ಸಿಎಂ ಸಿದ್ದರಾಮಯ್ಯ 
ರಾಜ್ಯ

ನನ್ನ ಸವಾಲು ಸ್ವೀಕರಿಸುವ ಧೈರ್ಯ ಪ್ರಧಾನಿ ಮೋದಿಗೆ ಇಲ್ಲ: ಸಿಎಂ ಸಿದ್ದರಾಮಯ್ಯ

ಉಪಚುನಾವಣೆಯಲ್ಲಿ ಬಿಜೆಪಿಯ ಲೋಕಲ್ ಲೀಡರ್ ಗಳಿಂದ ಪ್ರಧಾನಿ ಮೋದಿಯವರೆಗೂ ಸರಣಿ ಸುಳ್ಳುಗಳನ್ನು ಹೇಳಿದರು. ನೀವು ಆರೋಪ ಸಾಬೀತುಪಡಿಸಿ, ನಾನು ರಾಜಕೀಯ ನಿವೃತ್ತಿ ತಗೊತೀನಿ ಎಂದು ಮೋದಿಯವರಿಗೆ ಸವಾಲು ಹಾಕಿದ್ದೆ.

ಬಳ್ಳಾರಿ: ಚುನಾವಣೆ ವೇಳೆ ಹೇಳಿದ್ದ ಸುಳ್ಳಿಗೆ ಪ್ರತಿಯಾಗಿ ನಾನು ಸವಾಲು ಹಾಕಿದ್ದೆ. ಆದರೆ, ಪ್ರಧಾನಿ ಮೋದಿ ಅವರು ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.

ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸುವ ಬೃಹತ್ ಮತದಾರರ ಸಮಾವೇಶವನ್ನು ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

ಉಪಚುನಾವಣೆಯಲ್ಲಿ ಬಿಜೆಪಿಯ ಲೋಕಲ್ ಲೀಡರ್ ಗಳಿಂದ ಪ್ರಧಾನಿ ಮೋದಿಯವರೆಗೂ ಸರಣಿ ಸುಳ್ಳುಗಳನ್ನು ಹೇಳಿದರು. ನೀವು ಆರೋಪ ಸಾಬೀತುಪಡಿಸಿ, ನಾನು ರಾಜಕೀಯ ನಿವೃತ್ತಿ ತಗೊತೀನಿ ಎಂದು ಮೋದಿಯವರಿಗೆ ಸವಾಲು ಹಾಕಿದ್ದೆ. ಅವರು ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಎಂದು ಹೇಳಿದರು.

ನಾನು 3 ದಿನಗಳ ಕಾಲ ಸಂಡೂರಿನಲ್ಲಿ ಪ್ರಚಾರ ಮಾಡಿದೆ. ಈ ವೇಳೆ ತುಕಾರಾಮ್ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಗಮನಿಸಿದ್ದೇನೆ. ತುಕಾರಾಮ್ ಅವರಿಗೂ ಮೊದಲು ಸಂಡೂರು ಹೇಗಿತ್ತು ಎನ್ನುವುದೂ ನನಗೂ ಗೊತ್ತು. ಈಗ ತುಕಾರಾಮ್ ಅವರು ಒಳ್ಳೆ ಕೆಲಸಗಳನ್ನು ಮಾಡಿರುವುದನ್ನು ನಾನು ನೋಡಿದ್ದೇನೆ.

ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ನಾಡಿನ ಜನತೆ ಎದುರಿಗೆ ಕೊಟ್ಟ ಎಲ್ಲಾ ಭರವಸೆಗಳನ್ನೂ ಹಂತ ಹಂತವಾಗಿ ಈಡೇರಿಸುತ್ತಿದ್ದೇವೆ. ನಮ್ಮ ಜನರ ಆರ್ಥಿಕ ಶಕ್ತಿ ಮತ್ತು ಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ನಾವು ರೂಪಿಸಿ ಜಾರಿ ಮಾಡುವುದರ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ.

2014-2018 ರಲ್ಲಿ ನರೇಂದ್ರ ಮೋದಿಯವರು ಕೊಟ್ಟ ಭರವಸೆಗಳನ್ನು ನೆನಪಿಸಿಕೊಳ್ಳಿ. ಅವುಗಳಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ ನೋಡಿ. ಮೋದಿಯವರು ನಿಮಗೆ ಈ ಮಟ್ಟದ ಮೋಸ ಮಾಡಿದ್ದಾರಲ್ಲಾ ಇದನ್ನು ಪ್ರಶ್ನಿಸಬೇಕಿದೆ. ಮೋದಿ ಅಚ್ಚೆ ದಿನ್ ತರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಿಲ್ಲ, ವಿದೇಶದಿಂದ ಕಪ್ಪು ಹಣ ತರಲಿಲ್ಲ, ನಿಮ್ಮ ಖಾತೆಗೆ 15 ಲಕ್ಷ ಹಾಕಲಿಲ್ಲ. ಬರೀ ಭಾಷಣದಲ್ಲೇ ಮೋದಿಯವರು ಎಲ್ಲಾ ಮುಗಿಸಿ ಹೋದರು.

ಬಳ್ಳಾರಿ ಜಿಲ್ಲೆಯ ಜನತೆಯನ್ನು ಭಯದಲ್ಲಿಟ್ಟು ರಿಪಬ್ಲಿಕ್ ಬಳ್ಳಾರಿ ಮಾಡಿದ್ದ ಜನಾರ್ದನ ರೆಡ್ಡಿಯವರಿಗೆ ಬಿಜೆಪಿ ಈ ಚುನಾವಣೆಯ ಉಸ್ತುವಾರಿ ವಹಿಸಿತ್ತು. ಆದರೆ, ಸಂಡೂರಿನ ಜನತೆ ರೆಡ್ಡಿಯವರ ಹಣಕ್ಕೆ, ಭಯಕ್ಕೆ, ಆಮಿಷಕ್ಕೆ, ಸುಳ್ಳುಗಳಿಗೆ, ಅಪಪ್ರಚಾರಕ್ಕೆ ಸೋಲಲಿಲ್ಲ. ಅನ್ನಪೂರ್ಣಮ್ಮ ಅವರನ್ನು ಗೆಲ್ಲಿಸುವ ಮೂಲಕ ಅಭಿವೃದ್ಧಿ ರಾಜಕಾರಣ ಮತ್ತು ಸತ್ಯದ ರಾಜಕಾರಣವನ್ನು ಗೆಲ್ಲಿಸಿದ್ದೀರಿ. ಇದು ಸಂಡೂರಿನ ಘನತೆಯನ್ನು ಹೆಚ್ಚಿಸಿದೆ.

ಇವತ್ತಿನವರೆಗೂ ರಾಜ್ಯದಲ್ಲಿ ಬಿಜೆಪಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ. ಕೇವಲ ಆಪರೇಷನ್ ಕಮಲದ ಮೂಲಕವೇ ಬಿಜೆಪಿ ರಾಜ್ಯದಲ್ಲಿ ಅಧಿಕಾರ ನಡೆಸಿದೆ. ಆಪರೇಷನ್ ಕಮಲಕ್ಕೆ ಬಳಸಿದ ಹಣ ಕೂಡ ಕಪ್ಪು ಹಣ ಅಲ್ಲವೇ?.ಮೂರು ಉಪ ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ರಾಜ್ಯದ ಜನತೆ ನಮ್ಮ ಸರ್ಕಾರಕ್ಕೆ ದೊಡ್ಡ ಆಶೀರ್ವಾದ ಮಾಡಿದ್ದಾರೆ. ನನ್ನ ವಿರುದ್ಧ ಸುಳ್ಳು ಕೇಸು, ಸುಳ್ಳು ಆರೋಪಗಳ ಮೂಲಕ ನನ್ನ ವಿರುದ್ಧ ಷಡ್ಯಂತ್ರ ನಡೆಸಿದ ಬಿಜೆಪಿಗೆ ರಾಜ್ಯದ ಜನತೆ ತಕ್ಕ ಉತ್ತರ ನೀಡಿದ್ದಾರೆ. ನಿಮ್ಮ ಆಶೀರ್ವಾದ ಇರುವವರೆಗೂ ಈ ಸಿದ್ದರಾಮಯ್ಯ ಯಾವುದೇ ಷಡ್ಯಂತ್ರ, ಸುಳ್ಳು ಕೇಸುಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

ವಕ್ಫ್ ವಿಚಾರದಲ್ಲೂ ಬಿಜೆಪಿಯ ರಾಷ್ಟ್ರೀಯ ನಾಯಕರಿಂದ ಲೋಕಲ್ ಲೀಡರ್ ಗಳವರೆಗೂ ಎಲ್ಲರೂ ಸರಣಿ ಸುಳ್ಳು ಅಪಪ್ರಚಾರ ಮಾಡಿದರು. ಪ್ರಧಾನಿ ಮೋದಿಯವರು ಮಹಾರಾಷ್ಟ್ರ ಚುನಾವಣೆಯಲ್ಲಿ 700 ಕೋಟಿ ಭ್ರಷ್ಟಾಚಾರದ ಆರೋಪ ಹೊರಿಸಿ ಭಾಷಣ ಮಾಡಿದರು. ನಾನು ಪ್ರಧಾನಿಗೆ ಸವಾಲು ಹಾಕಿದೆ, ನಿಮ್ಮ ಆರೋಪ ಸಾಬೀತು ಮಾಡಿ. ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎನ್ನುವ ನನ್ನ ಸವಾಲು ಸ್ವೀಕರಿಸಲು ಪ್ರಧಾನಿ ಮೋದಿ ಧೈರ್ಯ ಮಾಡಲಿಲ್ಲ. ಅವರಿಗೆ ಸುಳ್ಳು ಹೇಳುವುದಕ್ಕೆ ಮಾತ್ರ ಧೈರ್ಯ ಬರುತ್ತದೆ. ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಸಂಡೂರು ಜನತೆಗೆ ಅಭಿನಂದಿಸಿ ಭಾಷಣ ಮಾಡುವ ವೇಳೆ ಸಂಡೂರು ಕ್ಷೇತ್ರಕ್ಕೆ ವಸತಿ ಇಲಾಖೆಯಿಂದ ಹೆಚ್ಚುವರಿಯಾಗಿ 2,000 ಮನೆಗಳನ್ನು ನೀಡುವುದಾಗಿ ಘೋಷಿಸಿದರು. ಈಗಾಗಲೇ 2,172 ಮನೆಗಳನ್ನು ನೀಡಲಾಗಿದೆ‌. ಸಂಡೂರಿನಲ್ಲಿ ಬಡವರು ಹೆಚ್ಚಾಗಿರುವುದರಿಂದ ಮತ್ತು ನಂಜುಂಡಪ್ಪ ಅವರ ವರದಿಯಲ್ಲಿ ಹಿಂದುಳಿದ ತಾಲ್ಲೂಕಿನ ಪಟ್ಟಿಯಲ್ಲಿ ಇರುವುದರಿಂದ ಹೆಚ್ಚುವರಿಯಾಗಿ 2000 ಮನೆಗಳನ್ನು ನೀಡಲಾಗುವುದು ಎಂದು ಘೋಷಿಸಿದರು.‌

ಇದೇ ವೇಳೆ ಬಳ್ಳಾರಿ ಆಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರಿಗೆ ಸರ್ಕಾರ ಪರಿಹಾರದ ಮೊತ್ತವನ್ನು ಐದು ಲಕ್ಷಕ್ಕೆ ಏರಿಸಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT