ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್  
ರಾಜ್ಯ

ಮಾರ್ಚ್ ಅಂತ್ಯದೊಳಗೆ ಎಂಇಐ ರಸ್ತೆ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣ: BBMP

ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ತುಷಾರ್ ಗಿರಿನಾಥ್ ಅವರು ಸ್ವೀಕರಿಸಿದರು.

ಬೆಂಗಳೂರು: ಎಂಇಐ ರಸ್ತೆ ವೈಟ್ ಟಾಪಿಂಗ್ ಕಾಮಗಾರಿ ಕಾಾರ್ಯ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು ಶುಕ್ರವಾರ ಹೇಳಿದರು.

ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ತುಷಾರ್ ಗಿರಿನಾಥ್ ಅವರು ಸ್ವೀಕರಿಸಿದರು.

ಬೆಂಗಳೂರಿನ ಪಶ್ಚಿಮ ಭಾಗದ ತುಮಕೂರು ರಸ್ತೆ, ಕಂಠೀರವ ಸ್ಟುಡಿಯೋ ಮುಖ್ಯರಸ್ತೆ ಮತ್ತು ನಂದಿನಿ ಲೇಔಟ್ ನಡುವೆ ಸಂಪರ್ಕ ಕಲ್ಪಿಸುವ ಎಂಇಐ ರಸ್ತೆ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದ್ದುಸ, ಇದರಿಂದ ಸವಾರರಿಗೆ ಸಂಕಷ್ಟ ಎದುರಾಗಿದೆ, ಹೀಗಾಗಿ ಇಲ್ಲಿನ ನಿವಾಸಿಗಳು ಮತ್ತು ವಾಹನ ಸವಾರರು ಕಾಮಗಾರಿ ಕುರಿತು ದೂರು ನೀಡಿದ್ದು, ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸೂಚನೆ ನೀಡಬೇಕೆಂದು ಮನವಿ ಮಾಡಿದರು.

ಸಭೆಯಲ್ಲಿ ಅಧಿಕಾರಿಗಳು ಯಶವಂತಪುರದಲ್ಲಿ 950 ಮೀಟರ್‌ ಉದ್ದದ ಎಂಇಐ ರಸ್ತೆಯಲ್ಲಿ ಸಂಚಾರ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದು ಎರಡು ತಿಂಗಳಿಂದ ವೈಟ್ ಟಾಪಿಂಗ್ ಕಾಮಗಾರಿ ನಡೆಸಲಾಗುತ್ತಿದೆ. ಎರಡೂ ಬದಿಯ ರಸ್ತೆಯನ್ನು ಸಂಪೂರ್ಣವಾಗಿ ಮುಚ್ಚಿ ಕಾಮಗಾರಿ ನಡೆಸಲಾಗುತ್ತಿದೆ. ಈ ರಸ್ತೆಯಲ್ಲಿ ನೀರುಗಾಲುವೆ, ಒಳಚರಂಡಿ ಮಾರ್ಗ, ಡಕ್ಟ್ ಅಳವಡಿಕೆ, ವಿದ್ಯುತ್ ಮಾರ್ಗದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಪಾದಚಾರಿ ಮಾರ್ಗ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.

ಈ ವೇಳೆ ಆಯುಕ್ತರು ಕಾಮಗಾರಿಯನ್ನು 2025ರ ಮಾರ್ಚ್‌ ಅಂತ್ಯಕ್ಕೆ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

ಬಳಿಕ ನಗರದ ಯಶವಂತಪುರ ರೈಲು ನಿಲ್ದಾಣದ ಬಳಿ ಇರುವ ತಣ್ಣೀರಹಳ್ಳ ಹಾಗೂ ರೈಲ್ವೆ ಕ್ವಾರ್ಟರ್ಸ್ ಬಳಿ 200 ಮೀಟರ್ ಉದ್ದದ ಪೈಪ್ ಲೈನ್ ಅಳವಡಿಕೆ ಕಾಮಗಾರಿಯನ್ನು ಮುಖ್ಯ ಆಯುಕ್ತರು ಪರಿಶೀಲನೆ ನಡೆಸಿದರು ಈ ವೇಳೆ ತಗ್ಗು ಪ್ರದೇಶದಲ್ಲಿ ನೀರು ನಿಲ್ಲದಂತೆ ರೂ. 1.5 ಕೋಟಿ ವೆಚ್ಚದಲ್ಲಿ 1.8 ಮೀಟರ್ ಸಿಮೆಂಟ್ ಪೈಪ್ ಅಳವಡಿಸಲಾಗುತ್ತಿದೆ, ಈ ಕಾಮಗಾರಿ ಪೂರ್ಣಗೊಂಡರೆ ಇಲ್ಲಿ ಜಲಾವೃತವಾಗುವುದಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. ಈ ವೇಳೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ವಲಯ ಆಯುಕ್ತ ಸತೀಶ್, ವಲಯ ಜಂಟಿ ಆಯುಕ್ತೆ ಡಾ. ಆರತಿ ಆನಂದ್, ವಲಯ ಮುಖ್ಯ ಎಂಜಿನಿಯರ್ ಸ್ವಯಪ್ರಭಾ, ಕಾರ್ಯನಿರ್ವಾಹಕ ಎಂಜಿನಿಯರ್, ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT