SM ಕೃಷ್ಣ ಪಂಚಭೂತಗಳಲ್ಲಿ ಲೀನ 
ರಾಜ್ಯ

SM Krishna ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ ಗೌರವದೊಂದಿಗೆ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ

ಇಂದು ಸಂಜೆ ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದಲ್ಲಿರುವ ಕಾಫಿ ಡೇ ಹತ್ತಿರದ ಖಾಲಿ ಜಾಗದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿತು.

ಮಂಡ್ಯ: ಅಗಲಿದ ಮಾಜಿ ಮುಖ್ಯಮಂತ್ರಿ, ದೇಶ ಕಂಡ ಅಪರೂಪದ ರಾಜಕಾರಣಿ ಹಾಗೂ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಎಸ್.ಎಂ. ಕೃಷ್ಣ ಅವರು ತಮ್ಮ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಪಂಚಭೂತಗಳಲ್ಲಿ ಲೀನವಾದರು. ಕುಟುಂಬಸ್ಥರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಕರುನಾಡ ಕಣ್ಮಿಣಿಗೆ ಕಣ್ಣೀರಿನ ವಿದಾಯ ಹೇಳಿದರು.

ಇಂದು ಸಂಜೆ ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದಲ್ಲಿರುವ ಕಾಫಿ ಡೇ ಹತ್ತಿರದ ಖಾಲಿ ಜಾಗದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿತು.

ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಪುತ್ರ ಹಾಗೂ ಎಸ್.ಎಂ.ಕೃಷ್ಣ ಅವರ ಮೊಮ್ಮಗ ಅಮರ್ಥ್ಯ ಹೆಗ್ಡೆ ತಾತನ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.

ವೇದಬ್ರಹ್ಮ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ 15 ವೈದಿಕರ ತಂಡದಿಂದ ವಿಧಿ-ವಿಧಾನ ಕಾರ್ಯಗಳು ನಡೆಯಲಿವೆ. ಹಲವು ಯತಿಗಳು, ವಿವಿಧ ಮಠಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಕೃಷ್ಣ ಅವರ ಅಂತ್ಯಕ್ರಿಯೆ ಜರುಗಿತು.

ಇದಕ್ಕು ಮುನ್ನ ಎಸ್ಎಂ ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಆಡಳಿತ ಮತ್ತು ವಿಪಕ್ಷ ನಾಯಕರು ಅಂತಿಮ ನಮನ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌, ಕೇಂದ್ರ ಸಚಿವರಾದ ಎಚ್‌ಡಿ ಕುಮಾರಸ್ವಾಮಿ ಹಾಗೂ ಪ್ರಹ್ಲಾದ್‌ ಜೋಶಿ, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್‌ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಸಚಿವ ಚಲುವರಾಯಸ್ವಾಮಿ, ವಿಧಾನಸಭೆ ಸ್ಪೀಕರ್‌ ಯುಟಿ ಖಾದರ್‌, ಸಿಟಿ ರವಿ, ನಿರ್ಮಲಾನಂದನಾಥಶ್ರೀ, ಆರ್‌ ಅಶೋಕ್‌ ಸೇರಿದಂತೆ ಅನೇಕ ಗಣ್ಯರು ಪುಷ್ಪ ನಮನ ಸಲ್ಲಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್