ಡಿಕೆ ಶಿವಕುಮಾರ್-ಸಿದ್ದರಾಮಯ್ಯ PTI
ರಾಜ್ಯ

ಕಟ್ಟಡದ ಕಲ್ಲು ಗಣಿಗಾರಿಕೆಯ ರಾಯಧನ ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ!

ಪ್ರತಿ ಮೆಟ್ರಿಕ್ ಟನ್ ಕಟ್ಟಡ ಕಲ್ಲುಗಳಿಗೆ ರಾಯಧನವನ್ನು 70 ರೂ.ನಿಂದ 80 ರೂ.ಗೆ ಹೆಚ್ಚಿಸಲಾಗಿದೆ ಎಂದರು. ಇದಲ್ಲದೆ, ಹಿಂದೆ ರಾಯಧನವನ್ನು ಪಾವತಿಸಲು ವಿಫಲವಾದ ಘಟಕಗಳಿಗೆ ಪರಿಹಾರ ಯೋಜನೆಯನ್ನು ಪರಿಚಯಿಸಲು ಕ್ಯಾಬಿನೆಟ್ ನಿರ್ಧರಿಸಿದೆ.

ಬೆಂಗಳೂರು: ಕಟ್ಟಡ ಕಲ್ಲು ಗಣಿಗಾರಿಕೆಯ ಮೇಲಿನ ರಾಯಧನವನ್ನು ಪ್ರತಿ ಮೆಟ್ರಿಕ್ ಟನ್‌ಗೆ 70 ರೂಪಾಯಿಯಿಂದ 80 ರೂಪಾಯಿಗೆ ಹೆಚ್ಚಿಸುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಕ್ರಮದಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ 311.55 ಕೋಟಿ ಹೆಚ್ಚುವರಿ ಆದಾಯ ಬರುವ ನಿರೀಕ್ಷೆ ಇದೆ.

ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್, ಪ್ರತಿ ಮೆಟ್ರಿಕ್ ಟನ್ ಕಟ್ಟಡ ಕಲ್ಲುಗಳಿಗೆ ರಾಯಧನವನ್ನು 70 ರೂ.ನಿಂದ 80 ರೂ.ಗೆ ಹೆಚ್ಚಿಸಲಾಗಿದೆ ಎಂದರು. ಇದಲ್ಲದೆ, ಹಿಂದೆ ರಾಯಧನವನ್ನು ಪಾವತಿಸಲು ವಿಫಲವಾದ ಘಟಕಗಳಿಗೆ ಪರಿಹಾರ ಯೋಜನೆಯನ್ನು ಪರಿಚಯಿಸಲು ಕ್ಯಾಬಿನೆಟ್ ನಿರ್ಧರಿಸಿದೆ.

ರಾಯಧನ ಪಾವತಿಸದೆ ಖನಿಜ ಸಾಗಣೆ ಮಾಡಿದರೆ ದಂಡ ವಸೂಲಿಗೆ ನಿರ್ಧರಿಸಲಾಗಿದೆ. 6,105 ರೂಪಾಯಿ ದಂಡ ವಿಧಿಸಲಾಗಿತ್ತು. ಕಳೆದ 6-7 ವರ್ಷಗಳಿಂದ ದಂಡ ವಸೂಲಿ ಆಗದೆ ಬಾಕಿ ಉಳಿದಿವೆ. ಹಾಗಾಗಿ ಒನ್​ಟೈಮ್ ಸೆಟ್ಲ್​ಮೆಂಟ್​ಗೆ ಅವಕಾಶ ನೀಡಲಾಗಿದೆ ಎಂದರು.

ಇನ್ನು 11 ಜಿಲ್ಲೆಗಳಲ್ಲಿ ಡ್ರೋನ್‌ಗಳೊಂದಿಗೆ ಡಿಫರೆನ್ಷಿಯಲ್ ಜಿಯೋ ಪೊಸಿಷನಿಂಗ್ ಸಿಸ್ಟಮ್ (ಡಿಜಿಪಿಎಸ್) ಅಳವಡಿಕೆಗೆ ಸರ್ಕಾರ ಅನುಮೋದಿಸಿದೆ. ಈ ಉಪಕ್ರಮವು ಮೇಲ್ವಿಚಾರಣೆಯಲ್ಲಿ ನಿಖರತೆಯನ್ನು ಹೆಚ್ಚಿಸಲು ಮತ್ತು ಗಣಿಗಾರಿಕೆ ಚಟುವಟಿಕೆಗಳಲ್ಲಿ ಸಂಘರ್ಷಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video