ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  
ರಾಜ್ಯ

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಯತ್ನಾಳ್ ವಿರುದ್ಧದ ಕೇಸ್ ರದ್ದುಗೊಳಿಸಿದ ಹೈಕೋರ್ಟ್

ತಮ್ಮ ವಿರುದ್ಧ ದಾಖಲಾಗಿದ್ದ ಎಫ್​ಐಆರ್​ ರುದ್ದು ಕೋರಿ ಬಿಜೆಪಿ ಶಾಸಕ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠ, ವಾದ-ಪ್ರತಿವಾದ ಬಳಿಕ ತೀರ್ಪು ಕಾಯ್ದಿರಿಸಿತ್ತು.

ಬೆಂಗಳೂರು: ಕಾಂಗ್ರೆಸ್ ನಾಯಕ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ.

ತಮ್ಮ ವಿರುದ್ಧ ದಾಖಲಾಗಿದ್ದ ಎಫ್​ಐಆರ್​ ರುದ್ದು ಕೋರಿ ಬಿಜೆಪಿ ಶಾಸಕ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠ, ವಾದ-ಪ್ರತಿವಾದ ಬಳಿಕ ತೀರ್ಪು ಕಾಯ್ದಿರಿಸಿತ್ತು. ಇಂದು ಎಫ್ಐಆರ್ ರದ್ದುಗೊಳಿಸಿ ತೀರ್ಪು ನೀಡಿದೆ.

ರಾಹುಲ್ ಗಾಂಧಿ ಜನನದ ಬಗ್ಗೆ ಹೇಳಿಕೆ ನೀಡಿದ್ದ ಯತ್ನಾಳ್ ವಿರುದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.

"ರಾಹುಲ್‌ ಗಾಂಧಿ ವಿದೇಶದಲ್ಲಿ ಕೆಲವು ಹೇಳಿಕೆಗಳನ್ನು ನೀಡಿದ್ದರು. ಅದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆಯಾಗಿ ಅರ್ಜಿದಾರರು ಹೇಳಿಕೆ ನೀಡಿದ್ದಾರೆ. ಆದರೆ, ಪ್ರಕರಣ ಸಂಬಂಧ ದಾಖಲಾಗಿದ್ದ ಎಫ್‌ಐಆರ್‌ನಲ್ಲಿರುವ ಯಾವುದೇ ಆರೋಪ ಸಂಬಂಧಿತ ಅಂಶಗಳು ಇಲ್ಲ. ನಮ್ಮ ಕಕ್ಷಿದಾರರ ಹೇಳಿಕೆಗೆ ಸಂಬಂಧಿಸಿದಂತೆ ಅಸಮಾಧಾನವಾಗಿದ್ದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಬಹುದಾಗಿದೆ. ಅದನ್ನು ಸಮರ್ಥನೆ ಮಾಡಿಕೊಳ್ಳಲಾಗುವುದು" ಎಂದು ಯತ್ನಾಳ್ ಪರ ವಕೀಲರು ವಾದಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್