ಸಿಪಿ ಯೋಗೇಶ್ವರ್, ಅನ್ನಪೂರ್ಣ, ಯಾಸೀರ್ ಅಹ್ಮದ್ ಖಾನ್ PTI
ರಾಜ್ಯ

ಉಪ ಚುನಾವಣೆಯಲ್ಲಿ ಗೆದ್ದಿದ್ದ ಮೂವರು ಕಾಂಗ್ರೆಸ್ ಶಾಸಕರಿಂದ ಪ್ರಮಾಣವಚನ ಸ್ವೀಕಾರ

ನವೆಂಬರ್ 13ರಂದು ನಡೆದ ಉಪಚುನಾವಣೆಯಲ್ಲಿ ಪತಿಯಿಂದ ತೆರವಾದ ಸ್ಥಾನಕ್ಕೆ ಬಳ್ಳಾರಿ ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದಿದ್ದರು.

ಬೆಳಗಾವಿ: ನೂತನವಾಗಿ ಆಯ್ಕೆಯಾದ ಮೂವರು ಕಾಂಗ್ರೆಸ್ ಶಾಸಕರು ಇಂದು ಕರ್ನಾಟಕ ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸುವರ್ಣ ವಿಧಾನಸೌಧದಲ್ಲಿ ವಿಧಾನಸಭೆಯ ಚಳಿಗಾಲದ ಅಧಿವೇಶನ ಆರಂಭವಾದ ಬೆನ್ನಲ್ಲೇ ಸಂಡೂರು, ಶಿಗ್ಗಾಂವ್ ಮತ್ತು ಚನ್ನಪಟ್ಟಣ ಮೂರು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಗೆದ್ದಿದ್ದ ಇ ಅನ್ನಪೂರ್ಣ, ಯಾಸೀರ್ ಅಹಮದ್ ಖಾನ್ ಪಠಾಣ್ ಮತ್ತು ಸಿ ಪಿ ಯೋಗೀಶ್ವರ್ ಅವರು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನವೆಂಬರ್ 13ರಂದು ನಡೆದ ಉಪಚುನಾವಣೆಯಲ್ಲಿ ಪತಿಯಿಂದ ತೆರವಾದ ಸ್ಥಾನಕ್ಕೆ ಬಳ್ಳಾರಿ ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದಿದ್ದರು. ಶಿಗ್ಗಾಂವ್‌ನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಬಿಜೆಪಿಯ ಭರತ್ ಬೊಮ್ಮಾಯಿ ಅವರನ್ನು ಪಠಾಣ್ ಸೋಲಿಸಿದ್ದರು.

ಯೋಗೀಶ್ವರ ಅವರು ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಹಾಗೂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದರು. 224 ಸದಸ್ಯ ಬಲದ ವಿಧಾನಸಭೆಯಲ್ಲಿ ಈಗ ಸ್ಪೀಕರ್ ಹೊರತುಪಡಿಸಿ ಕಾಂಗ್ರೆಸ್‌ನ ಸಂಖ್ಯೆ 136 ಆಗಿದೆ.

ಮಹಾರಾಷ್ಟ್ರದ ಗಡಿಯಲ್ಲಿರುವ ಬೆಳಗಾವಿಯಲ್ಲಿ 2006ರಿಂದ ವರ್ಷಕ್ಕೊಮ್ಮೆ ವಿಧಾನಮಂಡಲದ ಅಧಿವೇಶನಗಳನ್ನು ಆಯೋಜಿಸುತ್ತಿದೆ. ಬೆಂಗಳೂರಿನ ವಿಧಾನಸೌಧದ ಮಾದರಿಯಲ್ಲಿ ಸುವರ್ಣ ವಿಧಾನಸೌಧ, ರಾಜ್ಯ ಸಚಿವಾಲಯ, ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದೆ ಎಂಬ ಪ್ರತಿಪಾದನೆಗಾಗಿ ನಿರ್ಮಿಸಲಾಗಿದೆ. ಬೆಳಗಾವಿ ಮತ್ತು ಹತ್ತಿರದ ಕೆಲವು ಸ್ಥಳಗಳು ತನಗೆ ಸೇರಿದ್ದು ಎಂದು ಮಹಾರಾಷ್ಟ್ರ ಹೇಳಿಕೊಳ್ಳುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT