ನಮ್ಮ ಮೆಟ್ರೋ (ಸಂಗ್ರಹ ಚಿತ್ರ) 
ರಾಜ್ಯ

ಪಿಡಿಒ ಪರೀಕ್ಷಾರ್ಥಿಗಳ ಅನುಕೂಲಕ್ಕಾಗಿ ಭಾನುವಾರ ನಮ್ಮ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ

ಡಿಸೆಂಬರ್ 8 ರಂದು ಕರ್ನಾಟಕ ಲೋಕಸೇವಾ ಆಯೋಗದ ಪಿಡಿಓ ಪರೀಕ್ಷೆ ನಡೆಯಲಿದೆ. ಹೀಗಾಗಿ ಭಾನುವಾರ ಬೆಳಗ್ಗೆ 7 ಗಂಟೆ ಬದಲಾಗಿ, ಬೆಳಗ್ಗೆ 5:30 ರಿಂದ ಮೆಟ್ರೋ ರೈಲುಗಳ ಸಂಚಾರ ಆರಂಭಗೊಳ್ಳಲಿದೆ.

ಬೆಂಗಳೂರು: ಪಿಡಿಒ ಪರೀಕ್ಷಾರ್ಥಿಗಳಿಗೆ ನಮ್ಮ ಮೆಟ್ರೋ ಸಿಹಿ ಸುದ್ದಿ ನೀಡಿದ್ದು, ಭಾನುವಾರ ನಮ್ಮ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಿದೆ.

ಡಿಸೆಂಬರ್ 8 ರಂದು ಕರ್ನಾಟಕ ಲೋಕಸೇವಾ ಆಯೋಗದ ಪಿಡಿಓ ಪರೀಕ್ಷೆ ನಡೆಯಲಿದೆ. ಹೀಗಾಗಿ ಭಾನುವಾರ ಬೆಳಗ್ಗೆ 7 ಗಂಟೆ ಬದಲಾಗಿ, ಬೆಳಗ್ಗೆ 5:30 ರಿಂದ ಮೆಟ್ರೋ ರೈಲುಗಳ ಸಂಚಾರ ಆರಂಭಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌) ತಿಳಿಸಿದೆ.

ಪ್ರತಿ ಭಾನುವಾರ ಬೆಳಗ್ಗೆ 7 ಗಂಟೆಯಿಂದ ಮೆಟ್ರೋ ರೈಲುಗಳು ಸಂಚಾರ ಆರಂಭವಾಗುತ್ತದೆ. ಆದರೆ ಪಿಡಿಓ ಪರೀಕ್ಷೆ ಹಿನ್ನೆಲೆಯಲ್ಲಿ ಈ ಭಾನುವಾರ ಬೆಳಗ್ಗೆ 5:30 ರಿಂದ ಮೆಟ್ರೋ ರೈಲುಗಳ ಸಂಚಾರ ಮಾಡುವುದಾಗಿ ಬಿಎಂಆರ್‌ಸಿಎಲ್‌ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಡಿಸೆಂಬರ್ ರಂದು(ಭಾನುವಾರ) ಕನಾಟಕ ಲೋಕಸೋವಾ ಆಯೋಗವು-ಪಂಚಾಯತ್​ ಅಭಿವೃದ್ಧಿ ಅಧಿಕಾರಿ(ಪಿಡಿಒ) ಹುದ್ದೆ ಪರೀಕ್ಷೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷೆಗೆ ಹಾಜರಾಗಲು ಬಿಎಂಆರ್​ಸಿಎಲ್​ ಮೆಟ್ರೋ ರೈಲು ಸೇವೆಯನ್ನು ಬೆಳಗ್ಗೆ 07:00 ಗಂಟೆಗೆ ಬದಲಾಗಿ 05:30 ಗಂಟೆಗೆ ಎಲ್ಲಾ ನಾಲ್ಕು ಟರ್ಮಿನಲ್​ ನಿಲ್ದಾಣಗಳಾದ ಮಾದಾವರ, ರೇಷ್ಮೆ ಸಂಸೆ, ಚಲ್ಲಘಟ್ಟ ಮತ್ತು ವೈಟ್​ ಫೀಲ್ಡ್(ಕಾಡುಗೋಡಿ) ಮೆಟ್ರೋ ನಿಲ್ದಾಣಗಳಿಂದ ಪ್ರಾರಂಭಿಸಲಿದೆ. ಅಲ್ಲದೆ, ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕನಿಂದ ಎಲ್ಲಾ ನಾಲ್ಕು ದಿಕ್ಕಿಗೆ ಮೊದಲ ರೈಲು ಬೆಳಗ್ಗೆ 5:30 ಗಂಟೆಗೆ ಹೊರಡಲಿದೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.

ಈ ಅವಧಿಯಲ್ಲಿ ಅಂದರ ಬೆಳಿಗ್ಗೆ 5.30 ರಿಂದ 7.00 ಗಂಟೆಯವರಗೆ ರೈಲುಗಳು 30 ನಿಮಿಷಗಳ ಅಂತರದಲ್ಲಿ ಚಲಿಸುತ್ತವೆ. ಬೆಳಿಗ್ಗೆ 7:00 ಗಂಟೆಯ ನಂತರ ಎಂದಿನಂತೆ ರೈಲುಗಳು ಚಲಿಸುತ್ತವೆ. ಸಾವಾಜನಿಕರು ಹಾಗೂ ಪರೀಕ್ಷೆಗೆ ಹೋಗುವ ಅಭ್ಯರ್ಥಿಗಳ ಈ ಸೌಲಭ್ಯವನ್ನು ಉಪಯೋಗಿಸಿಕೊಳ್ಳಬೇಕೆಂದು ಕೋರಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್