ಸುಪ್ರೀಂ ಕೋರ್ಟ್ 
ರಾಜ್ಯ

ಮಸೀದಿ ಆವರಣದಲ್ಲಿ 'ಜೈ ಶ್ರೀ ರಾಮ್' ಘೋಷಣೆ ಕೂಗುವುದು ಹೇಗೆ ಅಪರಾಧ?: ಕರ್ನಾಟಕ ಪೊಲೀಸರಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ

ಮಸೀದಿ ಬಳಿ ಜೈ ಶ್ರೀರಾಂ ಘೋಷಣೆ ಕೂಗುವುದು ಹೇಗೆ ಅಪರಾಧ? ಈ ಬಗ್ಗೆ ನಿಮ್ಮ ನಿಲುವು ತಿಳಿಸಿ ಎಂದು ಕರ್ನಾಟಕ ಪೊಲೀಸರಿಗೆ ಸೂಚಿಸಿದೆ.

ನವದೆಹಲಿ: ಮಸೀದಿ ಆವರಣದಲ್ಲಿ ‘ಜೈ ಶ್ರೀ ರಾಮ್’ ಘೋಷಣೆ ಕೂಗುವುದು ಹೇಗೆ ಅಪರಾಧ ಎಂದು ಸುಪ್ರೀಂ ಕೋರ್ಟ್ ಸೋಮವಾರ ಕರ್ನಾಟಕ ಪೊಲೀಸರನ್ನು ಪ್ರಶ್ನಿಸಿದೆ.

ಮಸೀದಿ ಆವರಣದಲ್ಲಿ ಜೈ ಶ್ರೀರಾಮ್ ಎಂದು ಕೂಗಿದ ಆರೋಪದ ಮೇಲೆ ಇಬ್ಬರ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠ, ಮಸೀದಿ ಬಳಿ ಜೈ ಶ್ರೀರಾಂ ಘೋಷಣೆ ಕೂಗುವುದು ಹೇಗೆ ಅಪರಾಧ? ಈ ಬಗ್ಗೆ ನಿಮ್ಮ ನಿಲುವು ತಿಳಿಸಿ ಎಂದು ಕರ್ನಾಟಕ ಪೊಲೀಸರಿಗೆ ಸೂಚಿಸಿದೆ.

ಮಸೀದಿ ಆವರಣದಲ್ಲಿ ಜೈ ಶ್ರೀರಾಂ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗೆ ಧಕ್ಕೆಯಾಗುವುದಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹೈದರ್ ಅಲಿ ಸಿ ಎಂ ಅವರು ಸುಪ್ರೀಂ ಕೋರ್ಟ್ ಮೇಲ್ಮನವಿ ಸಲ್ಲಿಸಿದ್ದಾರೆ.

ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮಸೀದಿಯೊಳಗೆ ಬಂದು ಘೋಷಣೆ ಕೂಗಿದ ವ್ಯಕ್ತಿಗಳನ್ನು ಹೇಗೆ ಗುರುತಿಸಲಾಯಿತು ಎಂದು ದೂರುದಾರರನ್ನು ಪ್ರಶ್ನಿಸಿದೆ.

ಆರೋಪಿಗಳ ಗುರುತು ಖಾತ್ರಿಪಡಿಸಿಕೊಳ್ಳುವ ಮುನ್ನ ಸಿಸಿಟಿವಿ ಇಲ್ಲವೇ ಇನ್ನಾವುದೆ ಪುರಾವೆಗಳನ್ನು ಪರಿಶೀಲಿಸಲಾಗಿದೆಯೇ ಎಂದು ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್‌ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ ಪ್ರಶ್ನಿಸಿತು.

ಅಂತಿಮವಾಗಿ ದೂರುದಾರರು ಸಲ್ಲಿಸಿದ ಮೇಲ್ಮನವಿಯ ಪ್ರತಿಯನ್ನು ರಾಜ್ಯ ಸರ್ಕಾರಕ್ಕೆ ನೀಡುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್ ಪ್ರಕರಣದ ಮುಂದಿನ ವಿಚಾರಣೆಯನ್ನು 2025ರ ಜನವರಿ ತಿಂಗಳಿನಲ್ಲಿ ನಡೆಸುವುದಾಗಿ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಐತ್ತೂರು ಗ್ರಾಮದ ಕಡಬ- ಮರ್ದಾಳ ರಸ್ತೆಯಲ್ಲಿರುವ ಬದ್ರಿಯಾ ಜುಮ್ಮಾ ಮಸೀದಿ ಆವರಣಕ್ಕೆ ನುಗ್ಗಿದ್ದ ಕೀರ್ತನ್ ಕುಮಾರ್ ಮತ್ತು ಸಚಿನ್ ಕುಮಾರ್ ʼಜೈ ಶ್ರೀ ರಾಮ್ʼ ಎಂದು ಕೂಗಿದ್ದರು ಹಾಗೂ ಬ್ಯಾರಿಗಳನ್ನು (ಮುಸ್ಲಿಮರು) ಶಾಂತಿಯಿಂದ ಬದುಕಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು ಎಂಬುದಾಗಿ ಆರೋಪಿಸಲಾಗಿತ್ತು.

ಐಪಿಸಿ ಸೆಕ್ಷನ್‌ 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದ ಕೃತ್ಯಗಳು), 447 (ಅತಿಕ್ರಮಣ) ಮತ್ತು 506 (ಕ್ರಿಮಿನಲ್‌ ಬೆದರಿಕೆ) ಆರೋಪಕ್ಕೆ ಸಂಬಂಧಿಸಿದಂತೆ ಈ ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ತಮ್ಮ ವಿರುದ್ಧದ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ಬಳಿಕ ಅವರಿಬ್ಬರೂ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ