ಬಸವರಾಜ ಹೊರಟ್ಟಿ 
ರಾಜ್ಯ

ಬೆಳಗಾವಿ ಅಧಿವೇಶನ: ವಾರದಲ್ಲಿ 2 ದಿನ ಕಿತ್ತೂರು ಕಲ್ಯಾಣ ಪ್ರಾಂತ್ಯ ಅಭಿವೃದ್ಧಿ ಕುರಿತ ಚರ್ಚೆಗೆ ಆದ್ಯತೆ- ಬಸವರಾಜ ಹೊರಟ್ಟಿ

40ಕ್ಕೂ ಹೆಚ್ಚು ಸದಸ್ಯರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಲಾಗಿದ್ದು, ಚಳಿಗಾಲದ ಅಧಿವೇಶನದಲ್ಲಿ ರಚನಾತ್ಮಕ ಕಲಾಪ ನಡೆಸುವಂತೆ ಪರಿಷತ್ ಸದಸ್ಯರಿಗೆ ಸೂಚಿಸಿದ್ದೇನೆ.

ಬೆಳಗಾವಿ: ಎರಡು ವಾರಗಳ ಕಾಲ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಚಳಿಗಾಲ ಅಧಿವೇಶನದಲ್ಲಿ ಮಂಗಳವಾರ ಮತ್ತು ಬುಧವಾರ ಪ್ರಶ್ನೋತ್ತರ ವೇಳೆ‌ ನಂತರ, ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಕುರಿತು ಚರ್ಚಿಸಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಶನಿವಾರ ಹೇಳಿದರು.

ಸುವರ್ಣ ವಿಧಾನಸೌಧದಲ್ಲಿ ಅಧಿವೇಶನದ ವ್ಯವಸ್ಥೆ ಪರಿಶೀಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 40ಕ್ಕೂ ಹೆಚ್ಚು ಸದಸ್ಯರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಲಾಗಿದ್ದು, ಚಳಿಗಾಲದ ಅಧಿವೇಶನದಲ್ಲಿ ರಚನಾತ್ಮಕ ಕಲಾಪ ನಡೆಸುವಂತೆ ಪರಿಷತ್ ಸದಸ್ಯರಿಗೆ ಸೂಚಿಸಿದ್ದೇನೆ. ಡಿಸೆಂಬರ್ 9 ರಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಯಲಿದೆ. ಇಡೀ ಕಿತ್ತೂರು ಕಲ್ಯಾಣ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಯೋಚಿಸಲು ಮತ್ತು ಚರ್ಚಿಸಲು ಸದಸ್ಯರಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ನಾನು ಸಿದ್ಧಪಡಿಸಿದ ಕೃಷ್ಣಾ ಮೇಲ್ದಂಡೆ ಯೋಜನೆ, ಮಹದಾಯಿ–ಕಳಸಾ ಬಂಡೂರಿ ಯೋಜನೆ ಅನುಷ್ಠಾನ, ಅರಣ್ಯಭೂಮಿ ಅತಿಕ್ರಮಣದಾರರು ಮತ್ತು ಸಂತ್ರಸ್ತರ ಸಮಸ್ಯೆ, ಕಬ್ಬು ಬೆಳೆಗಾರರ ಸಮಸ್ಯೆಗಳು, ಶೈಕ್ಷಣಿಕ ಸಂಕಷ್ಟಗಳು ಮತ್ತಿತರ ವಿಷಯಗಳ ಕುರಿತ ಚರ್ಚೆಗೆ ಒತ್ತು ನೀಡಿದ್ದೇನೆ ಎಂದು ತಿಳಿಸಿದರು.

ಪರಿಷತ್ತಿನಲ್ಲಿ ಇದುವರೆಗೆ ಸುಮಾರು 1,397 ಪ್ರಶ್ನೆಗಳನ್ನು ಸ್ವೀಕರಿಸಲಾಗಿದೆ, ಇದರಲ್ಲಿ 150 ಚುಕ್ಕೆ ಗುರುತಿನ ಪ್ರಶ್ನೆಗಳು ಹಾಗೂ 81 ಗಮನ ಸೆಳೆಯುವ ಸೂಚನೆಗಳು ಬಂದಿವೆ. ಈ ಅಧಿವೇಶನದಲ್ಲಿ 14 ಬಿಲ್​ಗಳು ಪಾಸ್ ಆಗುತ್ತಿವೆ. ಇನ್ನು ಮೊದಲ ವಾರ ಮಂಗಳವಾರ ಹಾಗೂ ಬುಧವಾರ ಯುಕೆಪಿ, ಮಹಾದಾಯಿ, ರೈತರ ಸಮಸ್ಯೆ, ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತ‌ ಚರ್ಚೆಗಳಿಗೆ ಒತ್ತು‌ ನೀಡಲಾಗುವುದು. ಅಧಿವೇಶನ ಮಂಗಳವಾರ ಮತ್ತು ಬುಧವಾರ ಪ್ರಶ್ನೋತ್ತರ ವೇಳೆ‌ ನಂತರ ಸಂಪೂರ್ಣ ಕಿತ್ತೂರ ಕಲ್ಯಾಣ ಪ್ರಾಂತ್ಯಗಳ ಅಭಿವೃದ್ಧಿ ಚಿಂತನೆ ನಡೆಸಲು ಸಲಹೆ ನೀಡಲಾಗಿದೆ ಎಂದರು.

ಅಧಿವೇಶನದಲ್ಲಿ ಶಾಸಕರ ಹಾಜರಾತಿ ಹೆಚ್ಚಳಕ್ಕೂ ಆದ್ಯತೆ ನೀಡಲಾಗುತ್ತಿದ್ದು, ಕಳೆದ ವರ್ಷದ ಅಧಿವೇಶನದಂತಹ ಪರಿಸ್ಥಿತಿ ಈ ಬಾರಿ ಉದ್ಭವಿಸುವುದಿಲ್ಲ ಎಂದು ಭರವಸೆ ನೀಡಿದರು.

ಈ ಬಾರಿ ಅಧಿವೇಶನ ನಡೆಸಲು ಸುಮಾರು 20 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಅಂದಾಜಿಸಿದ್ದೇವೆ. ಬೆಳಗಾವಿಯಲ್ಲಿ ಶಾಸಕರ ಭವನ ನಿರ್ಮಿಸಲು ಕೆಲವು ಪ್ರಸ್ತಾವನೆಗಳು ಬಂದಿವೆ. ಈ ಬಗ್ಗೆ ಸರಕಾರದೊಂದಿಗೆ ಕೂಲಂಕಷವಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ತಾಜ್ ಗ್ರೂಪ್, ಕೆಎಲ್​ಇ ಹೀಗೆ ಅನೇಕ ಸಂಸ್ಥೆಗಳು ಶಾಸಕರ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಲಹೆಗಳನ್ನು ನೀಡಿದ್ದು, ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಖಾಸಗಿ ಆತಿಥ್ಯ ದಿಗ್ಗಜರು ತಾಜ್‌ ಗ್ರೂಪ್‌, ಕೆಎಲ್‌ಇ ಸೊಸೈಟಿ ಸೇರಿದಂತೆ ಹಲವು ಸಂಸ್ಥೆಗಳು ಶಾಸಕರ ಭವನ ನಿರ್ಮಾಣಕ್ಕೆ ಸಲಹೆ ನೀಡಿದ್ದು, ಈ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು’’ ಎಂದರು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪಾಲಿಕೆ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ, ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT