ಬೊಮ್ಮಸಂದ್ರ ಮೆಟ್ರೋ ನಿಲ್ದಾಣ 
ರಾಜ್ಯ

Namma Metro: ಹಳದಿ ಮಾರ್ಗದ ಬೊಮ್ಮಸಂದ್ರ ನಿಲ್ದಾಣಕ್ಕೆ Delta Electronics ಹೆಸರು ನಾಮಕರಣ

ಮುಂದಿನ 30 ವರ್ಷದವರೆಗೆ ಈ ನಿಲ್ದಾಣಕ್ಕೆ ತನ್ನ ಹೆಸರನ್ನು ನಾಮಕರಣ ಮಾಡಿಕೊಳ್ಳುವ ಹಕ್ಕು ಪಡೆದಿದ್ದು, ಕಂಪನಿಯು ಬಿಎಂಆರ್‌ಸಿಎಲ್‌ಗೆ ರೂ. 65 ಕೋಟಿ ಪಾವತಿಸಿದೆ.

ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗದ ಬೊಮ್ಮಸಂದ್ರ ರೈಲು ನಿಲ್ದಾಣಕ್ಕೆ ತನ್ನ ಹೆಸರನ್ನು ನಾಮಕರಣ ಮಾಡಿಕೊಳ್ಳಲು ತೈವಾನ್‌ನ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಕಂಪನಿ ಡೆಲ್ಟಾ ಎಲೆಕ್ಟ್ರಾನಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮತ್ತು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ನಡುವೆ ಸೋಮವಾರ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

ಈ ಮೂಲಕ ಮುಂದಿನ 30 ವರ್ಷದವರೆಗೆ ಈ ನಿಲ್ದಾಣಕ್ಕೆ ತನ್ನ ಹೆಸರನ್ನು ನಾಮಕರಣ ಮಾಡಿಕೊಳ್ಳುವ ಹಕ್ಕು ಪಡೆದಿದ್ದು, ಕಂಪನಿಯು ಬಿಎಂಆರ್‌ಸಿಎಲ್‌ಗೆ ರೂ. 65 ಕೋಟಿ ಪಾವತಿಸಿದೆ. ಹಳದಿ ಮಾರ್ಗದ ನಿಲ್ದಾಣಕ್ಕೆ ಹೆಸರಿಡುವುದಕ್ಕೆ ಮಾಡಿಕೊಂಡ ಮೂರನೇ ಒಪ್ಪಂದ ಇದಾಗಿದೆ. ಇನ್ಫೋಸಿಸ್ ಫೌಂಡೇಶನ್ ಕೊನ್ನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣಕ್ಕೆ ಸಹಿ ಹಾಕಿದರೆ, ಬಯೋಕಾನ್ ಫೌಂಡೇಶನ್ ಹೆಬ್ಬಗೋಡಿ ನಿಲ್ದಾಣಕ್ಕೆ ಒಪ್ಪಂದ ಮಾಡಿಕೊಂಡಿದೆ.

ಇನೋವೇಟಿವ್ ಫೈನಾನ್ಸಿಂಗ್ ಮೆಕ್ಯಾನಿಸಂ ಯೋಜನೆಯಡಿ ಈ ಒಪ್ಪಂದವಾಗಿದ್ದು, ರಾಜ್ಯ ಸರ್ಕಾರದ ಅನುಮೋದನೆ ಪಡೆಯಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ರೂ.10 ಕೋಟಿ ಮೊತ್ತವನ್ನು ಈಗಾಗಲೇ ಪಾವತಿಸಲಾಗಿದ್ದು, ಉಳಿದ ಮೊತ್ತ ರೂ. 55 ಕೋಟಿಯನ್ನು ಇಂದು ಪಾವತಿಸಲಾಗಿದೆ ಎಂದು ತಿಳಿಸಲಾಗಿದೆ. ಸುಸ್ಥಿರ ನಗರಾಭಿವೃದ್ಧಿ ಮತ್ತು ನಗರ ಸಾರಿಗೆಯ ಬೆಂಬಲಕ್ಕೆ ಡೆಲ್ಟಾ ಎಲೆಕ್ಟ್ರಾನಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮುಂದೆ ಬಂದಿರುವುದು ತುಂಬಾ ಸಂತೋಷವಾಗಿದೆ ಎಂದು BMRCL ವ್ಯವಸ್ಥಾಪಕ ನಿರ್ದೇಶಕ M. ಮಹೇಶ್ವರ್ ರಾವ್ ತಿಳಿಸಿದ್ದಾರೆ.

ಡೆಲ್ಟಾ ಎಲೆಕ್ಟ್ರಾನಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಅಧ್ಯಕ್ಷ ಬೆಂಜಮಿನ್ ಲಿನ್ ಮತ್ತು ವ್ಯವಸ್ಥಾಪಕ ನಿರ್ದೇಶಕ ನಿರಂಜನ್ ನಾಯಕ್ ಮಾತನಾಡಿ, ಹೊಸೂರು ರಸ್ತೆಯಲ್ಲಿ ಬೊಮ್ಮಸಂದ್ರ ಮೆಟ್ರೋ ನಿಲ್ದಾಣದ ನಿರ್ಮಾಣಕ್ಕಾಗಿ ನಾವು BMRCL ನೊಂದಿಗೆ ಪಾಲುದಾರಿಕೆ ಹೊಂದಲು ಸಂತೋಷಪಡುತ್ತೇವೆ. ಈ ಯೋಜನೆಯು ಸಾರ್ವಜನಿಕ ಸಾರಿಗೆಯ ಹೆಚ್ಚಿನ ಬಳಕೆಯನ್ನು ಸಕ್ರಿಯಗೊಳಿಸುವ ಮೂಲಕ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ