ಸದನದಲ್ಲಿ ಸಿಎಂ ಸಿದ್ದರಾಮಯ್ಯ 
ರಾಜ್ಯ

ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸುವಂತೆ ಆಗ್ರಹ: ಪುಂಡಾಟಿಕೆ ಮಾಡಿದರೆ ಸುಮ್ಮನಿರಲ್ಲ!

ನಮಗೆ ಮಹಾಜನ್ ವರದಿಯೇ ಅಂತಿಮ. ಮಹಾಜನ್ ವರದಿಯನ್ನು ಒಪ್ಪಿಕೊಂಡ ಮೇಲೆ ಮುಗಿಯಿತು. ಯಾರಾದ್ರೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಸಾಧ್ಯವೇ? ಎಂ.ಇ.ಎಸ್ ನವರಾಗಲೀ, ಇನ್ಯಾರೇ ಆಗಲಿ ಈ ವಿಚಾರದಲ್ಲಿ ಪುಂಡಾಟಿಕೆ ಮಾಡಿದರೆ ಸುಮ್ಮನಿರಲ್ಲ.

ಬೆಂಗಳೂರು: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು ಎನ್ನುವ ಆದಿತ್ಯ ಠಾಕ್ರೆ ಅವರ ಹೇಳಿಕೆ ಅತ್ಯಂತ ಬಾಲಿಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು.

ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕೆನ್ನುವ ಆದಿತ್ಯ ಠಾಕ್ರೆ ಅವರ ಹೇಳಿಕೆ ಅತ್ಯಂತ ಬಾಲಿಶವಾದದ್ದು. ನಮಗೆ ಮಹಾಜನ್ ವರದಿಯೇ ಅಂತಿಮ. ಮಹಾಜನ್ ವರದಿಯನ್ನು ಒಪ್ಪಿಕೊಂಡ ಮೇಲೆ ಮುಗಿಯಿತು. ಯಾರಾದ್ರೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಸಾಧ್ಯವೇ? ಎಂ.ಇ.ಎಸ್ ನವರಾಗಲೀ, ಇನ್ಯಾರೇ ಆಗಲಿ ಈ ವಿಚಾರದಲ್ಲಿ ಪುಂಡಾಟಿಕೆ ಮಾಡಿದರೆ ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದರು.

ಗಡಿ ವಿವಾದ ಇತ್ಯರ್ಥ ಆಗುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ವೊರ್ಲಿ ಕ್ಷೇತ್ರದ ಶಾಸಕ ಆದಿತ್ಯ ಠಾಕ್ರೆ ಅವರು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದರು.

ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಯಿಂದಾಗಿ ಸಂಭ್ರಮಾಚರಣೆ ನಡೆಯುತ್ತಿದೆ. ಮತ್ತೊಂದೆಡೆ, ಬೆಳಗಾವಿಯ ಪರಿಸ್ಥಿತಿಯನ್ನು ನೋಡಿ. ನೆರೆಯ ಈ ಪ್ರದೇಶದಲ್ಲಿ ಮರಾಠಿ ಭಾಷಿಕರ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ. ಬೆಳಗಾವಿ ವಿವಾದವನ್ನು ಬಗೆಹರಿಸಲು ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಮತ್ತು ಗಡಿ ವಿವಾದ ಇತ್ಯರ್ಥವಾಗೋವರೆಗು ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT