ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಕೆ.ಎಸ್.ಶಿವರಾಮು 
ರಾಜ್ಯ

ಜಯ ಮೃತ್ಯುಂಜಯ ಸ್ವಾಮೀಜಿ BJP ಏಜೆಂಟ್, ನಮ್ಮ ಅನ್ನದ ತಟ್ಟೆಗೆ ಕೈ ಹಾಕಿದ್ರೆ ಕೈ ಕತ್ತರಿಸುತ್ತೇವೆ: ಕೆಎಸ್ ಶಿವರಾಮು ಎಚ್ಚರಿಕೆ

ಬಿಜೆಪಿಯವರು, ಸಿದ್ದರಾಮಯ್ಯ ಅವರ ತಪ್ಪಿಲ್ಲದಿದ್ದರೂ ಮುಡಾ, ವಾಲ್ಮೀಕಿ ನಿಗಮದ ಹಗರಣವನ್ನು ಮುಂದಿಟ್ಟುಕೊಂಡು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನಿಸಿದರು. ಆದರೆ, ಇದರಿಂದ ಪ್ರಯೋಜನ ಆಗದಿದ್ದಕ್ಕೆ ಸ್ವಾಮೀಜಿಯನ್ನು ಎತ್ತಿ ಕಟ್ಟಿದ್ದಾರೆ.

ಬೆಂಗಳೂರು: ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಬಿಜೆಪಿ ಎಜೆಂಟರಂತೆ ವರ್ತಿಸುತ್ತಿದ್ದು, ನಮ್ಮ ಅನ್ನದ ತಟ್ಟೆಗೆ ಕೈ ಹಾಕಿದರೆ ಕೈ ಕತ್ತರಿಸುತ್ತೇವೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಕೆ.ಎಸ್.ಶಿವರಾಮು ಅವರು ಶನಿವಾರ ಎಚ್ಚರಿಕೆ ನೀಡಿದ್ದಾರೆ,

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲೆಂದು ಬಿಜೆಪಿಯವರಿಂದ ಸುಪಾರಿ ತೆಗೆದುಕೊಂಡಿದ್ದವರಂತೆ ವರ್ತಿಸುತ್ತಿದ್ದಾರೆಂದು ವಾಗ್ದಾಳಿ ನಡೆಸಿದರು.

ಕೆಲವು ವರ್ಷಗಳ ಹಿಂದೆಯಷ್ಟೇ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದ ಸ್ವಾಮೀಜಿ ಈಗ ದ್ವೇಷ ಕಾರುತ್ತಿದ್ದಾರೆ. ಬಿಜೆಪಿಯವರು, ಸಿದ್ದರಾಮಯ್ಯ ಅವರ ತಪ್ಪಿಲ್ಲದಿದ್ದರೂ ಮುಡಾ, ವಾಲ್ಮೀಕಿ ನಿಗಮದ ಹಗರಣವನ್ನು ಮುಂದಿಟ್ಟುಕೊಂಡು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನಿಸಿದರು. ಆದರೆ, ಇದರಿಂದ ಪ್ರಯೋಜನ ಆಗದಿದ್ದಕ್ಕೆ ಸ್ವಾಮೀಜಿಯನ್ನು ಎತ್ತಿ ಕಟ್ಟಿದ್ದಾರೆ’ ಎಂದು ದೂರಿದರು.

ಒಂದು ಸಮುದಾಯವನ್ನು ಸಿದ್ದರಾಮಯ್ಯ ವಿರುದ್ಧ ಎತ್ತಿಕಟ್ಟುವ ಷಡ್ಯಂತ್ರ ಸ್ವಾಮೀಜಿ ಅವರದ್ದಾಗಿದೆ. ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಅನುಸರಿಸುತ್ತಿದ್ದಾರೆ. ಜಾತಿ-ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಕೆಲಸದ ಮೂಲಕ ಅಪನಂಬಿಕೆ ಸೃಷ್ಟಿಸುತ್ತಿದ್ದಾರೆ. ಸೌಹಾರ್ದ ಹಾಳಾಗಲೆಂದು ಕುಮ್ಮಕ್ಕು ಕೊಡುತ್ತಿದ್ದಾರೆ. ರಾಜಕೀಯ ಪುಡಾರಿಯ ರೀತಿ ಅವರು ಮಾತನಾಡುತ್ತಿರುವುದು ಸರಿಯಲ್ಲ ಎಂದು ತಿಳಿಸಿದರು.

‘ಲಿಂಗಾಯತ ಪಂಚಮಸಾಲಿ ಸಮಾಜ ಎಲ್ಲ ರೀತಿಯಲ್ಲೂ ಮುಂದುವರಿದಿದೆ. ಅವರನ್ನು ಹಿಂದುಳಿದ ವರ್ಗ-2ಎಗೆ ಸೇರಿಸಲು ನಮ್ಮ ಪ್ರಬಲ ವಿರೋಧವಿದೆ. ಪಂಚಮಸಾಲಿಗಳು ನಮ್ಮ ಆಹಾರವನ್ನು (ಮೀಸಲಾತಿ) ಕಸಿದುಕೊಳ್ಳಲು ನಮ್ಮ ತಟ್ಟೆಯಲ್ಲಿ (2A ವರ್ಗ) ಕೈ ಹಾಕಿದರೆ, ನಾವು ಆ ಕೈಗಳನ್ನು ಕತ್ತರಿಸುತ್ತೇವೆ ಎಂದು ಇದೇ ವೇಳೆ ಎಚ್ಚರಿಸಿದರು.

‘ಸ್ವಾಮೀಜಿಯು ಮುಖ್ಯಮಂತ್ರಿ ಅವರನ್ನು ಅವಹೇಳನ ಮಾಡುತ್ತಿರುವುದು ಖಂಡನೀಯ. ಅವರು ಒಂದು ಸಮಾಜದ ಸ್ವಾಮೀಜಿಯಾ ಅಥವಾ ಎಲ್ಲರಿಗೂ ಸೇರಿದವರಾ ಎಂಬುದನ್ನು ಸ್ಪಷ್ಟಪಡಿಸಲಿ. ಒಂದು ಜಾತಿಯ ಪರವಾಗಿ ಗುರುತಿಸಿಕೊಂಡರೆ ಅಂಥವರು ಸನ್ಯಾಸಿಯಾಗಲು ಯೋಗ್ಯರಲ್ಲ, ಹಗಲುವೇಷ ಹಾಕಿದವರು ಎನ್ನಬೇಕಾಗುತ್ತದೆ ಎಂದು ಟೀಕಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT