ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮಿ, 
ರಾಜ್ಯ

ಮೀಸಲಾತಿ ಹೋರಾಟ ಅಸಂವಿಧಾನಿಕ ಎಂದು ಹೇಳುವ ಮೂಲಕ ಪಂಚಮಸಾಲಿ ಲಿಂಗಾಯತರಿಗೆ ಸಿಎಂ ಅವಮಾನ ಮಾಡಿದ್ದಾರೆ: ಜಯ ಮೃತ್ಯುಂಜಯ ಸ್ವಾಮಿ

ಬಸವಣ್ಣ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಹೊಗಳುವ ಸಿದ್ದರಾಮಯ್ಯ ಅವರ ಬಗ್ಗೆ ನಮಗೆ ಗೌರವವಿತ್ತು. ಆದರೆ, ಕಳೆದ ಎರಡು ವರ್ಷಗಳಿಂದ ನಮ್ಮ ಬೇಡಿಕೆಯನ್ನು ಹತ್ತಿಕ್ಕುವ ಪ್ರಯತ್ನ ಮಾಡುವ ಮೂಲಕ ಅದು ತಪ್ಪು ಎಂದು ಸಾಬೀತುಪಡಿಸುತ್ತಿದ್ದಾರೆ.

ಬೆಳಗಾವಿ: 2ಎ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟ ಸಂವಿಧಾನ ಬಾಹಿರ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಂಚಮಸಾಲಿ ಲಿಂಗಾಯತರಿಗೆ ಅವಮಾನ ಮಾಡಿದ್ದಾರೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠಾಧಿಪತಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಆವರು ಶನಿವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಣ್ಣ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಹೊಗಳುವ ಸಿದ್ದರಾಮಯ್ಯ ಅವರ ಬಗ್ಗೆ ನಮಗೆ ಗೌರವವಿತ್ತು. ಆದರೆ, ಕಳೆದ ಎರಡು ವರ್ಷಗಳಿಂದ ನಮ್ಮ ಬೇಡಿಕೆಯನ್ನು ಹತ್ತಿಕ್ಕುವ ಪ್ರಯತ್ನ ಮಾಡುವ ಮೂಲಕ ಅದು ತಪ್ಪು ಎಂದು ಸಾಬೀತುಪಡಿಸುತ್ತಿದ್ದಾರೆ. ನಮ್ಮ ಹೋರಾಟ ಅಸಂವಿಧಾನಿಕವಾಗಿದ್ದರೆ ನಮ್ಮ ಹೋರಾಟದಲ್ಲಿ ಭಾಗವಹಿಸಿದ ಸಚಿವರನ್ನು ಅಮಾನತು ಮಾಡಿ. ನೀವು (ಸಿದ್ದರಾಮಯ್ಯ) ನಮಗೆ ಮೀಸಲಾತಿ ನೀಡಲು ಬಯಸದಿದ್ದರೆ, ನಿಮ್ಮ ನಿಲುವನ್ನು ಸ್ಪಷ್ಟಪಡಿಸಿ. ನ್ಯಾಯ ಸಿಗಲು ಬೇರೆ ದಾರಿ ಹುಡುಕುತ್ತೇವೆ. ನಾವು ಜನರ ಬಳಿಗೆ ಹೋಗುತ್ತೇವೆಂದು ಹೇಳಿದರು.

ನಮ್ಮ ಹೋರಾಟವನ್ನು ಅಸಂವಿಧಾನಿಕ ಎಂದು ಹೇಳುವ ಮೂಲಕ ಮುಖ್ಯಮಂತ್ರಿಗಳು ಸಮುದಾಯದವರನ್ನು ಹಾಗೂ ಬಸವಣ್ಣ ಅವರನ್ನು ಅವಮಾನಿಸಿದ್ದಾರೆ. ಸಿದ್ದರಾಮಯ್ಯ ಅವರು ಕೂಡಲೇ ತಮ್ಮ ಹೇಳಿಕೆಯನ್ನು ಹಿಂಪಡೆದು ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು.

ಇದೇ ವೇಳೆ ಹೋರಾಟ ಮುಂದುವರೆಯಲಿದೆ ಎಂದ ಅವರು, ಇನ್ನು ಮುಂದೆ ಇದು ‘ಲಿಂಗಾಯತ ಪಂಚಮಸಾಲಿ ಮಿಸಲತಿ ಕ್ರಾಂತಿ ಹೋರಾಟ’ ಎಂದು ಕರೆಯಲಾಗುವುದು ಎಂದು ತಿಳಿಸಿದರು.

ಲಿಂಗಾಯತರು ಸಂವಿಧಾನವನ್ನು ಓದಿದ್ದಾರೆ. ಅದರಂತೆ ಸೇವೆಯನ್ನು ಮಾಡುತ್ತಿದ್ದಾರೆ. 2020ರಲ್ಲಿ ಮೀಸಲಾತಿಗಾಗಿ ಹೋರಾಟ ಆರಂಭಿಸಿದಾಗ ಕಾಂಗ್ರೆಸ್ ನಾಯಕರು ನಮಗೆ ಬೆಂಬಲ ನೀಡಿದ್ದರು. ಇದೀಗ ವಿರೋಧಿಸುತ್ತಿದ್ದಾರೆ. ಕಾನೂನು ವಿದ್ವಾಂಸರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದು ಸರಿಹೊಂದುವುದಿಲ್ಲ ಎಂದು ಕಿಡಿಕಾರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT