿಗೆ ಒಂದು ತಿಂಗಳಿನಲ್ಲಿ ವಾಯು ವಜ್ರ ಬಸ್ ಬಳಸಿದ ಪ್ರಯಾಣಿಕರ ಸಂಖ್ಯೆ 4 ಲಕ್ಷ ದಾಟಿದೆ.

ಒಟ್ಟು 144 ಬಸ್‌ಗಳು 17 ಮಾರ್ಗಗಳಲ್ಲಿ ವಿಮಾನ ನಿಲ್ದಾಣಕ್ಕೆ ಎರಡೂ ದಿಕ್ಕುಗಳಲ್ಲಿ ಪ್ರತಿದಿನ 990 ಟ್ರಿಪ್‌ಗಳಂತೆ ಕಾರ್ಯ ನಿರ್ವಹಿಸುತ್ತಿವೆ.

ಬಿಎಂಟಿಸಿ ಮುಖ್ಯ ಟ್ರಾಫಿಕ್ ಮ್ಯಾನೇಜರ್ ಜಿಟಿ ಪ್ರಭಾಕರ ರೆಡ್ಡಿ ಅವರು ಮಾತನಾಡಿ, ನವೆಂಬರ್ ತಿಂಗಳಿನಲ್ಲಿ 4,07,531 ಪ್ರಯಾಣಿಕರು ವಾಯು ವಜ್ರದ ಸೇವೆಗಳನ್ನು ಬಳಿಸಿದ್ದಾರೆಂದು ಹೇಳಿದ್ದಾರೆ.

4 ಲಕ್ಷದ ಗಡಿ ದಾಟುತ್ತಿರುವುದು ಇದೇ ಮೊದಲು. ದಿನಕ್ಕೆ ಸರಾಸರಿ 13,584 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಆದರೆ, ನವೆಂಬರ್ ತಿಂಗಳಿನಲ್ಲಿ 4 ಲಕ್ಷಕ್ಕೂ ಹೆಚ್ಚು ಜನರು ಪ್ರಯಾಣ ಮಾಡಿದ್ದಾರೆ. ಇದರೊಂದಿಗೆ 11,13,71,983 ರೂ ಆದಾಯ ಬಂದಿದೆ. ಇದೇ ಮೊದಲ ಬಾರಿಗೆ ವಾಯು ವಜ್ರ ಬಸ್ ಗಳಿಂದ ಬಂದ ಆದಾಯ ಒಂದೇ ತಿಂಗಳಲ್ಲಿ 11 ಕೋಟಿ ರೂಪಾಯಿ ದಾಟಿದೆ ಎಂದು ತಿಳಿಸಿದ್ದಾರೆ.

ಇದಕ್ಕೆ ಯಾವುದೇ ನಿರ್ದಿಷ್ಟ ಕಾರಣ ಹೇಳಲು ಸಾಧ್ಯವಿಲ್ಲ. ವಿಮಾನ ನಿಲ್ದಾಣಕ್ಕೆ ಆಗಮಿಸುವ ಅಥವಾ ನಿರ್ಗಮಿಸುವ ಫ್ಲೈಯರ್‌ಗಳ ಸಂಖ್ಯೆ ಹೆಚ್ಚಳವಾಗಿದೆ. ಇತರ ಸಾರಿಗೆ ವಿಧಾನಗಳಿಗೆ ಹೋಲಿಸಿದರೆ ನಮ್ಮ ಟಿಕೆಟ್ ಬೆಲೆ, ಪ್ರಯಾಣದ ಸೌಕರ್ಯ ಮತ್ತು ಹೆಚ್ಚುವರಿ ಮಾರ್ಗಗಳು ಮತ್ತು ಬೇಡಿಕೆಯ ಆಧಾರದ ಮೇಲೆ ನಾವು ಕಾರ್ಯನಿರ್ವಹಿಸುತ್ತಿರುವುದು ಇದಕ್ಕೆ ಕಾರಣವಾಗಿವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT