ಪೊಲೀಸ್ ಪೇದೆ ತಿಪ್ಪಣ್ಣ 
ರಾಜ್ಯ

Police Constable Tippanna ಆತ್ಮಹತ್ಯೆ: ಹೆಂಡತಿ ಕಾಟಕ್ಕೆ ಬೆಂಗಳೂರಿನಲ್ಲಿ ಮತ್ತೊಂದು ಬಲಿ; ಪತ್ನಿ-ಮಾವನ ವಿರುದ್ಧ Death Note!

ಮೂಲಗಳ ಪ್ರಕಾರ ತಿಪ್ಪಣ್ಣ ಬೈಕ್‌ನಲ್ಲಿ ಶುಕ್ರವಾರ ರಾತ್ರಿ 10.45ರ ಸಮಯದಲ್ಲಿ ಬೈಯ್ಯಪ್ಪನಹಳ್ಳಿ ರೈಲ್ವೆ ನಿಲ್ದಾಣ ಬಳಿ ಬಂದಿದ್ದರು. ಬಳಿಕ ರೈಲಿಗೆ ತಲೆ ಕೊಟ್ಟು ಸಾವಿಗೆ ಶರಣಾಗಿದ್ದಾರೆ.

ಬೆಂಗಳೂರು: ಟೆಕ್ಕಿ ಅತುಲ್ ಸುಭಾಷ್‌ ಆತ್ಮಹತ್ಯೆ ಪ್ರಕರಣ ಹಸಿರಾಗಿರುವಂತೆಯೇ ಇತ್ತ ಬೆಂಗಳೂರಿನಲ್ಲಿ ಹೆಂಡತಿ ಕಾಟಕ್ಕೆ ಮತ್ತೊಂದು ಬಲಿಯಾದ ಘಟನೆ ವರದಿಯಾಗಿದೆ.

ತಿಪ್ಪಣ್ಣ ಎಂಬ ಪೊಲೀಸ್ ಪೇದೆ ಬೈಯ್ಯಪ್ಪನಹಳ್ಳಿಯಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ತಿಪ್ಪಣ್ಣ ಬೈಕ್‌ನಲ್ಲಿ ಶುಕ್ರವಾರ ರಾತ್ರಿ 10.45ರ ಸಮಯದಲ್ಲಿ ಬೈಯ್ಯಪ್ಪನಹಳ್ಳಿ ರೈಲ್ವೆ ನಿಲ್ದಾಣ ಬಳಿ ಬಂದಿದ್ದರು.

ಬಳಿಕ ರೈಲಿಗೆ ತಲೆ ಕೊಟ್ಟು ಸಾವಿಗೆ ಶರಣಾಗಿದ್ದಾರೆ. ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ತಿಪ್ಪಣ್ಣ ತಂದೆ ದೂರು ನೀಡಿದ್ದು, ತನ್ನ ಮಗನಿಗೆ ನ್ಯಾಯ ಕೊಡಿಸುವಂತೆ ದೂರಿನಲ್ಲಿ ಕೋರಿದ್ದಾರೆ.

ಡೆತ್ ನೋಟ್

ಆತ್ಮಹತ್ಯೆಗೂ ಮುನ್ನ ತಿಪ್ಪಣ್ಣ ಡೆತ್ ನೋಟ್ ಬರೆದಿಟ್ಟಿದ್ದು, ತಮ್ಮ ಸಾವಿಗೆ ಹೆಂಡತಿ ಹಾಗೂ ಮಾವ ಕಾರಣ. ಹೆಂಡತಿ, ಮಾವ ಕಿರುಕುಳ ನೀಡುತ್ತಿದ್ದಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ ಎನ್ನಲಾಗಿದೆ.

ಅಂತೆಯೇ ಗುರುವಾರ ಕರೆ ಮಾಡಿದಾಗ, ‘ನೀನು ಸತ್ತು ಹೋಗು, ನನ್ನ ಮಗಳು ಚೆನ್ನಾಗಿ ಇರುತ್ತಾಳೆ’ ಎಂದು ಹೇಳಿ ಅವಾಚ್ಯ ಪದಗಳಿಂದ ಮಾವ ನಿಂದಿಸಿದ್ದಾರೆ ಎಂದು ಡೆತ್‌ನೋಟ್‌ನಲ್ಲಿ ತಿಪ್ಪಣ್ಣ ಉಲ್ಲೇಖಿಸಿದ್ದಾರೆ ಎಂದು ಹೇಳಲಾಗಿದೆ.

ಮಾವ-ಪತ್ನಿ ವಿರುದ್ಧ ಪ್ರಕರಣ ದಾಖಲು

ಡೆತ್​ನೋಟ್ ಆಧರಿಸಿ ಹೆಂಡತಿ ಹಾಗೂ ಮಾವನ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಿಎನ್‌ಎಸ್ ಕಾಯ್ದೆ 108 ಸೆಕ್ಷನ್ ಅನ್ವಯ ಆತ್ಮಹತ್ಯೆ ಗೆ ಪ್ರಚೋದನೆ, 351 (3) ಸೆಕ್ಷನ್ ಅನ್ವಯ ಬೆದರಿಕೆ ಹಾಗೂ 352 ಸೆಕ್ಷನ್‌ ಅನ್ವಯ ಉದ್ದೇಶ ಪೂರ್ವಕವಾಗಿ ಅವಮಾನ ಮಾಡಿದ ಪ್ರಕರಣವನ್ನು ದಾಖಲಿಸಲಾಗಿದೆ.

ಅಂದಹಾಗೆ ಬಿಜಾಪುರ ಜಿಲ್ಲೆ ಸಿಂದಗಿ ತಾಲೂಕಿನ ಹಂದಿಗನೂರು ಗ್ರಾಮದ ನಿವಾಸಿ ತಿಪ್ಪಣ್ಣ, ಹುಳಿಮಾವು ಪೋಲಿಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಬೆಂಗಳೂರಿನ ನಾಗನಾತಪುರದ ಕೃಷ್ಣಪ್ಪಲೇಔಟ್​ನಲ್ಲಿ ವಾಸವಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

ಬಿಜೆಪಿ-ಸಿಪಿಐ(ಎಂ) ಹೊಂದಾಣಿಕೆಯಿಂದ ಕೇರಳಕ್ಕೆ ಹೊಸ ಹೆಸರು; ಕೇಂದ್ರ ಬಂಗಾಳವನ್ನು ನಿರ್ಲಕ್ಷಿಸಿದೆ: ಮಮತಾ

SCROLL FOR NEXT