ಸಿಎಂ ಸಿದ್ದರಾಮಯ್ಯ 
ರಾಜ್ಯ

ಗಂಡಸರಿಗೂ ಫ್ರೀ ಬಸ್ ಕೊಟ್ಟರೆ KSRTC ಮುಚ್ಚಬೇಕಾಗುತ್ತದೆ: ಸಿಎಂ ಸಿದ್ದರಾಮಯ್ಯ

ಯಳಂದೂರಿನಲ್ಲಿ 100 ಹಾಸಿಗೆಗಳ ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಗ್ಯಾರಂಟಿ ಯೋಜನೆ ಕುರಿತು ಮಾತನಾಡಿದರು.

ಚಾಮರಾಜನಗರ: ಗಂಡಸರಿಗೂ ಉಚಿತ ಬಸ್ ಪ್ರಯಾಣ ಯೋಜನೆ ಘೋಷಿಸಿದರೆ ಕೆಎಸ್ಆರ್'ಟಿಸಿ ಮುಚ್ಚಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.

ಯಳಂದೂರಿನಲ್ಲಿ 100 ಹಾಸಿಗೆಗಳ ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಗ್ಯಾರಂಟಿ ಯೋಜನೆ ಕುರಿತು ಮಾತನಾಡಿದರು. ಈ ವೇಳೆ ಸ್ಥಳೀಯ ಪುರುಷರು ನಮಗೂ ಫ್ರೀ ಬಸ್ ಕೊಡಿ ಎಂದು ಅಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಗಂಡಸರಿಗೂ ಫ್ರೀ ಬಸ್ ಕೊಟ್ಟರೆ ಕೆಎಸ್ಆರ್'ಟಿಸಿ ಮುಚ್ಚಬೇಕಾಗುತ್ತದೆ ಎಂದು ಹೇಳಿದರು.

ನಂತರ ಕಾರ್ಯಕ್ರಮದ ಕುರಿತು ಮಾತನಾಡಿದ ಸಿಎಂ ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಎಲ್ಲ ಜಿಲ್ಲೆಗಳಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಿದರು.

ಆರೋಗ್ಯ ಸೇವೆ ನೀಡುವುದು ಸರ್ಕಾರದ ಬದ್ಧತೆಯಾಗಿದ್ದು, ರೋಗಿಗಳಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ವೈದ್ಯರು ಮಾಡಬೇಕೆಂದು ಸಲಹೆ ನೀಡಿದರು.

ಆರೋಗ್ಯಕರ ಜೀವನಕ್ಕೆ ಪೌಷ್ಠಿಕಾಂಶದ ಆಹಾರವೂ ಮುಖ್ಯವಾಗಿದೆ, ಇತ್ತೀಚಿನ ದಿನಗಳಲ್ಲಿ ಸಾವಯವ ಆಹಾರ ಸೇವನೆಯಲ್ಲಿ ಇಳಿಕೆ ಕಂಡುಬಂದಿದೆ. ಜನರ ಮದ್ಯಪಾನ ತ್ಯಜಿಸಬೇಕು ಎಂದು ಮನವಿ ಮಾಡಿದರು.

ಅಬಕಾರಿ ಆದಾಯ ರೂ.38,525 ಕೋಟಿ ಆಗಿದ್ದು, ಮದ್ಯಕ್ಕೆ ಬಲಿಯಾಗುವ ಬದಲು ಫಿಟ್‌ನೆಸ್ ಕಾಪಾಡಿಕೊಳ್ಳಿ ಎಂದು ಜನತೆಗೆ ಸಲಹೆ ನೀಡಿದರು.

ಬಡವರಿಗೆ ಶಕ್ತಿ ಕೊಡುತ್ತಿದ್ದಾರೆ ಎಂದು ನನ್ನ ಮೇಲೆ ಸುಳ್ಳು ಕೇಸ್ ಹಾಕಲಾಗುತ್ತಿದೆ. ಎಲ್ಲಿಯವರೆಗೆ ಜನರ ಆಶೀರ್ವಾದ ಇರುತ್ತೆ ಅಲ್ಲಿಯವರೆಗೆ ಯಾರು ನನ್ನನ್ನ ಜಗ್ಗಿಸಲು-ಬಗ್ಗಿಸಲು ಆಗಲ್ಲ. ಕರ್ನಾಟಕ ಜನರ ಆಶೀರ್ವಾದದಿಂದ ನಾವು ಗಟ್ಟಿಯಾಗಿದ್ದೇವೆ. ಜನರ ಆಶೀರ್ವಾದ ದಿಂದ ಮೂರು ಉಪಚುನಾವಣೆ ಗೆದಿದ್ದೇವೆ‌. ಎಲ್ಲಾ ಧರ್ಮದ ಬಡವರು ನನ್ನ ಜೊತೆ ಇದ್ದಾರೆ, ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿದಿದೆ. ಈಗ ನಾವು 139 ಜನ ಇದ್ದೇವೆ‌. ಜನವರಿ ಫೆಬ್ರವರಿಯಲ್ಲಿ ತಾಲ್ಲೂಕು ಪಂಚಾಯತ್ ಚುನಾವಣೆ ನಡೆಯಲಿದೆ ಎಲ್ಲರೂ ನಮ್ಮ ಪಕ್ಷದವರಿಗೆ ಆಶೀರ್ವಾದ ಮಾಡಬೇಕು ಎಂದು ಕರೆ ನೀಡಿದರು.

ಇದೇ ವೇಳೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿಗೆ ತಾಲೂಕು ಆಸ್ಪತ್ರೆ ಎಂದು ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.

ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಮಾತನಾಡಿ, ಬಿಆರ್ ಹಿಲ್ಸ್‌ನಲ್ಲಿ ಮಿನಿ ಸಚಿವ ಸಂಪುಟ ಸಭೆ ನಡೆಸಿ ಯಳಂದೂರಿನಲ್ಲಿ ಕೆರೆ ತುಂಬಿಸುವ ಯೋಜನೆಗಳು ಮತ್ತು ಇತರ ಅಭಿವೃದ್ಧಿಗಳನ್ನು ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT