ರೌಡಿಶೀಟರ್ ಲೋಕೇಶ್ PTI
ರಾಜ್ಯ

ಬೆಂಗಳೂರು: ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್‌ ಕಾಲಿಗೆ ಗುಂಡಿಕ್ಕಿ ಬಂಧನ!

ಕೊಲೆ, ಸುಲಿಗೆ, ಅಪಹರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ 40 ವರ್ಷದ ಲೋಕೇಶ್ ಎಂಬಾತನ ಎಲ್ಲಿದ್ದಾನೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಪೊಲೀಸರು ಲೋಕೇಶ್ ಗೆ ಶರಣಾಗುವಂತೆ ಕೇಳಿಕೊಂಡಿದ್ದರು.

ಬೆಂಗಳೂರು: ಶರಣಾಗಲು ಒಪ್ಪದೆ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದ ರೌಡಿಶೀಟರ್ ಮೇಲೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಗ್ಗೆ ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾಯಸಂದ್ರ ಬಳಿ ಈ ಘಟನೆ ನಡೆದಿದೆ.

ಕೊಲೆ, ಸುಲಿಗೆ, ಅಪಹರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ 40 ವರ್ಷದ ಲೋಕೇಶ್ ಎಂಬಾತನ ಎಲ್ಲಿದ್ದಾನೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಪೊಲೀಸರು ಲೋಕೇಶ್ ಗೆ ಶರಣಾಗುವಂತೆ ಕೇಳಿಕೊಂಡಿದ್ದರು. ಆದರೆ ಇದಕ್ಕೆ ಒಪ್ಪದೆ ತಪ್ಪಿಸಿಕೊಳ್ಳಲು ಮುಂದಾಗಿದ್ದಾನೆ. ಈ ವೇಳೆ ಅಡ್ಡಬಂದ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದು ಆತ್ಮರಕ್ಷಣೆಯಾಗಿ ಪೊಲೀಸರು ಲೋಕೇಶ್ ನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಸದ್ಯ ಗಾಯಗೊಂಡಿರುವ ಆರೋಪಿ ಲೋಕೇಶ್ ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆತ ಅಪಾಯದಿಂದ ಪಾರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಲೋಕೇಶ್ ಮತ್ತು ಆತನ ಸಹಚರರು ಮತ್ತೊಬ್ಬ ರೌಡಿಶೀಟರ್ ಹತ್ಯೆಗೆ ಯತ್ನಿಸಿದ್ದ ಪ್ರಕರಣದಲ್ಲಿಯೂ ಬೇಕಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT