ಎಸ್ಎಂ ಕೃಷ್ಣ  online desk
ರಾಜ್ಯ

SM Krishna last letter: ಮಾಜಿ ಸಿಎಂ ಬರೆದಿದ್ದ ಕೊನೆಯ ಸಾಲುಗಳಲ್ಲಿ ಏನಿದೆ ಅಂದರೆ...

ಸರಳ, ಸಜ್ಜನಿಕೆಯಿಂದಲೇ ಜನಮನ ಗೆದ್ದ ನಾಯಕರಾಗಿದ್ದ ಎಸ್ ಎಂ ಕೃಷ್ಣ ಅವರು ಇತ್ತೀಚಿನ ದಿನಗಳಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಪಡೆದ ಬಳಿಕ ಇತ್ತೀಚೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.

ಕರ್ನಾಟಕದ ಮಾಜಿ ಸಿಎಂ ಎಸ್‌ಎಂ ಕೃಷ್ಣ (SM Krishna Death) ಅವರು ಇಂದು ವಯೋ ಸಹಜ ಅನಾರೋಗ್ಯದ ಕಾರಣ ನಿಧನರಾದರು.

ಸದಾಶಿವನಗರದ ನಿವಾಸದಲ್ಲಿ ಎಸ್ಎಂ ಕೃಷ್ಣ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ. ಗಣ್ಯರು ಎಸ್ಎಂ ಕೃಷ್ಣ ಅವರಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

ಸರಳ, ಸಜ್ಜನಿಕೆಯಿಂದಲೇ ಜನಮನ ಗೆದ್ದ ನಾಯಕರಾಗಿದ್ದ ಎಸ್ ಎಂ ಕೃಷ್ಣ ಅವರು ಇತ್ತೀಚಿನ ದಿನಗಳಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಪಡೆದ ಬಳಿಕ ಇತ್ತೀಚೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.

ಈ ಮಧ್ಯೆ ಎಸ್ಎಂ ಕೃಷ್ಣ ಸಾರ್ವಜನಿಕವಾಗಿ ಬರೆದಿರುವ ಕೊನೆಯ ಪತ್ರವೊಂದು ಗಮನ ಸೆಳೆಯುತ್ತಿದೆ. ಎಸ್ಎಂಕೆ ಬರೆದ ಪತ್ರ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದ್ದಾಗಿದ್ದು, ಈ ಕೆಳ ಕಂಡಂತಿದೆ.

‘ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನನ್ನ ಶುಭಾಶಯಗಳು, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರ ದೂರದೃಷ್ಟಿಯ ಫಲವಾಗಿ ರೂಪುಗೊಂಡ ಮಂಡ್ಯ ಜಿಲ್ಲೆ ನಾಡಿನಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಭಾಷಿಕರು ಇರುವ ಜಿಲ್ಲೆ. ಇಂತಹ ಐತಿಹ್ಯವುಳ್ಳ ನಮ್ಮ ಮಂಡ್ಯ ಜಿಲ್ಲೆಯಲ್ಲಿ 3ನೇ ಬಾರಿಗೆ ಆಯೋಜನೆಗೊಂಡಿರುವ ಕನ್ನಡದ ಸಿರಿಹಬ್ಬವು ಯಶಸ್ವಿಯಾಗಿ ಜರುಗಲೆಂದು ಶುಭ ಹಾರೈಸುತ್ತೇನೆ.

ಮೈಸೂರಿನ ಮಹಾರಾಜರಾಗಿದ್ದ ಜನಾನುರಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರು ಕನ್ನಡದ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಲು ಕನ್ನಡ ಸಾಹಿತ್ಯ ಪರಿಷತ್ತನ್ನು ಪ್ರತಿಷ್ಠಾಪಿಸಿದರು. ಅಂದಿನಿಂದ ಕನ್ನಡದ ನುಡಿಹಬ್ಬ ಆಳುವ ಸರ್ಕಾರಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಜರುಗುತ್ತಾ ಬಂದಿದೆ. ಕನ್ನಡ ಸಾರಸ್ವತಾ ಲೋಕದ ಹಲವು ಹಿರಿಯ ಸಾಹಿತಿಗಳು ಸಮ್ಮೇಳನದ ಅಧ್ಯಕ್ಷರಾಗಿ ಕನ್ನಡದ ತೇರನ್ನು ಎಳೆಯುವುದರ ಜೊತೆಗೆ ಕನ್ನಡ ಭಾಷೆಯನ್ನು ಪ್ರಚುರ ಪಡಿಸುತ್ತಾ ಕನ್ನಡದ ಉಳಿವಿಗಾಗಿ ಹಲವು ಸಲಗೆ ಒತ್ತಾಸಿಗಳನ್ನು ಸರ್ಕಾರಗಳಿಗೆ ನೀಡುತ್ತಾ ಬಂದಿದ್ದಾರೆ.

ಸಾಹಿತ್ಯ ಸಮ್ಮೇಳನಗಳು ಕೇವಲ ಜನಜಾತ್ರೆಗಳಾಗದೆ ಕನ್ನಡದ ಅಸ್ಥಿತೆ ಅಸ್ಮಿತೆಯನ್ನು ಸಾರುವ ಹಬ್ಬವಾಗಿದ್ದು ಇದರಲ್ಲಿ ಕನ್ನಡದ ಹಲವು ವಿದ್ವಾಂಸರ ಲೇಖನಗಳು, ಪುಸ್ತಕಗಳು ಹಾಗೂ ಬರವಣಿಗೆಗಳು ಹೊರಬಂದು ಹಲವು ಓದುಗರಿಗೆ ಸವಿಯೂಟವನ್ನು ಊಣಬಡಿಸಿದೆ. ತಂತ್ರಜ್ಞಾನ ಬೆಳೆದಂತೆ ಕನ್ನಡದ ಆವಿಷ್ಕಾರಗಳು ಪರಿಷ್ಕೃತಗೊಂಡು ರಾಜ್ಯದ ಎಲ್ಲೆಯನ್ನು ಮೀರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡದ ಬಳಕೆ ಎದ್ದು ಕಾಣುತ್ತಿದೆ.

ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರಕಿಸುವಲ್ಲಿ ಹಲವು ಮಹನೀಯರು ಶ್ರಮಿಸಿದ್ದು ಅದರ ಫಲವಾಗಿ ಅಂದಿನ ಪ್ರಧಾನ ಮಂತ್ರಿಗಳಾಗಿದ್ದ ಡಾ॥ ಮನಮೋಹನ್ ಸಿಂಗ್‌ರವರ ಅಧಿಕಾರಾವಧಿಯಲ್ಲಿ ಅದಕ್ಕೆ ಅಧಿಕೃತ ಮುದ್ರೆಯನ್ನು ಒತ್ತುವುದರ ಮೂಲಕ ಕನ್ನಡಕ್ಕೆ ಅಧಿಕೃತ ಶಾಸ್ತ್ರೀಯ ಸ್ಥಾನಮಾನ ಕಲ್ಪಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ.

ಮಂಡ್ಯ ಆತಿಥ್ಯಕ್ಕೆ ಹೆಸರಾದ ಜಿಲ್ಲೆ ಕನ್ನಡ ಭಾಷೆಯನ್ನು ಗೌರವಿಸುವಲ್ಲಿ ಜಿಲ್ಲೆಯ ಜನ ಸಿದ್ಧಹಸ್ತರು. ಈ ಹಿಂದೆ ನಡೆದ ಸಾಹಿತ್ಯ ಸಮ್ಮೇಳನಗಳಲ್ಲಿ ಸಕ್ರೀಯವಾಗಿ ಭಾಗವಹಿಸಿ ಕನ್ನಡದ ಹಬ್ಬವನ್ನು ತಮ್ಮ ಮನೆಯ ಹಬ್ಬವಾಗಿ ಆಚರಿಸಿದ ಕೀರ್ತಿ ಮಂಡ್ಯ ಜಿಲ್ಲೆಯ ಜನರಿಗೆ ಸಲ್ಲುತ್ತದೆ. ಈ ಹಿಂದಿನ ಎರಡು ಸಮ್ಮೇಳನಗಳಲ್ಲಿ ಭಾಗವಹಿಸಿದ್ದ ನಾನು ಸದರಿ ಸಮ್ಮೇಳನಗಳಲ್ಲಿ ಭಾಗವಹಿಸಿದ್ದ ಜನರ ಉತ್ಸುಕತೆ ಕಂಡು ಅತ್ಯಂತ ಮಳಕಿತನಾಗಿದ್ದೆ. ಬಾರಿಗೆ ಮಂಡ್ಯದಲ್ಲಿ ನಡೆದ ಸಾಹಿತ್ಯ ಸಮ್ಮೇಳನಕ್ಕೆ ಹಿರಿಯ ಮಹಿಳಾ ಸಾಹಿತಿಗಳಾಗಿದ್ದ ಶ್ರೀಮತಿ ಜಯದೇವಿ ತಾಯಿ ಲಿಗಾಡೆಯವರು ಪ್ರಥಮ ಮಹಿಳಾ ಸಮ್ಮೇಳನಾಧ್ಯಕ್ಷರಾಗಿದ್ದು ಅಂದಿನ ಸಾಹಿತ್ಯ ಸಮ್ಮೇಳನ ಐತಿಹಾಸಿಕ ದಾಖಲೆಯಾಗಿದೆ.

ಅದೇ ರೀತಿ 1994 ರಲ್ಲಿ ನಾನು ರಾಜ್ಯದ ಉಪ ಮುಖ್ಯಮಂತ್ರಿಯಾಗಿದ್ದಾಗ ಮಾನ್ಯ ಶ್ರೀ ಜಿ. ಮಾದೇಗೌಡರವರ ನೇತೃತ್ವದಲ್ಲಿ ನಡೆದ ಸಮ್ಮೇಳನ ಅವಿಸ್ಮರಣೀಯ. ಮಾದೇಗೌಡರು ಎಲ್ಲರನ್ನೂ ಒಗ್ಗೂಡಿಸಿ ಎಲ್ಲರ ಸಹಕಾರದಿಂದ ಸಮ್ಮೇಳನ ಆಯೋಜಿಸಿದ್ದು ನನ್ನ ಸ್ಮೃತಿಪಟಲದಲ್ಲಿದೆ. ಜಗದ್ಗುರು ಶ್ರೀ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮಿಗಳ ಶ್ರೀರಕ್ಷೆಯಲ್ಲಿ ಅಂದು ನಡೆದ ಸಮ್ಮೇಳನದ ರೀತಿಯಲ್ಲೇ ಪ್ರಸ್ತುತ ಆಯೋಜನೆಗೊಂಡಿರುವ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಲಿ, 1994ರ ಸಾಹಿತ್ಯ ಸಮ್ಮೇಳನದ ಅವಧಿಯಲ್ಲಿ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದ ನನ್ನ ಸನ್ನಿತ್ರರೂ, ಹಿರಿಯ ಸಾಹಿತಿಗಳೂ, ಶರಣರಾದ ಗೋ. ರು. ಚನ್ನಬಸಪ್ಪನವರು ಪ್ರಸ್ತುತ ಸಮ್ಮೇಳನಾಧ್ಯಕ್ಷರಾಗಿ ನೇಮಕಗೊಂಡಿರುವುದು ಸಂತಸ ತಂದಿದ್ದು ಅವರಿಗೆ ನನ್ನ ಶುಭ ಹಾರೈಕೆ.

ನಾಡಿನ ಶ್ರೀಮಂತ ಸಾಹಿತ್ಯ ಪರಂಪರೆಗೆ ಮಂಡ್ಯ ಜಿಲ್ಲೆ ಕೊಡುಗೆ ಅಪಾರ, ಪ್ರಾತಃಸ್ಮರಣೀಯರಾದ ಶ್ರೀ ಪಿಟೀಲು ಚೌಡಯ್ಯ, ಶ್ರೀ ಬಿ.ಎಂ. ಶ್ರೀಕಂಠಯ್ಯ, ಶ್ರೀ ಪು.ತಿ.ನರಸಿಂಹಾಚಾರ್, ಶ್ರೀ ಕೆ.ಎಸ್. ನರಸಿಂಹಸ್ವಾಮಿ, ಜಾನಪದ ತಜ್ಞ ಡಾ| ಎಚ್. ಎಲ್. ನಾಗೇಗೌಡ, ಖ್ಯಾತ ನಟ ಶ್ರೀ ಅಂಬರೀಶ್, ಇವರೆಲ್ಲರೂ ಮಂಡ್ಯ ಜಿಲ್ಲೆಯ ಕೀರ್ತಿ ಬೆಳಗಿಸಿ ಅಜರಾಮರರಾದ ಮಹನೀಯರು ಇವರುಗಳನ್ನು ಪ್ರಸ್ತುತ ಸಮ್ಮೇಳನದಲ್ಲಿ ನೆನೆಯುವುದು ಅವಶ್ಯವಾಗಿದೆ. ಸರ್ವರಿಗೂ ಆದರ್ಶನೀಯರಾದ ಜಗದ ಕವಿ ಶ್ರೀ ಕುವೆಂಪುರವರ ಸರ್ವಜನಾಂಗದ ಶಾಂತಿಯ ತೋಟದ ಸ್ತುತಿಯನ್ನು ನೆನೆಯುತ್ತಾ ಸಾಹಿತ್ಯ ಸಮ್ಮೇಳನಕ್ಕೆ ಶುಭವಾಗಲಿ, ಈ ಸಂದರ್ಭದಲ್ಲಿ ಹೊರತರುತ್ತಿರುವ ನೆನಪಿನ ಸಂಪುಟಕ್ಕೆ ನನ್ನ ಶುಭಕಾಮನೆಗಳು.’

ಎಸ್ಎಂ ಕೃಷ್ಣ ಪತ್ರ

ಎಸ್.ಎಂ.ಕೃಷ್ಣ ರಾಜಕೀಯ ಜೀವನ

  • ಎಸ್​ ಎಂ ಕೃಷ್ಣ ಅವರು ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ ಸ್ವಲ್ಪ ಕಾಲ ಅಂತಾರಾಷ್ಟ್ರೀಯ ನ್ಯಾಯದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದರು.

  • ಮೊದಲ ಬಾರಿಗೆ 1962ರಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಪ್ರವೇಶ ಮಾಡಿದರು. 1968ರಲ್ಲಿ ಲೋಕಸಭೆಗೆ ಚುನಾಯಿತರಾದರು. 1971ರಲ್ಲಿ ಮರು ಚುನಾಯಿತರಾಗಿ ಮತ್ತೆ 1972ರಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾಯಿತರಾದರು.

  • ಇದೇ ಸಮಯದಲ್ಲಿ ಎಸ್ ಎಂ ಕೃಷ್ಣ ಅವರು ವಾಣಿಜ್ಯ, ಉದ್ಯಮ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದರು. 1983ರಲ್ಲಿ ಉದ್ಯಮ ಖಾತೆ ಮತ್ತು 1984ರಲ್ಲಿ ವಿತ್ತ ಖಾತೆಯ ಸಚಿವರಾದರು. 1989ರಿಂದ 1992ರವರೆಗೆ ವಿಧಾನಸಭೆಯ ಸ್ಪೀಕರ್ ಆಗಿ ನೇಮಿತರಾದರು. ಅಲ್ಲದೆ 1992 ರಿಂದ 1994 ರವರೆಗೆ ಕರ್ನಾಟಕದ ಉಪ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸೇವೆ ಸಲ್ಲಿಸಿದರು.

  • 1995ರ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಎಸ್ಎಂಕೃಷ್ಣ ಸೋಲು ಅನುಭವಿಸಬೇಕಾಯಿತು. ಆ ವೇಳೆ ರಾಜಕೀಯದಲ್ಲಿ ಕೃಷ್ಣ ಅವರ ಸೋಲು ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

  • ಬಳಿಕ 1989 ರಿಂದ 1993 ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. 1996ರಲ್ಲಿ ರಾಜ್ಯಸಭೆಗೆ ನೇಮಕಗೊಂಡ ಎಸ್ ಎಂ ಕೃಷ್ಣ ಅವರು, 1999ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಅಲ್ಲದೆ 1999 ರಿಂದಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರಾಗಿದ್ದರು.

  • 1999 ರಲ್ಲಿ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅನ್ನು ಎಸ್ಎಂ ಕೃಷ್ಣ ಮುನ್ನೆಡೆಸಿದ್ದರು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 132 ಸೀಟುಗಳನ್ನು ಗೆದ್ದು ಅಧಿಕಾರದ ಗದ್ದುಗೆ ಹಿಡಿಯಿತು.1999 ರಿಂದ 2004 ರವರೆಗೆ ಎಸ್.ಎಂ.ಕೃಷ್ಣ ಅವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು.

  • ಎಸ್ ಎಂ ಕೃಷ್ಣ ಅವರು 2004 ರಿಂದ 2008 ರವರೆಗೆ ಮಹಾರಾಷ್ಟ್ರದ 19ನೇ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು. 2009- 2012ರ ವರೆಗೆ ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದ ಕೃಷ್ಣ ಅವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು. ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ 2017ರ ಮಾರ್ಚ್​ನಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪಡೆದಿದ್ದರು.

  • ಎಸ್.ಎಂ.ಕೃಷ್ಣ ಅವರು ವಿದೇಶಗಳಲ್ಲಿ ಎರಡು ಬಾರಿ (ವಿಶ್ವಸಂಸ್ಥೆಯಲ್ಲಿ ಒಮ್ಮೆ, ಮತ್ತು ಕಾಮನ್ ವೆಲ್ತ್ ಒಕ್ಕೂಟದಲ್ಲಿ ಒಮ್ಮೆ) ಭಾರತವನ್ನು ಪ್ರತಿನಿಧಿಸಿದ್ದಾರೆ.

  • ಒಟ್ಟಾರೆಯಾಗಿ ಎಸ್ ಎಂ ಕೃಷ್ಣ ಅವರು ಪ್ರಮುಖ 10 ಚುನಾವಣೆಗಳನ್ನು ಎದುರಿಸಿದ್ದಾರೆ. 6 ವಿಧಾನಸಭಾ ಚುನಾವಣೆಗಳನ್ನು ಎದುರಿಸಿದ್ದು, ಇವುಗಳಲ್ಲಿ 4 ರಲ್ಲಿ ಗೆಲುವು, 2 ಚುನಾವಣೆಯಲ್ಲಿ ಸೋಲನ್ನು ಅಭವಿಸಿದ್ದಾರೆ.

  • 4 ಲೋಕಸಭಾ ಚುನಾವಣೆಗಳನ್ನು ಎದುರಿಸಿದ್ದು, ಈ ಪೈಕಿ 3 ಚುನಾವಣೆಯಲ್ಲಿ ಗೆಲುವು ಪಡೆದು, 1 ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಮದ್ದೂರು ಕ್ಷೇತ್ರದಿಂದ 3 ಬಾರಿ ಹಾಗೂ ಚಾಮರಾಜಪೇಟೆಯಿಂದ 1 ಬಾರಿ ಶಾಸಕರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಚಿನ್ನಸ್ವಾಮಿ ಮೈದಾನದಲ್ಲಿ CSK ಮಣಿಸಿದ RCB, ಚೆನ್ನೈಗೆ ಸತತ 3ನೇ ಸೋಲು!

ಗುಜರಾತ್ ಜನರು ಅನಕ್ಷರಸ್ಥರು..; ಮೋದಿ, ಪಿಣರಾಯಿ ವಿಜಯನ್ ಜನರ ದಾರಿ ತಪ್ಪಿಸಿದ್ದಾರೆ: Mallikarjun Kharge

ಟ್ರಂಪ್ 48 ಗಂಟೆಗಳ ಗಡುವು ಬೆನ್ನಲ್ಲೇ ಇರಾನ್‌ನ ಮತ್ತೊಬ್ಬ IRGC ಹಿರಿಯ ಕಮಾಂಡರ್ ಹತ್ಯೆಗೈದ ಇಸ್ರೇಲ್!

Operation Eagle Claw ವೈಫಲ್ಯ, ಮಣ್ಣು ಮುಕ್ಕಿದ್ದು ಮರೆತುಬಿಟ್ರಾ? 'ಈ ಸಂದೇಶ' ನೆನಪಿಡಿ: US Crazy Bast*rds ಪೋಸ್ಟ್ ಗೆ ಇರಾನ್ ವ್ಯಂಗ್ಯ!

IPL 2026: ಚಿನ್ನಸ್ವಾಮಿಯಲ್ಲಿ ಸಿಕ್ಸರ್​ಗಳ ಸುರಿಮಳೆ; CSK ವಿರುದ್ಧ ದಾಖಲೆಯ 250 ರನ್ ಪೇರಿಸಿದ RCB

SCROLL FOR NEXT