ರಾಮ್ ಪ್ರಸಾತ್ ಮನೋಹರ್  
ರಾಜ್ಯ

110 ಗ್ರಾಮಗಳಲ್ಲಿ ಕಾವೇರಿ ಸಂಪರ್ಕ ಅಭಿಯಾನ: ಜನರಿಗೆ ಮಾಹಿತಿ

ಜನರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಪ್ರಚಾರ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.

ಬೆಂಗಳೂರು: ಬೆಂಗಳೂರು ಸುತ್ತಮುತ್ತಲಿನ 110 ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಕಾವೇರಿ ಕುಡಿಯುವ ನೀರಿನ ಸಂಪರ್ಕದ ಬಗ್ಗೆ ಮಾಹಿತಿ ನೀಡುವಂತೆ ಬೆಂಗಳೂರು ನೀರು ಸರಬರಾಜು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರ್ದೇಶನದಂತೆ ಮನೋಹರ್ ಬುಧವಾರ ಪೂರ್ವ ವಲಯದ ಚಳ್ಳಗೆರೆ ಮತ್ತು ಚನ್ನಸಂದ್ರ ಭಾಗದಲ್ಲಿ ಮಂಡಳಿ ವತಿಯಿಂದ ಆಯೋಜಿಸಿದ್ದ ಕಾವೇರಿ ಸಂಪರ್ಕ ಅಭಿಯಾನದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

110 ಗ್ರಾಮಗಳಿಗೆ ಸಮರ್ಪಕ ನೀರು ಒದಗಿಸಲು ಬಿಡಬ್ಲ್ಯುಎಸ್‌ಎಸ್‌ಬಿ ಸಿದ್ಧವಿದೆ.ಈಗಾಗಲೇ ನಗರಕ್ಕೆ ಹೆಚ್ಚುವರಿ ನೀರು ಪೂರೈಕೆಯಾಗುತ್ತಿದೆ. ಜನರು ಇದರ ಪ್ರಯೋಜನ ಪಡೆಯಲು ಸಂಪರ್ಕ ಪಡೆಯುವುದು ಅವಶ್ಯ. ಕೊಳವೆಬಾವಿ ಕೊರತೆಯಂತಹ ಸಮಸ್ಯೆಗಳು ಬರದಂತೆ ಜನರು ಕುಡಿಯುವ ನೀರಿನ ಸಂಪರ್ಕ ಪಡೆಯಬೇಕು. ಬೇಸಿಗೆಯಲ್ಲಿ ನೀರಿನ ಕೊರತೆ ಮರುಕಳಿಸದಂತೆ ಎಲ್ಲಾ 110 ಹಳ್ಳಿಗಳಲ್ಲಿ ಮನೆ-ಮನೆಗೆ ಕಾವೇರಿ ಸಂಪರ್ಕ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಜನರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಪ್ರಚಾರ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದರು.

ಮುಂದಿನ ದಿನಗಳಲ್ಲಿ ಕಾವೇರಿ ಕುಡಿಯುವ ನೀರು ಸಂಪರ್ಕ ಅಭಿಯಾನದ ಭಿತ್ತಿಪತ್ರ, ಮನೆ ಬಾಗಿಲಿಗೆ ಅರ್ಜಿ, ಠೇವಣಿ ಶುಲ್ಕದ ವಿವರ ಸೇರಿದಂತೆ ಮಾಹಿತಿ ನೀಡಲು ಮಂಡಳಿ ನಿರ್ಧರಿಸಿದೆ. ಬಿಡಬ್ಲ್ಯೂಎಸ್‌ಎಸ್‌ಬಿ ಕಾರ್ಯಕರ್ತರಿಗೆ ಮನೆ ಮನೆಗೆ ಹೋಗಿ ಇವುಗಳನ್ನು ಒದಗಿಸುವಂತೆ ಸೂಚನೆ ನೀಡಲಾಗಿದೆ ಮತ್ತು ಪ್ರಚಾರದ ಸ್ಥಳ, ದಿನಾಂಕ ಮತ್ತು ಸಮಯದ ಬಗ್ಗೆ ಜನರಿಗೆ ತಿಳಿಸಲಾಗಿದೆ ಎಂದು ಮನೋಹರ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

SCROLL FOR NEXT