ಸಂಗ್ರಹ ಚಿತ್ರ 
ರಾಜ್ಯ

ಮಂಡ್ಯ: ಜೈಲಿನಲ್ಲಿದ್ದ ಮಗನ ನೋಡಲು ಹೋದ ತಂದೆಯೂ ಅರೆಸ್ಟ್...!

ಜೈಲಿನಲ್ಲಿದ್ದ ಮಧುಸೂದನ್ ​ತಂದೆ ಶಿವಣ್ಣ ಅವರಿಗೆ ಕರೆ ಮಾಡಿ ನನ್ನ ಪರಿಚಿತರೊಬ್ಬರು ಮಳವಳ್ಳಿಯಲ್ಲಿ ಬಟ್ಟೆ ಇದ್ದ ಬ್ಯಾಗ್​ ಕೊಡುತ್ತಾರೆ, ತೆಗೆದುಕೊಂಡು ಬಾ ಎಂದು ಹೇಳಿದ್ದಾನೆ.

ಮಂಡ್ಯ: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋಗಿದ್ದ ತಂದೆ ಕೂಡ ಅರೆಸ್ಟ್​ ಆಗಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ನಿವಾಸಿ ಶಿವಣ್ಣ ಎಂಬುವವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಶಿವಣ್ಣ ತಂದಿದ್ದ ಬ್ಯಾಗ್‌ನಲ್ಲಿ ಗಾಂಜಾ ಪತ್ತೆಯಾಗಿದ್ದು, ಹೀಗಾಗಿ ಅವರನ್ನೂ ಬಂಧಿಸಿದ್ದೇವೆಂದು ಪೊಲೀಸರು ತಿಳಿಸಿದ್ದಾರೆ.

ಜೈಲಿನಲ್ಲಿದ್ದ ಮಧುಸೂದನ್ ​ತಂದೆ ಶಿವಣ್ಣ ಅವರಿಗೆ ಕರೆ ಮಾಡಿ ನನ್ನ ಪರಿಚಿತರೊಬ್ಬರು ಮಳವಳ್ಳಿಯಲ್ಲಿ ಬಟ್ಟೆ ಇದ್ದ ಬ್ಯಾಗ್​ ಕೊಡುತ್ತಾರೆ, ತೆಗೆದುಕೊಂಡು ಬಾ ಎಂದು ಹೇಳಿದ್ದಾನೆ. ಮಗನ ಮಾತಿನಂತೆ ಶಿವಣ್ಣ ಅವರು ಮಳ್ಳವಳ್ಳಿಯಲ್ಲಿ ಅಪರಿಚಿತನಿಂದ ಬಟ್ಟೆ ಇದ್ದ ಬ್ಯಾಗ್​ ಪಡೆದು, ಮಂಡ್ಯದ ಕಾರಾಗೃಹಕ್ಕೆ ಬಂದಿದ್ದಾರೆ.

ಈ ವೇಳೆ ಕಾರಾಗೃಹದಲ್ಲಿನ ಜೈಲು ಸಿಬ್ಬಂದಿ ಬ್ಯಾಗ್​ ಅನ್ನು ಪರಿಶೀಲನೆ ನಡೆಸಿದಾಗ 20 ಗ್ರಾಂ ಗಾಂಜಾ ಪತ್ತೆಯಾಗಿದೆ. ತಕ್ಷಣ ಸಿಬ್ಬಂದಿ ಶಿವಣ್ಣ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಮಗನ ಸೂಚನೆಯಂತೆ ಬ್ಯಾಗ್ ತಂದಿರುವುದಾಗಿ ಶಿವಣ್ಣ ಹೇಳಿದ್ದಾರೆ. ಬಳಿಕ, ಪೊಲೀಸರು ಎನ್​ಡಿಪಿಎಸ್ ಕಾಯ್ದೆಯಡಿ ಶಿವಣ್ಣ ಅವರನ್ನು ಬಂಧಿಸಿದ್ದಾರೆ. ಈ ಸಂಬಂಧ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!