ಜಗದಾಂಬಿಕಾ ಪಾಲ್ ಅವರೊಂದಿಗೆ ಮಾತುಕತೆ ನಡೆಸುತ್ತಿರುವ ಯತ್ನಾಳ್ ಬಣ. 
ರಾಜ್ಯ

ವಕ್ಫ್ ಆಸ್ತಿ ವಿವಾದ: JPC ಅಧ್ಯಕ್ಷರಿಗೆ ಯತ್ನಾಳ್ ಬಣದಿಂದ ವರದಿ ಸಲ್ಲಿಕೆ

ಯತ್ನಾಳ್ ಅವರು ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ ಮತ್ತು ಅರವಿಂದ ಲಿಂಬಾವಳಿ ಅವರೊಂದಿಗೆ ಜಗದಾಂಬಿಕಾ ಪಾಲ್ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿದ್ದು, ವರದಿ ಸಲ್ಲಿಸಿದ್ದಾರೆ.

ಬೆಂಗಳೂರು/ನವದೆಹಲಿ: ಬಿಜೆಪಿಯ ಯತ್ನಾಳ್ ನೇತೃತ್ವದ ನಿಯೋಗ ಮಂಗಳವಾರ ವಕ್ಫ್ ತಿದ್ದುಪಡಿ ಮಸೂದೆ 2024 ರ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರನ್ನು ಭೇಟಿಯಾಗಿದ್ದು, ರಾಜ್ಯದಲ್ಲಿನ ವಕ್ಫ್‌ ಸಂಬಂಧಿಸಿದ ವರದಿ ಸಲ್ಲಿಸಿದೆ.

ಯತ್ನಾಳ್ ಅವರು ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ ಮತ್ತು ಅರವಿಂದ ಲಿಂಬಾವಳಿ ಅವರೊಂದಿಗೆ ಜಗದಾಂಬಿಕಾ ಪಾಲ್ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿದ್ದು, ವರದಿ ಸಲ್ಲಿಸಿದ್ದಾರೆ.

ಕಲಬುರಗಿ, ಬೀದರ್, ಬಿಜಾಪುರ, ಯಾದಗಿರಿ, ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧೆಡೆ ಸಂಗ್ರಹಿಸಿದ ಮಾಹಿತಿ ವರದಿಯಲ್ಲಿದೆ. ಅಲ್ಲದೇ ವಕ್ಫ್ ಇತ್ತಿಚೆಗೆ ನೋಟಿಸ್ ನೀಡಿದ ಆಸ್ತಿಗಳ ಬಗ್ಗೆ ಜಗದಾಂಬಿಕಾ ಪಾಲ್ ಅವರಿಗೆ ಮಾಜಿ ಸಚಿವ ಅರವಿಂದ್ ಲಿಂಬಾವಳಿ ಮಾಹಿತಿ ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅರವಿಂದ್ ಲಿಂಬಾವಳಿ ಅವರು, ವಕ್ಫ್ ಜೆಪಿಸಿ ಅಧ್ಯಕ್ಷರನ್ನು ಭೇಟಿಯಾಗಿದ್ದೇವೆ. ಬಹಳ ಹೊತ್ತು ನಮ್ಮ ತಂಡದ ಜೊತೆ ಚರ್ಚೆ ಮಾಡಿದ್ದಾರೆ. ಯತ್ನಾಳ್ ವಿಜಯಪುರದ ಹೋರಾಟಕ್ಕೆ ಪಾಲ್ ಬಂದಿದ್ದರು. ಪಾಲ್ ಕೊಟ್ಟಂತಹ ಸಲಹೆ ಮೇರೆಗೆ ಪ್ರವಾಸ ಮಾಡಿದ್ದೆವು. 7 ಜಿಲ್ಲೆಗಳಲ್ಲಿ ನಮ್ಮ ತಂಡ ಪ್ರವಾಸ ಮಾಡಿತ್ತು. ವರದಿಯನ್ನು ಈಗ ಅಧ್ಯಕ್ಷರ ಗಮನಕ್ಕೆ ತಂದಿದ್ದೇವೆ ಎಂದು ಹೇಳಿದರು.

ಈ ದಾಖಲೆಗಳನ್ನು ಪರಿಶೀಲಿಸಿ ಸಮಿತಿಗೆ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೇಸ್ ಟು ಕೇಸ್ ವರದಿ ತಯಾರಿಸುವಂತೆ ಸೂಚಿಸಿದ್ದಾರೆಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್