ಡ್ರೋನ್ ಪ್ರತಾಪ್ 
ರಾಜ್ಯ

ಸೋಡಿಯಂ ಬಳಸಿ ಸ್ಫೋಟ ಪ್ರಕರಣ: ಡ್ರೋನ್​​ ಪ್ರತಾಪ್ ಮೂರು ದಿನ ಪೊಲೀಸ್ ವಶಕ್ಕೆ

ನಿನ್ನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು ಡ್ರೋನ್ ಪ್ರತಾಪ್​ನನ್ನು ಬಂಧಿಸಿದ್ದರು.

ತುಮಕೂರು: ನೀರಿಗೆ ಸೋಡಿಯಂ ಮೆಟಲ್ ಎಸೆದು ಬ್ಲಾಸ್ಟ್ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕನ್ನಡದ ಬಿಗ್​ಬಾಸ್​ ಖ್ಯಾತಿಯ ಡ್ರೋನ್ ಪ್ರತಾಪ್ ಅವರನ್ನು ಮಧುಗಿರಿ ಕೋರ್ಟ್ ಮೂರು ದಿನ ಪೊಲೀಸ್ ವಶಕ್ಕೆ ನೀಡಿ ಶುಕ್ರವಾರ ಆದೇಶಿಸಿದೆ.

ನಿನ್ನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು ಡ್ರೋನ್ ಪ್ರತಾಪ್​ನನ್ನು ಬಂಧಿಸಿದ್ದರು. ಇಂದು ಆರೋಪಿ ಡ್ರೋನ್ ಪ್ರತಾಪ್ ನನ್ನು ಮಧುಗಿರಿಯ ಪ್ರಧಾನ ಹಿರಿಯ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ಸಿ ಕೋರ್ಟ್​ಗೆ ಹಾಜರು ಪಡಿಸಿದರು. ಆರೋಪಿಯ ವಿಚಾರಣೆ ನಡೆಸಿದ ಕೋರ್ಟ್ ಹೆಚ್ಚಿನ ವಿಚಾರಣೆಗಾಗಿ ಡ್ರೋನ್ ಪ್ರತಾಪ್​ನನ್ನು ಮೂರು ದಿನ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದೆ.

ಸೋಡಿಯಂ ಬಳಸಿ ಕೃಷಿ ಹೊಂಡಾದಲ್ಲಿ ಡ್ರೋಣ್ ಪ್ರತಾಪ್ ಸ್ಫೋಟಿಸಿದ್ದರು. ಅಲ್ಲದೆ ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಪೊಲೀಸರು ವಿಡಿಯೋ ಆಧರಿಸಿ ಪ್ರತಾಪ್, ಜಮೀನಿನ ಮಾಲೀಕ ಜಿತೇಂದ್ರ ಜೈನ್​ ಮತ್ತು ಇತರರ ವಿರುದ್ಧ ಬಿಎನ್ಎಸ್ ಕಾಯ್ದೆ ಸೆಕ್ಷನ್ 176, ಸಿಆರ್‌ಪಿಸಿ 158 ಎ ಮತ್ತು ಬಿ ಹಾಗೂ ಸ್ಫೋಟಕ ವಸ್ತುಗಳ ನಿಯಂತ್ರಣ ಕಾಯ್ದೆಯಡಿ ಮಧುಗಿರಿಯ ಮಿಡಿಗೇಶಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರಿನಲ್ಲಿದ್ದ ಡ್ರೋನ್ ಪ್ರತಾಪ್ ಅವರನ್ನು ಮಿಡಿಗೇಶಿ ಪೊಲೀಸರು ಗುರುವಾರ ಬಂಧಿಸಿ ಠಾಣೆಗೆ ಕರೆತಂದು ವಿಚಾರಣೆ ಮುಂದುವರೆಸಿದ್ದಾರೆ.

ಬ್ಲಾಸ್ಟ್​ಗೆ ಬಳಸಿದ್ದ ವಸ್ತುಗಳನ್ನೇಲ್ಲಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದಾದ ಬಳಿಕ ಘಟನಾ ಸ್ಥಳಕ್ಕೆ ತೆರಳಲು ಬಳಸಿದ್ದ ಕಾರು, ಅಲ್ಲಿ ಬಳಸಿದ್ದ ಲ್ಯಾಪ್​ಟಾಪ್, ಮೊಬೈಲ್ ಸೇರಿ ಎಲ್ಲಾ ವಸ್ತುಗಳನ್ನ ಸೀಜ್ ಮಾಡಿದ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ