ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಕಾಂಗ್ರೆಸ್ (ಸಂಗ್ರಹ ಚಿತ್ರ) 
ರಾಜ್ಯ

ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ

ಇಂದು ಇಡೀ ದಿನ ಸದಾಶಿವನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮಧ್ಯಾಹ್ನ 1 ಗಂಟೆಯ ಬಳಿಕ ಹುಟ್ಟೂರು ಮದ್ದೂರಿಗೆ ಪಾರ್ಥಿವ ಶರೀರವನ್ನು ಸ್ಥಳಾಂತರ ಮಾಡಲಾಗುತ್ತದೆ.

ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ (92) ಅವರು ಮಂಗಳವಾರ ವಿಧಿವಶರಾಗಿದ್ದಾರೆ.

ಇಂದು ಬೆಳಗಿನ ಜಾವ 2 ಗಂಟೆಗೆ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಉಸಿರಾಟದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ವೈದ್ಯರಿಗೆ ಕುಟುಂಬಸ್ಥರು ಮಾಹಿತಿ ನೀಡಿದ್ದರು. ಕೂಡಲೇ ವೈದ್ಯರು ಮನೆಗೆ ಆಗಮಿಸಿದ್ದರು. ಬೆಳಗ್ಗೆ 3:30ಕ್ಕೆ ವೈದ್ಯರು ಎಸ್‌ಎಂ ಕೃಷ್ಣ ಮೃತಪಟ್ಟ ಬಗ್ಗೆ ಮಾಹಿತಿ ನೀಡಿದರು. ಇಂದು ಬೆಳಗ್ಗೆ ಮನೆಯಿಂದ ಚೆಕಪ್‌ಗಾಗಿ ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬಸ್ಥರು ನಿರ್ಧಾರ ಮಾಡಿದ್ದರು ಎನ್ನಲಾಗಿದೆ.

ಇಂದು ಇಡೀ ದಿನ ಸದಾಶಿವನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮಧ್ಯಾಹ್ನ 1 ಗಂಟೆಯ ಬಳಿಕ ಹುಟ್ಟೂರು ಮದ್ದೂರಿಗೆ ಪಾರ್ಥಿವ ಶರೀರವನ್ನು ಶಿಫ್ಟ್‌ ಮಾಡಲಾಗುತ್ತದೆ.

ಸದಾಶಿವನಗರ ಎಸ್ ಎಂ ಕೃಷ್ಣ ಮನೆ ಬಳಿ ಪೊಲೀಸರ ಅಲರ್ಟ್‌ ಆಗಿದ್ದು, ನಿವಾಸದ ಅಕ್ಕಪಕ್ಕ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸ್ ಭದ್ರತೆ ಕಲ್ಪಿಸಿದ್ದಾರೆ.

ಕರ್ನಾಟಕದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಎಂಬ ಗ್ರಾಮದಲ್ಲಿ 1932 ರ ಮೇ 1ರಂದು ಒಕ್ಕಲಿಗ ಕುಟುಂಬದಲ್ಲಿ ಜನಿಸಿದ ಎಸ್​ಎಂ ಕೃಷ್ಣ ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಅವರು, ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢ ಶಿಕ್ಷಣ, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ತಮ್ಮ ಬ್ಯಾಚುಲರ್ ಆಫ್ ಆರ್ಟ್ಸ್, ಯೂನಿವರ್ಸಿಟಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಸದರ್ನ್ ಮೆಥೋಡಿಸ್ಟ್ ವಿಶ್ವವಿದ್ಯಾಲಯ ಮತ್ತು ವಾಷಿಂಗ್ಟನ್ ಡಿಸಿಯ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದ ಲಾ ಸ್ಕೂಲ್​ನಿಂದಲೂ ಪದವಿ ಪಡೆದಿದ್ದರು.

1962 ರಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮೂಲಕ ಗೆಲುವು ಸಾಧಿಸಿದ ಕೃಷ್ಣ ಆ ಮೂಲಕ ಚುನಾವಣಾ ರಾಜಕೀಯ ಜೀವನಕ್ಕೆ ಧುಮುಕಿದ್ದರು. ಆ ಬಳಿಕ ಅವರು ‘ಪ್ರಜಾ ಸೋಷಿಯಲಿಸ್ಟ್ ಪಕ್ಷ’ಕ್ಕೆ ಸೇರಿದ್ದರು. ಆದರೆ 1967 ರ ಚುನಾವಣೆಯಲ್ಲಿ ಮದ್ದೂರಿನಿಂದ ಕಾಂಗ್ರೆಸ್‌ನ ಎಂಎಂ ಗೌಡ ವಿರುದ್ಧ ಸೋಲನುಭವಿಸಿದ್ದರು. 1968 ರಲ್ಲಿ ಹಾಲಿ ಸಂಸದರು ನಿಧನರಾದಾಗ ಅವರು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ರಾಷ್ಟ್ರ ರಾಜಕೀಯಕ್ಕೆ ಅಡಿಯಿಟ್ಟರು.

1968 ರ ಉಪಚುನಾವಣೆಯ ನಂತರ ಮಂಡ್ಯ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿ ಕಾರ್ಯನಿರ್ವಹಿಸಿದರು. 1971 ಮತ್ತು 1980 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗಳನ್ನು ಗೆದ್ದಿದ್ದರು. ಆಗ ಮಂಡ್ಯವನ್ನು ಕಾಂಗ್ರೆಸ್ ಭದ್ರಕೋಟೆಯಾಗಿ ಉಳಿಸುವಲ್ಲಿ ಎಸ್​​ಎಂ ಕೃಷ್ಣ ಪಾತ್ರ ಪ್ರಮುಖವಾದದ್ದಾಗಿತ್ತು.

ರಾಜಕೀಯ ಜೀವನದುದ್ದಕ್ಕೂ ಕಾಂಗ್ರೆಸ್​​ನಲ್ಲೇ ಪ್ರಬಲ ನಾಯಕರಾಗಿದ್ದ ಎಸ್​ಎಂ ಕೃಷ್ಣ, ರಾಜಕೀಯ ಜೀವನದ ಕೊನೆಗಾಲದಲ್ಲಿ, 2017 ರ ಜನವರಿ 29 ರಂದು ಕಾಂಗ್ರೆಸ್ ದಸ್ಯತ್ವಕ್ಕೆ ರಾಜೀನಾಮೆ ನೀಡಿದರು. 2017 ರ ಮಾರ್ಚ್​ನಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT